ಜಿಲ್ಲೆಯ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಭಾರೀ ಬೇಡಿಕೆ! 


Team Udayavani, Aug 20, 2021, 3:30 AM IST

ಜಿಲ್ಲೆಯ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಭಾರೀ ಬೇಡಿಕೆ! 

ಉಡುಪಿ: ಜಿಲ್ಲೆಯಲ್ಲಿ ಈ ಬಾರಿ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರ್ಪಡೆ ಯಾಗುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ ಸರಕಾರಿ ಶಾಲೆಗಳು ಮರುಜೀವ ಪಡೆದುಕೊಂಡಿದೆ.

ಸರಕಾರಿ ಶಾಲೆಯಲ್ಲಿ ಆಂಗ್ಲ ಶಿಕ್ಷಣ ಪ್ರಾರಂಭಗೊಂಡಿದ್ದು, ಜಿಲ್ಲೆಯ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ, ಒಂದನೇ ತರಗತಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಸರಕಾರದ ನಿಯಮಾನುಸಾರ 30 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರ ಅನುಪಾತಕ್ಕೆ ಅನುಗುಣವಾಗಿ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಬಹುದು. ಒಂದನೇ ತರಗತಿಗೆ 30ಕ್ಕಿಂತ ಅಧಿಕ ಅರ್ಜಿಗಳು ಬಂದಿರುವ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿಭಾಗ ಪ್ರಾರಂಭಿಸುವ ಕುರಿತು ಚಿಂತನೆ ನಡೆಯುತ್ತಿದೆ. ಶಾಲೆಗಳು ಹೊಸದಾಗಿ ಶಿಕ್ಷಕರನ್ನು ನೇಮಿಸುವ ಕುರಿತು ಎಸ್‌ಡಿಎಂಸಿಗೆ ಪ್ರಸ್ತಾವನೆ ಸಲ್ಲಿಸಿವೆ.

8 ಶಾಲೆಗಳು ಕೆಪಿಎಸ್‌ಗಳಾಗಿ ಆಯ್ಕೆ :

ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಮತ್ತು ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿಯೂ ಸಿಗಬೇಕೆಂಬ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳಡಿ (ಕೆಪಿಎಸ್‌) ನೋಂದಾಯಿಸಲ್ಪಟ್ಟ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 599 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಒಟ್ಟು 8 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಕೆಪಿಎಸ್‌ಗಳಾಗಿ ಆಯ್ಕೆಯಾಗಿವೆ.

ಕೆಪಿಎಸ್‌ ಶಾಲೆ ಸೌಲಭ್ಯ:

ಕೆಪಿಎಸ್‌ಗಳಲ್ಲಿ ಶಾಲಾ ಹಂತದಲ್ಲಿಯೇ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು, ವಿದ್ಯಾರ್ಥಿಗಳ ಬೋಧನೆಗೆ ಸುಸಜ್ಜಿತ ಕೊಠಡಿ, ವ್ಯವಸ್ಥಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್‌ ಲ್ಯಾಬ…, ಗುಣಮಟ್ಟದ ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಹೊಂದಿರುತ್ತದೆ.

ಜಿಲ್ಲೆಯಲ್ಲಿ ಸರಕಾ ರಿ ಆಂಗ್ಲ ಮಾಧ್ಯ ಮಕ್ಕೆ ದಾಖಲಾತಿ ಪ್ರಮಾಣ:

ಶೈಕ್ಷ ಣಿಕ ವರ್ಷ          2020-21         2021-22

ಶಾಲೆ ಹೆಸರು   ಎಲ್‌ಕೆಜಿ         ಯುಕೆಜಿ          1ನೇ ತ.            ಎಲ್‌ಕೆಜಿ         ಯುಕೆಜಿ          1ನೇ ತ.

ಸ. ಕೊಕ್ಕರ್ಣೆ  40        41        42        40        50        72

ಸ. ವಂಡ್ಸೆ       30        33        27        25        28        16

ಸ. ಮುನಿಯಾಲು       37        48        50        34        58        50

ಸ.ಹೊಸ್ಮಾರು 14        26        15        11        31        19

ಸ. ಕೋಟೇಶ್ವರ          33        30        36        36        33        72

ಸ. ಬಿದ್ಕಲ್‌ಕಟ್ಟೆ         26        34        68        26        60        62

ಸ.ಹಿರಿಯಡ್ಕ  76        60        40        53        90        77

ಸ. ಪಡುಬಿದ್ರಿ 12        12        13        40        41        28

1,055 ವಿದ್ಯಾರ್ಥಿಗಳು ಸೇರ್ಪಡೆ  : ಜಿಲ್ಲೆಯಲ್ಲಿ ಕೆಪಿಎಸ್‌ ದಾಖಲಾತಿಯಲ್ಲಿ ಉಡುಪಿ ವಲಯದಲ್ಲಿ 329, ಕುಂದಾಪುರ ವಲಯದಲ್ಲಿ 289, ಕಾರ್ಕಳ 203, ಬ್ರಹ್ಮಾವರ ವಲಯದಲ್ಲಿ 231 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು  1,055 ವಿದ್ಯಾರ್ಥಿಗಳು ಎಲ್‌ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಪ್ರಸ್ತುತ ಕೆಲವು ಕೆಪಿಎಸ್‌ ಶಾಲೆಗಳಲ್ಲಿ ನೋಂದಣಿ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ದಾಖಲಾತಿ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. 2020-21ನೇ ಸಾಲಿನಲ್ಲಿ ಕೆಪಿಎಸ್‌ ದಾಖಲಾತಿಯಲ್ಲಿ ಉಡುಪಿ ವಲಯದಲ್ಲಿ 213, ಕುಂದಾಪುರ ವಲಯದಲ್ಲಿ 227, ಕಾರ್ಕಳ 190, ಬ್ರಹ್ಮಾವರ ವಲಯದಲ್ಲಿ 213 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 843 ವಿದ್ಯಾರ್ಥಿಗಳು ಎಲ್‌ಕೆಜಿ ಯುಕೆಜಿ ಹಾಗೂ ಒಂದನೇ ತರಗತಿಯಲ್ಲಿ ನೋಂದಾಯಿಸಿಕೊಂಡಿದ್ದರು.

ಕೊರೊನಾ ಮುನ್ನ ಕೆಲಸ ಮಾಡಿಕೊಂಡು ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಕಳುಹಿಸುತ್ತಿದ್ದೆ ವು. ಆದರೆ ಕೊರೊನಾ ಲಾಕ್‌ಡೌನ್‌ನಿಂದ ಉದ್ಯೋಗವಿಲ್ಲದ ಕಾರಣದಿಂದ ಸರಿಯಾದ ಸಮಯಕ್ಕೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಇದೀಗ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದು ಸಂತೋಷದ ವಿಷಯ.– ಕೃಷ್ಣ , ಉಡುಪಿ ನಿವಾಸಿ

ಜಿಲ್ಲೆಯಲ್ಲಿ ಕೆಪಿಎಸ್‌ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಗೆ 1,055 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಕಳೆದ ಬಾರಿ 843 ಮಕ್ಕಳ ಸೇರ್ಪಡೆಯಾಗಿದ್ದರು. ಸರಕಾರಿ ಆಂಗ್ಲ ಮಾಧ್ಯಮಾ ಶಾಲೆಗಳಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆ.– ಎನ್‌. ಎಚ್‌. ನಾಗೂರ, ಡಿಡಿಪಿಐ, ಉಡುಪಿ

 

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.