ಹದಗೆಟ್ಟ ನಾಲ್ತೂರು ದೇಗುಲ ಸಂಪರ್ಕ ರಸ್ತೆ

ಮಣ್ಣಿನ ರಸ್ತೆಗೆ ಕಾಯಕಲ್ಪದ ನಿರೀಕ್ಷೆಯಲ್ಲಿ ಯಡಾಡಿ ಮತ್ಯಾಡಿ ಜನತೆ

Team Udayavani, Aug 21, 2021, 6:47 AM IST

ಹದಗೆಟ್ಟ ನಾಲ್ತೂರು ದೇಗುಲ ಸಂಪರ್ಕ ರಸ್ತೆ

ತೀರಾ ಹದಗೆಟ್ಟ ನಾಲ್ತೂರು ದೇಗುಲ ಸಂಪರ್ಕ ರಸ್ತೆ.

ಮಳೆಗಾಲದ ಸಂದರ್ಭದಲ್ಲಿ ಸರಿ ಸುಮಾರು 300 ಮೀಟರ್‌ಗೂ ಅಧಿಕ ದೂರದ ಮಣ್ಣಿನ ರಸ್ತೆಯಲ್ಲಿಯೇ ನೀರು ಹರಿಯುವ ಕಾರಣದಿಂದ ಇಲ್ಲಿ ಸಂಚಾರವೆನ್ನುವುದು ತೀರಾ ಕಷ್ಟಕರವಾಗಿ ಪರಿಣಮಿಸುತ್ತದೆ.

ತೆಕ್ಕಟ್ಟೆ: ಇಲ್ಲಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ನಾಲ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆ ಮಳೆಗಾಲದ ಸಂದರ್ಭ ಸಂಪೂರ್ಣ ಕೆಸರುಮಯವಾಗಿ ವಾಹನ ಮಾತ್ರವಲ್ಲದೆ ಗ್ರಾಮಸ್ಥರು ನಡೆದು ಸಾಗಲು ಸಹ ಪ್ರಯಾಸಪಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

16 ಕುಟುಂಬಗಳಿಗೆ ಪ್ರಮುಖ ಮಾರ್ಗ
ಅಭಿವೃದ್ಧಿ ಹೊಂದುತ್ತಿರುವ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಾಲ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸುತ್ತ ಮುತ್ತಲಿನ ಪರಿಸರದಲ್ಲಿ ಸುಮಾರು 16 ಕುಟುಂಬಗಳಿದ್ದು ಮಳೆಗಾಲದ ಸಂದರ್ಭದಲ್ಲಿ ಸರಿ ಸುಮಾರು 300 ಮೀಟರ್‌ಗೂ ಅಧಿಕ ದೂರದ ಮಣ್ಣಿನ ರಸ್ತೆ ಎನ್ನುವುದು ತೋಡಾಗಿ ಪರಿವರ್ತನೆಗೊಳ್ಳುವ ಪರಿಣಾಮ ನಿತ್ಯ ಪ್ರಮುಖ ಪೇಟೆ ಹಾಗೂ ಇನ್ನಿತರ ಕೆಲಸಗಳಿಗಾಗಿ ತೆರಳುವವರು ನಿತ್ಯ ಸಂಕಷ್ಟ ಅನುಭವಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.

ಇದನ್ನೂ ಓದಿ:12 ವಯಸ್ಸಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಿದ್ಧವಾದ ಮೊದಲ ಕೋವಿಡ್ ಲಸಿಕೆಗೆ ಭಾರತದಲ್ಲಿ ಅನುಮೋದನೆ

