![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 20, 2021, 1:58 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್-2 ಚಿತ್ರದ ದಕ್ಷಿಣ ಭಾರತೀಯ ಭಾಷೆಯಗಳ ಸ್ಯಾಟ್ ಲೈಟ್ ಹಕ್ಕುಗಳು ಇಂದು ಮಾರಾಟವಾಗಿವೆ.
ವರಮಹಾಲಕ್ಷ್ಮಿ ಹಬ್ಬದಂದು ಕೆಜಿಎಫ್ ಚಾಪ್ಟರ್ 2 ತಂಡ ಸ್ಯಾಟಲೈಟ್ ಹಕ್ಕು ಮಾರಾಟದ ಮಾಹಿತಿ ನೀಡಿದೆ. ದಕ್ಷಿಣ ಭಾರತೀಯ ಭಾಷೆಗಳ ಸ್ಯಾಟಲೈಟ್ ಹಕ್ಕು ಮಾರಾಟವಾಗಿದೆ. ಜೀ ವಾಹಿನಿ ಸಿನಿಮಾದ ಸ್ಯಾಟಲೈಟ್ ಪ್ರಸಾರದ ಹಕ್ಕುಗಳನ್ನು ಖರೀದಿಸಿದೆ. ಈ ಕುರಿತಾಗಿ ಹೊಂಬಾಳೆ ಫಿಲಂಸ್, ನಿರ್ದೇಶಕ ಪ್ರಶಾಂತ್ ನೀಲ್, ಯಶ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಎಷ್ಟು ಕೋಟಿಗೆ ಡೀಲ್ :
ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಸ್ಯಾಟಲೈಟ್ ಹಕ್ಕುಗಳನ್ನು ಜೀ ಸಂಸ್ಥೆ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ನೂರು ಕೋಟಿ ರೂ. ನೀಡಿದೆ ಎಂದು ವರದಿಗಳು ತಿಳಿಸಿವೆ. 100 ಕೋಟಿ ರೂ.ಗೆ ಸ್ಯಾಟಲೈಟ್ ಹಕ್ಕುಗಳು ಮಾರಾಟ ವಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಇತ್ತೀಚಿಗಷ್ಟೆ ಒಟಿಟಿ ಯಿಂದಲೂ ಈ ಚಿತ್ರಕ್ಕೆ ದೊಡ್ಡ ಮೊತ್ತದ ಆಫರ್ ಬಂದಿತ್ತು. 250 ಕೋಟಿ ರೂ. ನೀಡುವುದಾಗಿ ಹೇಳಿಕೊಂಡಿತ್ತು. ಆದರೆ, ಚಿತ್ರತಂಡ ಇದನ್ನು ತಿರಸ್ಕರಿಸಿತು.
ಪ್ರಶಾಂತ್ ನೀಲ್ ನಿರ್ದೇಶನ ಕೆಜಿಎಫ್ 2 ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಿದ್ದಾರೆ. ಬಾಲಿವುಡ್ ನಟ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಂಗದೂರು ಅವರು ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ವರ್ಷ ಕೆಜಿಎಫ್ 2 ಸಿನಿಮಾ ತೆರೆಗೆ ಬರಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.