ಭವ್ಯ ಭಾರತ ನಿರ್ಮಾಣಕ್ಕೆ ಮೋದಿ ಅವಿರತ ಶ್ರಮ

5 ಲಕ್ಷ ರೂ. ಸಹಾಯಧನ ಹೀಗೆ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ

Team Udayavani, Aug 18, 2021, 6:09 PM IST

Bhavya-india

ಇಂಡಿ: ಭವ್ಯ ಭಾರತ ನಿರ್ಮಾಣಕ್ಕೆ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಸಾಕಷ್ಟು ಕೊಡುಗೆ ನೀಡಿದೆ ಎಂದು ಬಿಜೆಪಿ ಯುವ ಮೊರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಕುಂಬಾರ ಹೇಳಿದರು. ಪಟ್ಟಣದ ಬಾಬು ಜಗಜೀವನರಾಮ ಭವನದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಮೋದಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ನಂತರ 370ನೇ ವಿಧಿ  ರದ್ದುಗೊಳಿಸುವುದು, ಎಪಿಎಂಸಿ ಕಾಯ್ದೆ, ಸಿಎಎ ಕಾಯ್ದೆ, ತ್ರೀವಳಿ ತಲಾಖ್‌, ಫಸಲ್‌ ಭೀಮಾ ಯೋಜನೆ, ಪಿಎಂ. ಕನ್ಯಾ ಯೋಜನೆ, ಅಟಲ್‌ ಪಿಂಚಣಿ ಯೋಜನೆ, ರಾಜ್ಯದಿಂದ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಎಸ್‌ ಸಿ-ಎಸ್‌ಟಿ ಸಮುದಾಯದ ಬಡ ಜನರಿಗೆ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂ. ಸಹಾಯಧನ ಹೀಗೆ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಎಲ್ಲ ಯೋಜನೆಗಳ ಬಗ್ಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೂತ್‌ ಮಟ್ಟದ ಪ್ರತಿ ಮನೆ-ಮನೆಗೆ ತೆರಳಿ ಜನರಿಗೆ ಪಕ್ಷ ಮಾಡಿದ ಸಾಧನೆ, ಬಡ ಜನರ ಅಭ್ಯುದಯಕ್ಕಾಗಿಯೇ  ಪಕ್ಷ ಜಾರಿಗೆ ತಂದ ಯೋಜನೆಗಳ ಬಗ್ಗೆ ಜನರಿಗೆ ತಿಳಿವಳಿಕೆ ನೀಡಿ ಮುಂಬರುವ ತಾಪಂ ಹಾಗೂ ಜಿಪಂಗೆ ನಡೆಯುವ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಜ್ಜಾಗಬೇಕೆಂದರು. ಬಿಜೆಪಿ ಯುವ ಮೊರ್ಚಾ ತಾಲೂಕಾಧ್ಯಕ್ಷ ಅನಿಲಗೌಡ ಬಿರಾದಾರ ಪ್ರಾಸ್ತಾವಿಕ ಮಾತನಾಡಿ, ಇಂದು ವಿಶ್ವವೇ ಮೆಚ್ಚುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದಲ್ಲಿ ಆಡಳಿತ ನೀಡಿದ್ದಾರೆ.

ಕೋವಿಡ್‌ ಸಂಕಷ್ಟ ಸಮಯದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುವ ಪರಿಸ್ಥಿತಿ ಎದುರಾದರೂ ಮೊದಲು ದೇಶದ ಪ್ರಜೆಗಳ ಜೀವವೇ ಮುಖ್ಯ ಎಂದು ದೇಶಾದ್ಯಂತ ಕಠಿಣ ಲಾಕ್‌ಡೌನ್‌ ಮಾಡಿ ಜನರು ಬದುಕಲು ಕಾರಣೀಕರ್ತರಾದರು ಎಂದರು. ಇಂದು ಬಿಜೆಪಿಗೆ ನೂರಾರು ಕೋಟಿ ಕಾರ್ಯಕರ್ತರಿದ್ದಾರೆ. ಅದರಲ್ಲಿ ಹೆಚ್ಚಿ ಸಂಖ್ಯೆಯಲ್ಲಿ ಯುವಕರಿದ್ದಾರೆ. ಹೀಗಾಗಿ ಈ ಬಾರಿ ಮುಂಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ಪಕ್ಷದಿಂದ ಯುವಕರಿಗೆ ಆದ್ಯತೆ ನೀಡಿ ಟಿಕೆಟ್‌ ನೀಡಲು ವರಿಷ್ಠರಲ್ಲಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದ ಅವರು, ಯುವ ಕಾರ್ಯಕರ್ತರು ಪಕ್ಷದ ತತ್ವ,ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಹೇಳಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಪ್ರಧಾನ ಕಾರ್ಯದರ್ಶಿ ಕಾಂತು ಸಿಂಧೆ, ಸಿದ್ದಲಿಂಗ ಹಂಜಗಿ, ಮಲ್ಲಿಕಾರ್ಜುನ ಕಿವಡೆ, ಕಾಸುಗೌಡ ಬಿರಾದಾರ, ಅನಿಲ ಜಮಾದಾರ, ಶೀಲವಂತ ಉಮರಾಣಿ, ರಾಘವೇಂದ್ರ ಕಾಪ್ಸೆ, ಕಾಂತು ಸಿಂಧೆ, ಪ್ರವೀಣ ಮಠ, ಪ್ರಸಾದ ಮಠ, ರಾಚು ಬಡಿಗೇರ, ಮಲ್ಲನಗೌಡ ಬಿರಾದಾರ, ದೇವೇಂದ್ರ ಕುಂಬಾರ, ಸಚಿನ ಬೊಳೆಗಾಂವ, ವಿಜು ಮೂರಮನ, ತಿಪ್ಪಣ್ಣ ಉಟಗಿ, ಅನಸೂಯಾ ಮದರಿ ಇದ್ದರು.

ಟಾಪ್ ನ್ಯೂಸ್

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.