ವರಮಹಾಲಕ್ಷ್ಮೀ ಹಬ್ಬ : ಖರೀದಿ ಜೋರು
Team Udayavani, Aug 20, 2021, 6:46 PM IST
ಶಿವಮೊಗ್ಗ: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಖರೀದಿ ಭರಾಟೆ ಜೋರಾಗಿತ್ತು. ಕೊರೊನಾ ಭೀತಿಯ ನಡುವೆಯೂ ಮಹಿಳೆಯರು ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಗೆ ಮಾರುಕಟ್ಟೆಯಲ್ಲಿ ಮುಗಿಬಿದ್ದಿದ್ದು ಕಂಡು ಬಂತು.
ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು ಬೆಲೆ ಏರಿತ್ತು. ಕಡಿಮೆ ಬೆಲೆಗೆ ಸಿಗುತ್ತಿದ್ದ ಹೂವು ಮತ್ತು ಹಣ್ಣುಗಳ ಬೆಲೆ ಗುರುವಾರ ದುಪ್ಪಟ್ಟಾಗಿತ್ತು. ಕೇ.ಜಿ. ಗೆ 100 ರಿಂದ 150 ರೂ.ಗೆ ಸಿಗುತ್ತಿದ್ದ ಕಾಕಡಾ ಹೂವು 250 ರೂ. ದಾಟಿತ್ತು. ಸೇವಂತಿಗೆ ಮಾರೊಂದಕ್ಕೆ 150 ರೂ. ಆಗಿತ್ತಲದೇ ಎಲ್ಲ ಬಿಡಿ ಹೂವುಗಳ ಬೆಲೆ ಕೇ.ಜಿ ಗೆ 200 ರೂ. ದಾಟಿತ್ತು.
ಬಾಳೆ ಕಂದು, ಬಾಳೆ ಎಲೆಯ ದರದಲ್ಲೂ ಬಹಳ ವ್ಯತ್ಯಾಸವಾಗಿತ್ತು. ಹಣ್ಣುಗಳ ದರವೂ ಏರಿತ್ತು. ಸೇಬು, ಬಾಳೆ ಹಣ್ಣು, ದಾಳಿಂಬೆ, ಪೇರಲೆ ಸೇರಿದಂತೆ ಎಲ್ಲ ಹಣ್ಣುಗಳ ಬೆಲೆಯೂ ಏರಿತ್ತು. ಆದರೂ, ಗ್ರಾಹಕರು ಹಣ್ಣು, ಹೂವು ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿದರು.
ಶ್ರಾವಣ ಮಾಸದ ಪ್ರಮುಖ ಹಬ್ಬವಾದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರಮುಖ ವಹಿವಾಟು ಕೇಂದ್ರಗಳಾದ ಗಾಂಧಿ ಬಜಾರ್, ಶಿವಪ್ಪ ನಾಯಕ ಮಾರುಕಟ್ಟೆ, ಗೋಪಿ ವೃತ್ತ, ಎಪಿಎಂಸಿ ಮಾರುಕಟ್ಟೆ, ವಿನೋಬನಗರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಖರೀದಿ ಭರಾಟೆ ಜೋರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.