ಮುಸ್ಲಿಮರಿಲ್ಲದ ಊರಲ್ಲಿ ಮೊಹರಂ ಸಂಭ್ರಮ

ಕುರಬನಾಳದಲ್ಲಿ ಹಿಂದೂಗಳೇ ಆಚರಿಸುತ್ತಾರೆ ಮೊಹರಂ |ಹಳ್ಳಿಯಲ್ಲಿ ನೆಲೆಸಿಲ್ಲ ಒಂದೇ ಒಂದು ಮುಸ್ಲಿಂ ಕುಟುಂಬ

Team Udayavani, Aug 20, 2021, 9:34 PM IST

cfdff

ಕುಷ್ಟಗಿ: ಮೊಹರಂ ಮುಸ್ಲಿಮರ ಪಾಲಿಗೆ ಪವಿತ್ರ ಹಬ್ಬ ಎನ್ನುವುದು ಜನಜನಿತ. ತಾಲೂಕಿನ ಕುರಬನಾಳ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬ ನೆಲೆಸಿಲ್ಲ. ಹೀಗಿದ್ದರೂ ಮೊಹರಂ ಹಬ್ಬವನ್ನು ಹಿಂದೂಗಳೇ ಆಚರಿಸುತ್ತಿರುವುದು ವಿಶೇಷ.

ಕುರಬನಾಳ ಗ್ರಾಮದಲ್ಲಿ ಮುಸ್ಲಿಂ ಕುಟುಂಬಗಳು ಇಲ್ಲದೇ ಇದ್ದರೂ, ಮೊಹರಂ ಆಚರಣೆ ನಿಂತಿಲ್ಲ. ವರ್ಷದಿಂದ ವರ್ಷಕ್ಕೆ ಶ್ರದ್ಧೆ ಭಕ್ತಿಯಿಂದ ಹಾಗೂ ವೈಭವದಿಂದ ಜರುಗುತ್ತದೆ. ಈ ಅಲಾಯಿ ದೇವರನ್ನು ಹಿಡಿಯುವವರು ಹಿಂದೂಗಳೇ ಆಗಿದ್ದು, ಆರಾಧಿ ಸುವ ಭಕ್ತಾದಿಗಳೂ ಹಿಂದೂಗಳೇ ಆಗಿರುವುದು ವಿಶೇಷ.

ಭಕ್ತಾದಿಗಳು ಮಸೀದಿ ನಿರ್ಮಿಸಿದ್ದು, ಪ್ರತಿ ವರ್ಷವೂ ಭಕ್ತಿ ಭಾವದಿಂದ ಯಮನೂರ ದೇವರ ಮೊಹರಂ ಹಬ್ಬ ಆಚರಿಸಲಾಗುತ್ತಿದೆ. ಗ್ರಾಮದಲ್ಲಿ ಲಿಂಗಾಯತ, ಕುರುಬರು, ವಾಲ್ಮೀಕಿ, ಗಾಣಗೇರ, ಹರಿಜನ ಜನಾಂಗದವರಿದ್ದಾರೆ. ಒಂದೇ ಒಂದು ಕುಟುಂಬ ಮುಸ್ಲಿಮರು ಇಲ್ಲ. ಇಲ್ಲಿನ ವಿಶೇಷತೆ ಏನೆಂದರೆ, ಮೊಹರಂ ಆಚರಣೆ ಹಿನ್ನೆಲೆಯಲ್ಲಿ ನಡೆಯುವ ಈ ಆಚರಣೆಯಲ್ಲಿ ಓದುಸುವಿಕೆ, ದೇವರ ಕೆಂಡದ ಸೇವೆ, ದೇವರು, ಡೋಣಿ ಹೊರುವುದು ಈ ಎಲ್ಲ ಆಚರಣೆಗಳು ಹಿಂದೂಗಳಿಂದಲೇ ನಡೆಯುತ್ತಿವೆ.

ಪಾಂಜಾಗಳು ಬೇಡಿದ ವರವನ್ನು ಪಾಲಿಸುತ್ತವೆ ಎನ್ನುವ ಧಾರ್ಮಿಕ ನಂಬಿಕೆ ಹಿನ್ನೆಲೆಯಲ್ಲಿ ಗುದ್ದಲಿ ಹಾಕುವ ದಿನದಿಂದ ಮೊಹರಂ ಕೊನೆಯವರೆಗೂ ಆಚರಣೆಗಳು ಭಕ್ತಿ ಶ್ರದ್ಧೆಯಿಂದ ನಡೆಯುತ್ತವೆ. ದೇವರ ಪ್ರತಿಷ್ಠಾಪನೆ ವೇಳೆಯಲ್ಲಿ ಹರಕೆ ತೀರಿಸುವುದು ಹಿಂದಿನಿಂದ ನಡೆದುಕೊಂಡ ಸಂಪ್ರದಾಯ. ಗುರುವಾರ ನಡೆದ ಅಲಾಯಿ ದೇವರನ್ನು ಶರಣಪ್ಪ ಬಡಿಗೇರ, ರಮೇಶ ಜೂಲಕಟ್ಟಿ, ಬಸವರಾಜ್‌ ಬಡಿಗೇರ, ಹನುಮಂತ ತರಲಕಟ್ಟಿ, ಮೌನೆಶ ಬಡಿಗೇರ, ಯಮನೂರಪ್ಪ ತೆಮ್ಮಿನಾಳ, ನಾಗರಾಜ್‌ ಪವಾಡೆಪ್ಪನವರ, ಹನುಮಂತ ಪೂಜಾರಿ, ಬಸವರಾಜ್‌ ಕುರಗೋಡ್‌ ಅವರು, ಅಲಾಯಿ ದೇವರು ಹಿಡಿದು ಗ್ರಾಮದಲ್ಲಿ ಸವಾರಿ ನಡೆಸಿದರು.

ಟಾಪ್ ನ್ಯೂಸ್

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.