ಹಿಂಡಲಗಾ ಜೈಲಿನಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ
Team Udayavani, Aug 21, 2021, 11:48 AM IST
ಬೆಳಗಾವಿ: ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಶನಿವಾರ ಇಲ್ಲಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಆಗಿದ್ದು, ಅಭಿಮಾನಿಗಳು, ಬೆಂಬಲಿಗರು ಸೇಬು ಹಾರ ಹಾಕಿ ಅದ್ಧೂರಿಯಾಗಿ ಬರಮಾಡಿಕೊಂಡರು.
ಜಾಮೀನು ಸಿಕ್ಕರೂ ಎರಡು ದಿನಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕ ವಿನಯ್ ಕುಲಕರ್ಣಿ ಅವರನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ವಿನಯ ಪತ ಜಯಘೋಷ ಕೂಗಿದರು.
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಒಂದು ಗಂಟೆಯಿಂದ ಜೈಲಿನ ಹೊರ ಭಾಗದಲ್ಲಿ ಕಾಯುತ್ತ ನಿಂತು ವಿನಯ ಹೊರ ಬರುತ್ತಿದ್ದಂತೆ ವಿನಯ ಅವರಿಗೆ ರಾಖಿ ಕಟ್ಟಿ ಅಣ್ಣನನ್ನು ಸ್ವಾಗತಿಸಿ ರಕ್ಷಾ ಬಂಧನ ಹಬ್ಬ ಆಚರಿಸಿದರು.
ಧಾರವಾಡ ಸೇರಿದಂತೆ ವಿವಿಧ ಭಾಗಗಳಿಂದ ಅಭಿಮಾನಿಗಳು ಬಂದಿದ್ದರು. ಸೇಬು ಹಾರ, ಗುಲಾಬಿ ಹಾರ ಹಾಕಿ ಸ್ವಾಗತಿಸಿದರು. ಹೆಗಲು ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದರು. ಅಭಿಮನ ತಾರಕಕ್ಕೆ ಏರಿತ್ತು.ಜನರು ಕೋವಿಡ್ ನಿಯಮ ಉಲ್ಲಂಘಿಸಿ ಜನ ಸೇರಿದ್ದರು. ಕೊರೊನಾ ಆತಂಕದ ಮಧ್ಯೆಯೂ ಜನ ಆಗಮಿಸಿದ್ದರು.
ಇದನ್ನೂ ಓದಿ :ಸರಕಾರಿ ಜಾಗ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ : ಅಧಿಕಾರಿಗಳಿಂದ ಕಾಮಗಾರಿಗೆ ತಡೆ
ಜಾಮೀನು ನೀಡಿದ ನ್ಯಾಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದ ವಿನಯ ಕುಲಕರ್ಣಿ, ರೈತ ಕುಟುಂಬದಲ್ಲಿ ಹುಟ್ಟಿದ ನಾನು ವಿದ್ಯಾರ್ಥಿ ನಾಯಕನಾಗಿ ಬೆಳೆದು ರಾಜಕಾರಣದಲ್ಲಿ ಬೆಳೆದಿದ್ದೇನೆ. ಒಂಭತ್ತು ತಿಂಗಳು ಕಾಲ ನನಗೆ ಟಾಸ್ಕ್ ನೀಡಲಾಗಿತ್ತು. ಜೈಲಿನಲ್ಲಿ ಸಾಕಷ್ಟು ಓದಲು ಕಲಿತಿದ್ದೇನೆ. ಜೀವನದ ಬಗ್ಗೆ ತಿಳಿದುಕೊಂಡಿದ್ದೇನೆ.
ಸಂಘಟನೆಗಳೇ ಬೇರೆ ನಾನೇ ಬೇರೆ. ನನ್ನ ಜೀವನವೇ ಬೇರೆ. ಎಲ್ಲ ಸಮಾಜದ ವರ್ಗದ ಜನ ನನ್ನ ಜೊತೆಗೆ ಇದ್ದಾರೆ. ಶ್ರೀಮಂತರೂ ಇದ್ದಾರೆ. ಸ್ಲಂ ನಲ್ಲಿರುವ ಜನರೂ ನನ್ನ ಜೊತೆಗೆ ಇದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.