ಪಿಯು ಕಾಲೇಜುಗಳ ಆರಂಭ: ಎಚ್ಚರಿಕೆ ಇರಲಿ

Team Udayavani, Aug 20, 2021, 6:00 AM IST

ಪಿಯು ಕಾಲೇಜುಗಳ ಆರಂಭ: ಎಚ್ಚರಿಕೆ ಇರಲಿ

ಆ.23ರಂದು ರಾಜ್ಯಾದ್ಯಂತ 9 ರಿಂದ ದ್ವಿತೀಯ ಪಿಯುಸಿ ವರೆಗೆ ಶಾಲಾ-ಕಾಲೇಜುಗಳು ಆರಂಭವಾಗುತ್ತಿವೆ. ಮೂರ್ನಾಲ್ಕು ದಿನಗಳ ಹಿಂದೆಯೇ ಪ್ರೌಢಶಾಲೆಗಾಗಿ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದ ರಾಜ್ಯ ಸರಕಾರ, ಬುಧವಾರವಷ್ಟೇ ಪಿಯು ಕಾಲೇಜುಗಳ ಆರಂಭಕ್ಕೂ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇದರ ಪ್ರಕಾರ, ದಿನಕ್ಕೆ ಶೇ.50 ವಿದ್ಯಾರ್ಥಿಗಳಿಗಷ್ಟೇ ಕಾಲೇಜಿಗೆ ಬರಲು ಅನುಮತಿಸಲಾಗಿದೆ. ಅಂದರೆ ವಿದ್ಯಾರ್ಥಿಗಳನ್ನು ತಂಡಗಳನ್ನಾಗಿ ಮಾಡಿ, ಒಂದೊಂದು ದಿನ ಒಂದೊಂದು ತಂಡಕ್ಕೆ ಕಾಲೇಜಿಗೆ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಸದ್ಯದ ಕೊರೊನಾ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರದ ಈ ಕ್ರಮ ಸ್ವಾಗತಾರ್ಹವೇ ಆಗಿರುವಂಥದ್ದು.

ಅಷ್ಟೇ ಅಲ್ಲ ಪ್ರೌಢಶಾಲೆ ಮಟ್ಟದಲ್ಲೂ ಹೇಳಿದಂತೆ ಇಲ್ಲೂ ಶೇ.2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಡೆಗಳಲ್ಲಿ ಕಾಲೇಜು ಆರಂಭಿಸುವುದಿಲ್ಲ ಎಂದೂ ಹೇಳಿದೆ. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿÇÉೆಗಳಲ್ಲಿ ಆನ್‌ಲೈನ್‌, ಪೂರ್ವ ಮುದ್ರಿತ ವೀಡಿಯೋ ಬೋಧನೆ ಮುಂದುವರಿಸಲು ಇಲಾಖೆ ಸೂಚನೆ ನೀಡಿದೆ.

ದಿನ ಬಿಟ್ಟು ದಿನ ಕಾಲೇಜು ನಡೆಸುವ ವಿಚಾರದಲ್ಲೂ ಸರಕಾರ, ಸೂಕ್ಷ್ಮಮತಿಯಾಗಿ ವರ್ತಿಸಿದೆ. ಅಂದರೆ ಸೋಮವಾರ , ಮಂಗಳವಾರ ಹಾಗೂ ಬುಧವಾರ ಭೌತಿಕ ತರಗತಿಗಳಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಉಳಿದ ದಿನಗಳಲ್ಲಿ ಆನ್‌ಲೈನ್‌ ಅಥವಾ ಪೂರ್ವ ಮುದ್ರಿತ ವೀಡಿಯೋ ತರಗತಿ ಇರಲಿದೆ. ಹಾಗೆಯೇ ಗುರುವಾರ, ಶುಕ್ರವಾರ, ಶನಿವಾರ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೂ ಇದೇ ನಿಯಮ ಅನ್ವಯವಾಗಲಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆಯಿದ್ದು, ವಿಶಾಲವಾದ ಕೊಠಡಿಗಳು ಲಭ್ಯವಿದ್ದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಮಾರ್ಗಸೂಚಿ ಅನ್ವಯ ನಡೆಸಲು ಅವಕಾಶವಿದೆ.

