ಮಂಗಳೂರು ವಿ.ವಿ.ಯಲ್ಲಿ 53 ಅಫ್ಘಾನ್ ವಿದ್ಯಾರ್ಥಿಗಳು!
Team Udayavani, Aug 18, 2021, 1:40 AM IST
ಮಂಗಳೂರು: ಅಫ್ಘಾನಿಸ್ಥಾನವು ತಾಲಿಬಾನ್ ಉಗ್ರರ ಕೈವಶ ವಾಗುತ್ತಿದ್ದಂತೆ ಅಲ್ಲಿ ಅಸ್ಥಿರತೆ ಮನೆ ಮಾಡಿದ್ದರೆ, ಇತ್ತ ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಅಫ್ಘಾನಿ ಸ್ಥಾನದ ವಿದ್ಯಾರ್ಥಿಗಳು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.
ಪದವಿಯಲ್ಲಿ 18, ಸ್ನಾತಕೋತ್ತರ ಪದವಿಯಲ್ಲಿ 13, ಪಿಎಚ್‌ಡಿಯಲ್ಲಿ 22 ವಿದ್ಯಾರ್ಥಿಗಳು ಶಿಕ್ಷಣ ಪಡೆಯು ತ್ತಿದ್ದು, ಹಾಸ್ಟೆಲ್‌ಗಳಲ್ಲಿದ್ದಾರೆ. ಇವರು 2-3 ವರ್ಷದ ಹಿಂದೆ ಮಂಗಳೂರಿಗೆ ಶಿಕ್ಷಣಕ್ಕಾಗಿ ಬಂದಿದ್ದರು. ತಮ್ಮ ದೇಶದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಮಾಧ್ಯಮಗಳ ಮೂಲಕ / ಮೊಬೈಲ್ ಕರೆ ಮಾಡಿ ವಿಚಾರಿಸುತ್ತಿ ರುವ ದೃಶ್ಯ ಕಂಡು ಬರುತ್ತಿದೆ. ಕೆಲವು ವಿದ್ಯಾರ್ಥಿಗಳು ದೇಶದ ಪರಿಸ್ಥಿತಿ ಹಾಗೂ ಮನೆ ಮಂದಿಯ ಸಮಸ್ಯೆ- ಸವಾಲುಗಳನ್ನು ಕೇಳಿ ಕಣ್ಣೀರಿಡುತ್ತಿ ದ್ದಾರೆ. ಪ್ರಾಧ್ಯಾಪಕರು, ಸಹಪಾಠಿಗಳ ಜತೆಗೆ ನೋವು ತೋಡಿಕೊಳ್ಳುತ್ತಿದ್ದಾರೆ.
ಮಾತಿಗೆ ನಿರಾಕರಣೆ! :
“ಗಂಭೀರ ಹಾಗೂ ಸೂಕ್ಷ್ಮ ವಿಚಾರ ಇದು’ ಎಂಬ ಕಾರಣ ನೀಡಿ ಮಾಧ್ಯಮದ ಜತೆಗೆ ಮಾತನಾಡಲುಅಫ್ಘಾನ್ ವಿದ್ಯಾರ್ಥಿ ಗಳು ನಿರಾಕರಿಸಿ ದ್ದಾರೆ. ಒಮ್ಮೆ ಮಾತ ನಾಡುವ ಧೈರ್ಯ ತೋರಿದರೂ ಬಳಿಕ “ತಮ್ಮ ಹೇಳಿಕೆ ಯಿಂದ ಅಲ್ಲಿ ಮನೆ ಮಂದಿಗೆ ಸಮಸ್ಯೆ ಆದರೆ?’ ಎಂಬ ಆತಂಕದಿಂದ ಪ್ರತಿಕ್ರಿಯಿಸಲು ಹಿಂಜರಿದರು.
ಕುಲಪತಿ ಪ್ರೊ| ಪಿ.ಎಸ್. ಯಡಪಡಿ ತ್ತಾಯ ಅವರು “ಉದಯವಾಣಿ’ ಜತೆಗೆ ಮಾತನಾಡಿ, ವಿ.ವಿ.ಯಲ್ಲಿ 35 ದೇಶಗಳ 147 ವಿದ್ಯಾರ್ಥಿಗಳು ಭಾರತ ಸರಕಾರದ ಸ್ಕಾಲರ್‌ಶಿಪ್ ಅನುಕೂಲ ದಿಂದ ಉನ್ನತ ಶಿಕ್ಷಣ ಪಡೆಯುತ್ತಿ ದ್ದಾರೆ. ಅವರ ಶಿಕ್ಷಣಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಸದ್ಯ ಅಫ್ಘಾನಿಸ್ಥಾನ ದಲ್ಲಿ ಸಮಸ್ಯೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳು ಕೊಂಚ ಆತಂಕದಲ್ಲಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ವಿ.ವಿ. ಸರ್ವ ವ್ಯವಸ್ಥೆ ಮಾಡಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.