ಮಂಡ್ಯ: ಸಂಸದೆ, ಶಾಸಕರ ನಡುವೆ ಮಾತಿನ ಜಟಾಪಟಿ
Team Udayavani, Aug 18, 2021, 9:00 PM IST
ಮಂಡ್ಯ: ಕೋವಿಡ್ 3ನೇ ಅಲೆ ಭೀತಿ ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ಚರ್ಚೆ ಹಾಗೂ ಪರಿಹಾರ ಕಂಡುಕೊಳ್ಳಬೇಕಾದ ಸಭೆಯನ್ನು ಜನಪ್ರತಿನಿಧಿ ಗಳು ತಮ್ಮ ವೈಯಕ್ತಿಕ ಟೀಕೆಗಳಿಗೆ ಬಳಸಿಕೊಂಡ ಘಟನೆ ಬುಧವಾರ ನಡೆದಿದೆ.
ಜಿ.ಪಂ. ಸಭಾಂಗಣದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಧ್ಯಕ್ಷತೆಯಲ್ಲಿ ದಿಶಾ ಸಭೆ ನಿಗದಿಪಡಿಸಲಾಗಿತ್ತು. ಸಂಸದರ ಲೆಟರ್ ಹೆಡ್ ದುರ್ಬಳಕೆ, ಸಂಬಂಧಪಡದವರು ಸಭೆಯಲ್ಲಿ ಹಾಜರು, ಸಭೆ ನಡೆಸುತ್ತಿರುವುದೇ ಅಕ್ರಮ ಎಂಬ ವಿಷಯದಲ್ಲಿ ಚರ್ಚೆ, ಮಾತಿನ ಚಕಮಕಿ ನಡೆದು ಸುಮಾರು 2 ಗಂಟೆ ವಿಳಂಬವಾಗಿ ಸಭೆ ಆರಂಭವಾಯಿತು.
ಮಾತಿನ ಚಕಮಕಿ
ನೀವು ಎಂಎಲ್‌ಎ ಆದರೆ, ನಾನು ಎಂಪಿ. ಸಭೆ ಕರೆದಿರುವುದು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು. ಸುಮ್ಮನೆ ಅನಗತ್ಯ ಚರ್ಚೆಗಳಿಗೆ ಸಮಯ ಕಳೆಯುವುದಕ್ಕಲ್ಲ ಎಂದು ಸಂಸದೆ ಸುಮಲತಾ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿರುಗೇಟು ನೀಡಿದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು.
ಜೆಡಿಎಸ್ ಶಾಸಕರು ಹಾಜರು
ದಿಶಾ ಸಭೆಗೆ ಇದೇ ಮೊದಲ ಬಾರಿಗೆ ಜೆಡಿಎಸ್ ಶಾಸಕರು ಹಾಜರಾಗಿದ್ದರು. ಕಳೆದ 8 ಸಭೆಗಳಿಗೆ ಗೈರು ಹಾಜರಾಗಿದ್ದ ಶಾಸಕರು, ಬುಧವಾರ ಸಭೆ ಆರಂಭವಾಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದರು. ಅಲ್ಲದೆ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎನ್. ಅಪ್ಪಾಜಿಗೌಡ ಅವರು ಆಹ್ವಾನವಿಲ್ಲದಿದ್ದರೂ ಹಾಜರಾಗಿದ್ದರು. ಆಹ್ವಾನ ನೀಡದ ಬಗ್ಗೆ ಕೆ.ಟಿ. ಶ್ರೀಕಂಠೇಗೌಡ ಪ್ರಸ್ತಾಪ ಮಾಡಿದಾಗ ಸಭೆಯಲ್ಲಿ ಗೊಂದಲ ಉಂಟಾಯಿತು.
ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯು ವೈಜ್ಞಾನಿಕ ರೀತಿಯಲ್ಲಿ ಸಾಗುತ್ತಿಲ್ಲ. ಕೆಲವೆಡೆ ಸರ್ವೀಸ್ ರಸ್ತೆಗಳು, ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಮತ್ತು ಹೊರ ಹೋಗುವ ಅಂಡರ್ ಪಾಸ್‌ಗಳ ಸಂಪರ್ಕ ವ್ಯವಸ್ಥೆಯನ್ನು ಕೈಬಿಡಲಾಗಿದೆ. ಕೇಂದ್ರ ಭೂ ಸಾರಿಗೆ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಅವ್ಯವಸ್ಥೆಗಳ ಕುರಿತಾಗಿ ಚರ್ಚಿಸಲಾಗಿದೆ.
-ಸುಮಲತಾ ಅಂಬರೀಶ್, ಸಂಸದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.