ಎನ್‌ಇಪಿಗೆ ಆಕ್ಷೇಪ ಸರಿಯಲ್ಲ: ಅಶ್ವತ್ಥನಾರಾಯಣ


Team Udayavani, Aug 20, 2021, 6:54 AM IST

ಎನ್‌ಇಪಿಗೆ ಆಕ್ಷೇಪ ಸರಿಯಲ್ಲ: ಅಶ್ವತ್ಥನಾರಾಯಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದ ಬೆಳವಣಿಗೆಯ ಸ್ವರೂಪವೇ ಬದಲಾಗಲಿದ್ದು, ವಿನಾಕಾರಣ ಈ ನೀತಿ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕೇಂದ್ರ ಸಚಿವರ ಜನಾಶೀ ರ್ವಾದ ಯಾತ್ರೆ ನಿಮಿತ್ತ  ಜರಗಿದ ಬುದ್ಧಿಜೀವಿಗಳು ಮತ್ತು ವಿವಿಧ ಕ್ಷೇತ್ರಗಳ ವೃತ್ತಿಪರರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ನೀತಿ ರಚನೆ ಹಿಂದೆ ಅನೇಕ ಶ್ರೇಷ್ಠ ಮಿದುಳುಗಳು ಕೆಲಸ ಮಾಡಿವೆ. ಕನ್ನಡಿಗ  ಡಾ| ಕಸ್ತೂರಿ ರಂಗನ್‌  ನೇತೃತ್ವದಲ್ಲಿ ನಮ್ಮ ನಾಡಿನ ಹೆಸರಾಂತ ತಜ್ಞರು, ವಿಜ್ಞಾನಿಗಳು, ಶಿಕ್ಷಣ ಕ್ಷೇತ್ರದ ನಿಪುಣರು ಅಹರ್ನಿಷಿ ದುಡಿದಿ¨ªಾರೆ. ಐದೂವರೆ ವರ್ಷ ಕಾಲ ನಿರಂತರ ಅಧ್ಯಯನ, ಸಂವಾದದಿಂದ ಈ ನೀತಿ ರೂಪಿತವಾಗಿದೆ ಎಂದರು.

ಸಾಂಪ್ರದಾಯಿಕವಾದ ಶಿಕ್ಷಣ ಪದ್ಧತಿಯಿಂದ ಕುಶಲತೆ ಹಾಗೂ ಜ್ಞಾನಕ್ಕೆ ಬರ ಉಂಟಾಗಿತ್ತು. ಅದನ್ನು ಶಿಕ್ಷಣ ನೀತಿ ನೀಗಿಸುತ್ತಿದೆ.  ಇಡೀ ದೇಶಕ್ಕೆ ಹೊಸ ತಿರುವು, ವೇಗ ನೀಡಬಲ್ಲ ಶಿಕ್ಷಣ ನೀತಿ ಬಗ್ಗೆ ಕೆಲವರಿಗೆ ತಿಳಿಯುತ್ತಿಲ್ಲ. ಅಂಥವರು ಮೊದಲು ನೀತಿಯನ್ನು  ಅಧ್ಯಯನ ಮಾಡಬೇಕು. ಇದುವರೆ ಗಿನ ಶಿಕ್ಷಣ ಪದ್ಧತಿ ಹೇಗಿತ್ತೆಂದರೆ, ನಾವು ಹೇಳಿದ್ದನ್ನು ಮಕ್ಕಳು ಕಲಿಯುತ್ತಿದ್ದರು. ಈ ಸಾಂಪ್ರದಾಯಿಕ ಪದ್ಧತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ತಿಲಾಂಜಲಿ ಇಡುತ್ತಿದೆ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಂಪೂರ್ಣ ಸ್ವಾತಂತ್ರÂ ವಿದೆ. ಬಹು ಶಿಸ್ತೀಯ, ಬಹ ಆಯ್ಕೆಯ ವಿಷಯಾಧಾರಿತ ಕಲಿಕೆಯೇ ಈ ಶಿಕ್ಷಣ ನೀತಿಯ ಆತ್ಮ. ಮಾತೃಭಾಷೆ  ಕಲಿಕೆಗೂ ಇಲ್ಲಿ  ಮಾನ್ಯತೆ ಕೊಡಲಾಗಿದೆ ಎಂದು ಹೇಳಿದರು.  ಕೇಂದ್ರ ಕೌಶಲಾಭಿವೃದ್ಧಿ ಸಚಿವ ರಾಜೀವ್‌ ಚಂದ್ರಶೇಖರ್‌ ಉಪಸ್ಥಿತರಿದ್ದರು.

ಎನ್‌ಇಪಿಯಿಂದ  ಬದಲಾವಣೆ :  ಸಚಿವ ನಾಗೇಶ್‌

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಬದಲಾವಣೆಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್‌ (ನ್ಯಾಕ್‌) ಹೊರ ತಂದಿರುವ  ಸುದ್ದಿಪತ್ರವನ್ನು ಗುರುವಾರ ಬಿಡುಗಡೆ ಮಾಡಿ  ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಬದಲಾವಣೆ ತರಬೇಕು. ಅದರ ಮೂಲಕ ವ್ಯಕ್ತಿತ್ವ ವಿಕಸನವಾಗಬೇಕು ಎಂದು ಅನೇಕರು ಕನಸು ಕಂಡಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ ಅದಕ್ಕೆ ಪೂರಕವಾಗಿದೆ. ಇದರ  ಅನುಷ್ಠಾನದಿಂದ ಇನ್ನಷ್ಟು ಪರಿಣಾಮಕಾರಿ ಬದಲಾವಣೆ ಆಗಲಿದೆ ಎಂದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.