ಕಾಂಗ್ರೆಸ್‌ಗೆ ಚಲ್ಲಾಟ; ಸಾರ್ವಜಕರಿಗೆ ಸಂಕಟ!

ಎಲ್ಲರೂ ಕಾರುಗಳನ್ನು ತಂದಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಓಡಾಡುವುದು ಕಷ್ಟ ಎನ್ನುವಂತಾಗಿತ್ತು.

Team Udayavani, Aug 18, 2021, 6:15 PM IST

Congress

ರಾಯಚೂರು: ನಗರದ ಹೃದಯ ಭಾಗದ ಸಭಾಂಗಣದಲ್ಲಿ ಕಾಂಗ್ರೆಸ್‌ನ ವಿಭಾಗ ಮಟ್ಟದ ಸಮಾವೇಶ ನಡೆಸಿದ್ದರಿಂದ ಕಾಂಗ್ರೆಸ್‌ಗೆ ಚಲ್ಲಾಟ ಸಾರ್ವಜನಿರಕಗೆ ಸಂಕಟ ಎನ್ನುವಂತಾಗಿತ್ತು. ಟ್ರಾμಕ್‌ ಜಾಮ್‌ ಉಂಟಾಗಿ ಪ್ರಯಾಣಿಕರು ಪರದಾಡಿದರೆ; ಕೋವಿಡ್‌ ನಿಯಮಗಳನ್ನು ಲೆಕ್ಕಿಸದೆ ಗುಂಪು ಸೇರಿದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಬೀಸಬೇಕಾಯಿತು.

ನಗರದ ಗಾಂಧಿ ವೃತ್ತದಲ್ಲಿರುವ ರಾಯಚೂರು ಹಬ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳನ್ನು ಒಳಗೊಂಡಂತೆ ಕಾಂಗ್ರೆಸ್‌ ಪ್ರತಿನಿಧಿಗಳ ಸಭೆ ಆಯೋಜಿಸಲಾಗಿತ್ತು. ಸಭೆಗೆ ಕಾಂಗ್ರೆಸ್‌ ನ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಸೇರಿದಂತೆ ಅನೇಕ ಮುಖಂಡರು ಆಗಮಿಸಿದ್ದರು. ಮುಖಂಡರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರಿಂದ ರಸ್ತೆ ಸಂಪೂರ್ಣ ಕೆಲಕಾಲ ಸಂಚಾರಕ್ಕೆ ಅಡಚಣೆಯಾಯಿತು.

ನಗರದ ಮಾರುಕಟ್ಟೆ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸಂಪರ್ಕ ರಸ್ತೆಯಾದ್ದರಿಂದ ಪ್ರಯಾಣಿಕರಿಗೆ ಪರದಾಡುವಂತಾಯಿತು. ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕರಿಗೆ ಕ್ರೇನ್‌ ಮೂಲಕ ಹಾರ ಹಾಕಲು ಮುಂದಾಗಿದ್ದರಿಂದ ಸಾಕಷ್ಟು ಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಯಿತು. ಪೊಲೀಸರು ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಡುವಂತಾಯಿತು. ಸಭೆಗೆ ಶಾಸಕರು, ಸಂಸದರು, ವಿವಿಧ ಜಿಲ್ಲೆಗಳ ಅಧ್ಯಕ್ಷರು ಸೇರಿದಂತೆ 200ಕ್ಕೂ ಅಧಿಕ ಪ್ರತಿನಿಧಿಗಳು ಆಗಮಿಸಿದ್ದರು. ಎಲ್ಲರೂ ಕಾರುಗಳನ್ನು ತಂದಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಓಡಾಡುವುದು ಕಷ್ಟ ಎನ್ನುವಂತಾಗಿತ್ತು. ಕೊನೆಗೆ ಪೊಲೀಸರು ಕಾರ್ಯಕರ್ತರನ್ನು ಚದುರಿಸಲು ಲಾಠಿ ಬೀಸಬೇಕಾಯಿತು.

ಸಿದ್ದು-ಡಿಕೆಶಿ ಎದುರೇ ಹೈಡ್ರಾಮಾ
ನಗರದಲ್ಲಿ ಹಮ್ಮಿಕೊಂಡ ಕಾಂಗ್ರೆಸ್‌ ವಿಭಾಗೀಯ ಸಭೆಗೆ ಆಗಮಿಸಿದ ಕಾಂಗ್ರೆಸ್‌ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಎದುರೇ ಕಾರ್ಯಕರ್ತರು ಅತಿರೇಕದ ಅಭಿಮಾನ ತೋರುವ ಮೂಲಕ ಮುಖಂಡರಿಗೆ ಮುಜುಗುರ ಉಂಟು ಮಾಡಿದರು. ನಗರದ ಕಾಂಗ್ರೆಸ್‌ ಕಚೇರಿಗೆ ಮುಖಂಡರು ಬರುತ್ತಿದ್ದಂತೆ ಕಾರ್ಯಕರ್ತರು ಕೋವಿಡ್‌ ನಿಯಮಗಳನ್ನು  ಸಂಪೂರ್ಣ ಗಾಳಿಗೆ ನೂಕು ನುಗ್ಗಲು ಮಾಡಿದರು.

ಜೋರಾಗಿ ಘೋಷಣೆ ಕೂಗಿದ್ದಲ್ಲದೇ ಪಕ್ಷದ ಕಚೇರಿಯೊಳಗೆ ಮುಖಂಡರನ್ನು ಮೇಲೆತ್ತಿ ಕುಣಿದು ಕುಪ್ಪಳಿಸಿದರು. ಕೋವಿಡ್‌ 3ನೇ ಅಲೆ ನಿಯಂತ್ರಣದ ಬಗ್ಗೆ ಸರ್ಕಾರದ ವಿರುದ್ಧ ಟೀಕೆ ಮಾಡುವ ಕಾಂಗ್ರೆಸ್‌ ನಾಯಕರು ಮಾತ್ರ ಕೊರೊನಾ ಬಗ್ಗೆ ಕಿಂಚಿತ್ತೂ ಯೋಚಿಸದಿರುವುದು ವಿಪರ್ಯಾಸ. ಬಹುತೇಕ ಕಾರ್ಯಕರ್ತರು ಮಾಸ್ಕ್ ಹಾಕಿರಲಿಲ್ಲ. ಅಲ್ಲದೇ, ಸುಮಾರು 10 ನಿಮಿಷಗಳ ಕಾಲ ಒಂದೇ ಸಮನೆ ಹಾರಾಟ ಚೀರಾಟ ನಡೆಸಿದ್ದು ನೆರೆದವರಲ್ಲಿ ಬೇಸರ ತರಿಸಿತು. ಅಷ್ಟೇ ಅಲ್ಲದೇ ಬೈಕ್‌ಗಳ ಸೈಲೆನ್ಸರ್‌ ತೆಗೆದು ನಗರದಲ್ಲಿ ವಿವಿಧೆಡೆ ಸಾಕಷ್ಟು ಹೊತ್ತು ಬೈಕ್‌ರ್ಯಾಲಿ ನಡೆಸಿದ್ದು ಸಾರ್ವಜನಿಕರಿಗೆ ಕಿರಿಕಿರಿ ಎನಿಸಿತು.

ಟಾಪ್ ನ್ಯೂಸ್

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.