ಆನೆಗಳು ಕಾಡಿನಲ್ಲಿರಬೇಕು, ದೇವಸ್ಥಾನದಲ್ಲಲ್ಲ; ಪೂಜಾಕಾರ್ಯಕ್ಕೆ ಬಳಸುವುದು ಕ್ರೌರ್ಯ:ಹೈಕೋರ್ಟ್
Team Udayavani, Aug 20, 2021, 9:33 AM IST
ಬೆಂಗಳೂರು: ನಗರದ ತಿಂಡ್ಲುವಿನ ವಿದ್ಯಾರಣ್ಯಪುರದ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್, ಆನೆಗಳು ಕಾಡಿನಲ್ಲಿ ಇರಬೇಕು ಹೊರತು ದೇವಸ್ಥಾನದಲ್ಲಿ ಅಲ್ಲ. ಪೂಜಾ ಕಾರ್ಯಕ್ರಮಕ್ಕೆ ಆನೆಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ ಆಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿತು.
ಈ ಕುರಿತು ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾ. ಎ.ಎಸ್.ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನವು ಖಾಸಗಿ ದೇವಾಲಯವಾಗಿದೆ. ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲು ಆನೆಯೊಂದನ್ನು ತಂದು ಪೋಷಿಸಲಾಗುತ್ತಿತ್ತು. ಇದೀಗ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದ ಕಾರಣ ಆನೆಯೂ ಸರ್ಕಾರದ ವಶದಲ್ಲಿದೆ. ಅದನ್ನು ಸ್ಥಳಾಂತರಿಸದೇ ದೇವಸ್ಥಾನದಲ್ಲಿಯೇ ಇರಿಸಲು ಮುಜರಾಯಿ ಇಲಾಖೆಗೆ ನಿರ್ದೇಶಿಸಬೇಕು ಎಂದುಕೋರಿದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಆನೆಗಳು ಕಾಡಿನಲ್ಲಿರಬೇಕೇ ಹೊರತು ದೇಗುಲಗಳಲ್ಲಲ್ಲ ಎಂದಿತು. ಕೇವಲ ಪೂಜಾ ಕಾರ್ಯಕ್ರಮ ನೆರವೇರಿಸಲು ಅದನ್ನು ಬಳಕೆ ಮಾಡಲಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ಸಮರ್ಥನೆ ನೀಡಿದರು.
ಇದನ್ನೂ ಓದಿ:ಕಣ್ಣಿಗೆ ಬಟ್ಟೆ ಕಟ್ಟಿ ರಚಿಸಿದ ಸೂರ್ಯೋದಯದ ಚಿತ್ರಕ್ಕೆ ಮನ್ನಣೆ
ಆನೆಯನ್ನು ದೇವಸ್ಥಾನದಲ್ಲಿರಿಸಿ ಪೂಜಾ ಕಾರ್ಯಕ್ರಮಕ್ಕೆ ಬಳಸುವುದು ಎಷ್ಟು ಸರಿ ಎಂದು ಪೀಠ ಖಾರವಾಗಿ ಪ್ರಶ್ನಿಸಿತು. ಅದಕ್ಕೆ ವಕೀಲರು ಈ ಪದ್ಧತಿ ಹಿಂದಿನಿಂದಲೂ ಜಾರಿಯಲ್ಲಿದೆ ಎಂದರು. ಆಕ್ಷೇಪಿಸಿದ ಪೀಠ, ಹಿಂದಿನ ಕಾಲದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಜಾರಿಯಲ್ಲಿರಲಿಲ್ಲ. ಇದೀಗ ಆ ಕಾಯ್ದೆ ಜಾರಿಯಲ್ಲಿದೆ. ಪದ್ಧತಿ ಇತ್ತು ಎಂದು ಮುಂದುವರಿಸುತ್ತೀರಿ ಎನ್ನುವುದಾದರೆ ಒಪ್ಪಲಾಗದು ಎಂದು ಹೇಳಿತು.
ಸರ್ಕಾರಿ ವಕೀಲ ವಿಜಯ್ ಕುಮರ್ ಪಾಟೀಲ್, ಆನೆಗೆ ಆರೋಗ್ಯ ಸಮಸ್ಯೆಯಿದೆ. ಚಿಕಿತ್ಸೆ ನೀಡುವ ಅಗತ್ಯ ಇರುವುದರಿಂದ ಅದನ್ನು ಮಾಲೂರಿನ ಅರಣ್ಯ ಇಲಾಖೆಯ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ 2 ವಾರ ಕಾಲಾವಕಾಶ ನೀಡಿತು. ಜತೆಗೆ, ಆನೆಗೆ ಸೂಕ್ತ ಚಿಕಿತ್ಸೆ ಕಲ್ಪಿಸಿ, ವೈದ್ಯಕೀಯ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಸೆ.13ಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.