ಇದರ ಮಧ್ಯೆಯೇ ಕಾಲೇಜಿಗೆ ಬರುವ ಸಿಬಂದಿ ಕನಿಷ್ಠ ಒಂದಾದರೂ ಕೊರೊನಾ ಲಸಿಕೆ ಪಡೆದಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂದರೆ ಇದು ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬಂದಿಗೆ ಅನ್ವಯವಾಗಲಿದೆ. ಹೀಗಾಗಿ ತರಗತಿ ಆರಂಭವಾಗುವ ಮೊದಲೇ ಇವರೆಲ್ಲ ಲಸಿಕೆ ಪಡೆಯುವಲ್ಲಿ ಮತ್ತು ಸರಕಾರವೂ ಆದ್ಯತೆ ಮೇರೆಗೆ ಇವರಿಗೆ ಲಸಿಕೆ ಕೊಡಿಸಲು ಮುಂದಾಗಬೇಕು.

ಸುಮಾರು ಆರು ತಿಂಗಳ ಬಳಿಕ ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದಾರೆ. ವಿಶೇಷವೆಂದರೆ ಪ್ರಥಮ ಪಿಯುಸಿಗೆ ಬರುವ ಮಕ್ಕಳಂತೂ ಶಾಲೆಗೆ ಹೋಗಿ ಹಲವು ತಿಂಗಳುಗಳೇ ಕಳೆದಿವೆ. ಇವರು ಈಗ ಕಾಲೇಜಿಗೆ ಬರುತ್ತಿದ್ದು, ಇವರ ಸಂಭ್ರಮವೂ ಹೆಚ್ಚಾಗಿಯೇ ಇರುತ್ತದೆ. ಹೀಗಾಗಿ ಮಕ್ಕಳ ಮೇಲೆ ಕಾಲೇಜುಗಳು ಹೆಚ್ಚಿನ ನಿಗಾ ಇಡುವುದು ಇಂದಿನ ಪರಿಸ್ಥಿತಿಯಲ್ಲಿ ಅತ್ಯಗತ್ಯ. ಹಾಗೆಯೇ ಕೊರೊನಾ ಸಂಬಂಧಿತ ಎಲ್ಲ ನಿಯಮಗಳನ್ನು ಚಾಚೂತಪ್ಪದೇ ಪಾಲನೆ ಮಾಡಬೇಕಾದುದು ಕಾಲೇಜುಗಳ ಆದ್ಯ ಕರ್ತವ್ಯ. ಇನ್ನು 7 ಮತ್ತು 8ನೇ ತರಗತಿ ಆರಂಭಕ್ಕೂ ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ. ಒಂದು ಲೆಕ್ಕಾಚಾರದಲ್ಲಿ ಇವರಿಗೂ ಶಾಲೆ ಆರಂಭಿಸುವುದು ಸೂಕ್ತ ಎಂದು ಕಂಡುಬಂದರೂ, ಅವಸರ ಮಾಡಿಕೊಳ್ಳದೇ ಇರುವುದು ಒಳಿತು. ಮೊದಲಿಗೆ 9ರಿಂದ ದ್ವಿತೀಯ ಪಿಯುವರೆಗೆ ತರಗತಿ ಆರಂಭಿಸಿ, ಇದರ ಸಾಧಕ-ಬಾಧಕಗಳ ಬಗ್ಗೆ ನೋಡಿ ಅನಂತರ ಉಳಿದ ತರಗತಿಗಳನ್ನು ಆರಂಭಿಸುವುದು ಲೇಸು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Editorial: ನೈಜ ಕ್ರೀಡಾ ಸಾಧಕರಿಗೆ ಸಂದ ದೇಶದ ಅತ್ಯುನ್ನತ ಕ್ರೀಡಾ ಗೌರವ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

2025; May the mantra of peace and coexistence resonate throughout the world

Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ

Exam

ಕೆಪಿಎಸ್‌ಸಿ ಲೋಪಗಳಿಲ್ಲದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿ

JAmmu

Jammu-Kashmir: ಉಗ್ರರನ್ನು ಮಟ್ಟ ಹಾಕಿದ‌ ಭದ್ರತಾ ಪಡೆಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.