ನಟ ರಕ್ಷಿತ್ ಶೆಟ್ಟಿ ಮನೆಗೆ ಹೊಸ ಅತಿಥಿ ಆಗಮನ
Team Udayavani, Aug 21, 2021, 2:09 PM IST
ಬೆಂಗಳೂರು: ಸಾಲು ಸಾಲು ಸಿನಿಮಾಗಳ ಶೂಟಿಂಗ್ ನಲ್ಲಿ ಬ್ಯುಝಿ ಇರುವ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿಯವರ ಮನೆಗೆ ಹೊಸ ಅತಿಥಿಯ ಆಗಮನ ಆಗಿದೆ.
ನಿನ್ನೆ (ಆ.20) ವರಮಹಾಲಕ್ಷ್ಮಿ ಹಬ್ಬದ ದಿನದಂದು ರಕ್ಷಿತ್ ಶೆಟ್ಟಿ ಹೊಸ ಆಡಿ ಕ್ಯೂ8 (Audi Q8) ಕಾರು ಖರೀದಿಸಿದ್ದು, ಪೂಜೆ ಸಹ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು, ರಕ್ಷಿತ್ ಶೆಟ್ಟಿಯ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಈ ಕಾರಿನ ಮಾರುಕಟ್ಟೆ ಬೆಲೆ 98 ಲಕ್ಷದಿಂದ 1.27 ಕೋಟಿಯವರೆಗೂ ಇದೆ.
Congratulations brother man @rakshitshetty for having a new vehicle into the family on this Mahalaxmi festival.
Best wishes
Keep going and growing ?
More love #RakshitShetty #AudiQ8 @AudiOfficial @AudiIN pic.twitter.com/kJwsa4ilkL— Vivek Vishwanath (@_vivekram) August 20, 2021
ರಕ್ಷಿತ್ ಶೆಟ್ಟಿಯವರು ಸಿನಿಮಾಗಳಲ್ಲಿ ತುಂಬಾ ಬ್ಯುಝಿ ಇದ್ದಾರೆ. ಹೇಮಂತ್ ರಾವ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಎರಡೇ ಶೆಡ್ಯೂಲ್ಡ್ ಚಿತ್ರೀಕರಣಕ್ಕೆ ರೆಡಿಯಾಗಿದ್ದಾರೆ.
ರಕ್ಷಿತ್ ಶೆಟ್ಟಿ ನಟಿಸಿರುವ ಚಾರ್ಲಿ 777 ಸಿನಿಮಾ ಕೂಡ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದ ಎಲ್ಲಾ ಕೆಲಸಗಳು ಮುಗಿದಿದ್ದು, ಈಗ ತೆರೆಗೆ ಬರಲು ಸಜ್ಜಾಗಿದೆ. ಇದರ ಜೊತೆಗೆ ಇತ್ತೀಚಿಗಷ್ಟೆ ಹೊಸ ಸಿನಿಮಾ ‘ರಿಚರ್ಡ್ ಆಂಟನಿ’ ಕೂಡ ಘೋಷಣೆಯಾಗಿದ್ದು, ವಿಜಯ್ ಕಿರಂಗದೂರು ಅವರು ನಿರ್ಮಾಣ ಮಾಡಲಿದ್ದಾರೆ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿಯವರು ನಾಯಕನಾಗಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.