ಬೆಳಗಾವಿ ಜಿಲ್ಲೆಗೆ ಬಂದು ರೌಂಡ್‌ ಹಾಕಿದ ಡಿಜಿ ಸೂದ್‌

ಪೊಲೀಸ್‌ ಅಧಿಕಾರಿಗಳ ಸಭೆ ; ಪೊಲೀಸ್‌ ವಸ್ತು ಸಂಗ್ರಹಾಲಯ ಉದ್ಘಾಟನೆ-ವೀಕ್ಷಣೆ

Team Udayavani, Aug 18, 2021, 3:05 PM IST

ಬೆಳಗಾವಿ ಜಿಲ್ಲೆಗೆ ಬಂದು ರೌಂಡ್‌ ಹಾಕಿದ ಡಿಜಿ ಸೂದ್‌

ಬೆಳಗಾವಿ: ಕರ್ನಾಟಕ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ ಸೂದ್‌ ಅವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.

ಇಲ್ಲಿಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸಭಾಭವನದಲ್ಲಿ ಸಭೆ ನಡೆಸಿದ ಡಿಜಿಪಿ ಪ್ರವೀಣ ಸೂದ್‌ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಹೊಸ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಗೆಯ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಪ್ರವೀಣ ಸೂದ್‌ ಅವರು, ಮುಂದಿನ ದಿನಗಳಲ್ಲಿ ಅಗತ್ಯ ಚಟುವಟಿಕೆಗಳನ್ನು ಕೈಗೊಳ್ಳುವುದರ ಬಗ್ಗೆಯೂ ಅಧಿಕಾರಿಗಳಿಂದ ವರದಿ ಪಡೆದುಕೊಂಡರು. ನಂತರ ಇಲಾಖೆಯಲ್ಲಿಯ ಪ್ರಮುಖ
ಚಟುವಟಿಕೆಗಳ ಬಗ್ಗೆ ಸಮಗ್ರ ವರದಿ ಪಡೆದು ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಹೇಳಿದರು. ಪೊಲೀಸ್‌ ಇಲಾಖೆಯಲ್ಲಿಯ ಆಡಳಿತಾತ್ಮಕ ವಿಷಯಗಳಲ್ಲಿಯ ಪ್ರಮುಖ ಅಂಶಗಳನ್ನು ತಿಳಿದುಕೊಂಡು ಆಯಾ ತಾಲೂಕಿನಲ್ಲಿಯ ಆಡಳಿತದ ಬಗ್ಗೆ ಪರಿಶೀಲನೆ
ನಡೆಸಿದರು.

ಇದನ್ನೂ ಓದಿ:5,375 ಕೋಟಿ ರೂ ಮೊತ್ತದಲ್ಲಿ ‘ಎಫ್‌404–ಜಿಇ–ಐಎನ್‌ 20’ ಎಂಜಿನ್‌ ಖರೀದಿಸಲಿದೆ ಎಚ್‌ಎಎಲ್‌..!

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಕೋವಿಡ್‌-19 ಕಾಲದಲ್ಲಿ ಅಗತ್ಯ ಕ್ರಮ ಕೈಗೊಂಡಿರುವ ಬಗ್ಗೆ ವರದಿ ನೀಡಿದರು. ಜತೆಗೆ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಪೊಲೀಸ್‌ ಇಲಾಖೆ ಕೈಗೊಂಡಿರುವ ಕಾರ್ಯಗಳ ಬಗ್ಗೆ ವಿವರಿಸಿದರು. ನೆರೆಯಲ್ಲಿ ಜನರ ಪ್ರಾಣ ರಕ್ಷಣೆ, ಸಂತ್ರಸ್ತರ ಸ್ಥಳಾಂತರ ಹೀಗೆ ವಿವಿಧ ವಿಷಯಗಳನ್ನು ತಿಳಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಬೆಳಗಾವಿ ಜಿಲ್ಲೆ ಪ್ರವೇಶಿಸುವ ಪ್ರಯಾಣಿಕರ ಕೋವಿಡ್‌-19 ನೆಗೆಟಿವ್‌ ವರದಿ ಕಡ್ಡಾಯವಾಗಿ ಪರಿಶೀಲಿಸಿಯೇ ಬಿಡಲಾಗುತ್ತಿದೆ. ನೆಗೆಟಿವ್‌ ವರದಿ ಇಲ್ಲದವರ ವಾಹನಗಳನ್ನು ವಾಪಸ್‌ ಕಳುಹಿಸಲಾಗುತ್ತಿದೆ. ಕೊಗನೊಳ್ಳಿ, ಕಾಗವಾಡ ಸೇರಿದಂತೆ ಅನೇಕ ಕಡೆಗೆ ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

ಉತ್ತರ ವಲಯ ಐಜಿಪಿ ಸತೀಶಕುಮಾರ್‌ ಸೇರಿದಂತೆ ಜಿಲ್ಲೆಯ ಡಿಎಸ್‌ಪಿ, ಸಿಪಿಐ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಇದ್ದರು.
ಇದಕ್ಕೂ ಮುನ್ನ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ ಸೂದ್‌ ಅವರು ಪೊಲೀಸ್‌ ಕಮೀಷನರೇಟ್‌ ಕಚೇರಿ ಕಟ್ಟಡ ನಿರ್ಮಾಣ ಬಗ್ಗೆ ಪರಿಶೀಲನೆ ನಡೆಸಿದರು.

ನಂತರ ಪೊಲೀಸ್‌ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿ, ವೀಕ್ಷಿಸಿದರು. ಖಾನಾಪುರದ ಪೊಲೀಸ್‌ ತರಬೇತಿ ಶಾಲೆಗೆ ಭೇಟಿ ನೀಡಿದರು. ಪೊಲೀಸ್‌ ಕೇಂದ್ರ ಸ್ಥಾನಕ್ಕೆ ಭೇಟಿ ನೀಡಿ ಪೊಲೀಸ್‌ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವಸತಿಗೃಹಗಳ ನಿರ್ಮಾಣದ ಬಗ್ಗೆ ಪರಿಶೀಲನೆ ನಡೆಸಿದರು

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.