ರಿಕ್ಷಾ ಮತ್ತು ವಾಹನಗಳು ಬರಲು ಒಪ್ಪುವುದಿಲ್ಲ
ಮಳೆ ಬರುವ ಸಂದರ್ಭದಲ್ಲಿ ನಾಲೂ¤ರಿನ ಮಣ್ಣಿನ ರಸ್ತೆಯು ಕೆಸರುಮಯವಾಗುವ ಪರಿಣಾಮ ಆಟೋ ಹಾಗೂ ಇನ್ನಿತರ ವಾಹನಗಳ ಚಕ್ರ ಕೆಸರಿನಲ್ಲಿ ಹೂತು ಹೋಗುತ್ತದೆ ಎನ್ನುವ ಕಾರಣ ನೀಡಿ ಬರಲು ಒಪ್ಪುವುದಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದು, ಅನಾರೋಗ್ಯ ಪೀಡಿತ ಹಿರಿಯ ನಾಗರಿಕರಿಗೆ ತುರ್ತಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ಕೂಡ ಕಷ್ಟಸಾಧ್ಯವಾಗಿದೆ ಎನ್ನುವುದು ಅವರ ಅಳಲು.

ಸಂಚಾರ ದುಸ್ತರ
ನಾಲ್ತೂರು ಶ್ರೀ ಮಹಾ ಲಿಂಗೇಶ್ವರದ ದೇಗುಲ ಸಂಪರ್ಕ ಮಣ್ಣಿನ ರಸ್ತೆಯು ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯವಾಗುವುದರಿಂದ ಗ್ರಾಮಸ್ಥರಿಗೆ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಅಲ್ಲದೆ ರಸ್ತೆಗೆ ಅಡ್ಡಲಾಗಿ ಸಮರ್ಪಕವಾದ ಮೋರಿ ಅಳವಡಿಸದೆ ಇರುವ ಪರಿಣಾಮ ಮಳೆ ನೀರು ನೇರವಾಗಿ ಮನೆಯೊಳಗೆ ಬಂದು ನುಗ್ಗುತ್ತಿದೆ. ಈಗಾಗಲೇ ಮನೆಯ ಹಿರಿಯರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ತುರ್ತು ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿದರೆ ಅವರನ್ನು ತುರ್ತು ಸಂದರ್ಭ ಆಸ್ತತ್ರೆಗೆ ಕೊಂಡೊಯ್ಯಲು ನೆರವಾದೀತು.
– ಗೋಪಾಲ ಮೊಗವೀರ ನಾಲ್ತೂರು,
ಸ್ಥಳೀಯ ನಿವಾಸಿ

ಪ್ರಸ್ತಾವ ಸಲ್ಲಿಕೆ
ಯಡಾಡಿ ಮತ್ಯಾಡಿ ಗ್ರಾಮದ ನಾಲ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲ ಸಂಪರ್ಕ ರಸ್ತೆ ಅಭಿವೃದ್ಧಿಯ ಬಗ್ಗೆ ಗ್ರಾ.ಪಂ.ನ ಗಮನದಲ್ಲಿದ್ದು, ಅಭಿವೃದ್ಧಿಗಾಗಿ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ಪಂಚಾಯತ್‌ನಿಂದ ಪ್ರಸ್ತಾವ ಸಲ್ಲಿಸಲಾಗುವುದು .
– ಚಂದ್ರಕಾಂತ್‌ ಬಿ., ಪಿಡಿಒ , ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌

ಇತರ ಸಮಸ್ಯೆಗಳೇನು?
ಈಗಾಗಲೇ ನಾಲ್ತೂರು ಶ್ರೀ ಮಹಾ ಲಿಂಗೇಶ್ವರದ ದೇಗುಲದ ಸಂಪರ್ಕ ಮಾರ್ಗದಲ್ಲಿ ಹೊಸದಾಗಿ ವಿದ್ಯುತ್‌ ಕಂಬಗಳನ್ನು ಅಳವಡಿಸಲಾಗಿದ್ದು, ಈ ವಿದ್ಯುತ್‌ ಕಂಬಗಳಿಗೆ ದಾರಿದೀಪ ಅಳವಡಿಸದೆ ಇರುವ ಪರಿಣಾಮ ರಾತ್ರಿ ವೇಳೆಯಲ್ಲಿ ಸಂಚರಿಸುವುದು ಕಷ್ಟ ವಾಗುತ್ತಿದೆ. ಆದ್ದರಿಂದ ತುರ್ತಾಗಿ ದಾರಿದೀಪ ಅಳವಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

-ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.