ಮಳೆ, ಅನುದಾನ ಕೊರತೆ: ಬಿಗಡಾಯಿಸಿದ ನೀರಿನ ಸಮಸ್ಯೆ

ತಾಲೂಕಿನಲ್ಲಿ 800-1000 ಅಡಿ ಕೊರೆದರೂ ನೀರು ಸಿಗುತ್ತಿಲ್ಲ ಪಾವತಿಯಾಗದ ಹಳೇ ಬಿಲ್‌ಗ‌ಳು, ದುರಸ್ತಿ ಕಾರ್ಯಗಳು ವಿಳಂಬ

Team Udayavani, Aug 21, 2021, 3:27 PM IST

ಮಳೆ, ಅನುದಾನ ಕೊರತೆ: ಬಿಗಡಾಯಿಸಿದ ನೀರಿನ ಸಮಸ್ಯೆ

ಹನೂರು: ಸಮರ್ಪಕ ಮಳೆಯಾಗದ ಹಿನ್ನೆಲೆ ತಾಲೂಕಿನಾದ್ಯಂತ ಅಂತರ್ಜಲ ಮಟ್ಟ ಕುಸಿದಿದ್ದು, ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ.

ತಾಲೂಕಿಗೆ ಒಳಪಡುವ ಜಿಲ್ಲೆಯ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು,
ವಡಕೆಹಳ್ಳ, ಕೌದಳ್ಳಿ, ಎಲ್ಲೇಮಾಳ, ಕುರಟ್ಟಿ ಹೊಸೂರು, ಮಹಾಲಿಂಗನಕಟ್ಟೆ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇನ್ನು ಈ ಭಾಗದಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು 800-1000 ಅಡಿ ಆಳ ಕೊರೆದರೂ ನೀರು ದೊರಕುತ್ತಿಲ್ಲ. ಈ ಭಾಗದ ಜನರು ಕುಡಿಯುವ ನೀರು ಮತ್ತು ದೈನಂದಿನಬಳಕೆಗಾಗಿ ಗ್ರಾಮ ಸಮೀಪದ ಅಥವಾ ಹೊರವಲಯದ ಜಮೀನುಗಳಿಗೆ ತೆರಳಿ ನೀರು ತರಬೇಕಾದ ಪರಿಸ್ಥಿತಿಯಿದೆ.

ಅನುದಾನದ ಲಭ್ಯವಿಲ್ಲ: ಇನ್ನು ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ನೀರು ಒದಗಿಸಲು ಹೊಸದಾಗಿ ಬೋರ್‌ವೆಲ್‌ ಕೊರೆಸಲು ಸಂಬಂಧಪಟ್ಟ ಇಲಾಖೆಯಿಂದ ಅನುದಾನದ ಲಭ್ಯವಿಲ್ಲ. ಹೀಗಾಗಿ ಹೊಸದಾಗಿ ಬೋರ್‌ವೆಲ್‌ಗ‌ ಳನ್ನು ಕೊರೆಯಲು ಸಾಧ್ಯ ವಾಗುತ್ತಿಲ್ಲ. ಜೊತೆಗೆ ನೀರಿನ ಲಭ್ಯತೆಯಿರುವ ಜಮೀನುಗಳಿಂದ ಖರೀದಿ ಮಾಡಿ ಸಾರ್ವಜನಿಕರಿಗೆ ನೀಡಲು ಮುಂದಾಗಲೂ ಈ ಹಿಂದಿನ ಸಾಲುಗಳಲ್ಲಿ ಖರೀದಿಸಿರುವ ನೀರಿನ ಬಿಲ್‌ಗ‌ಳ ಬಾಕಿ ಪಾವತಿಯಾಗದಕಾರಣ ಜಮೀನು ಮಾಲೀಕರು ನೀರು ನೀಡಲು ಮುಂದಾಗುತ್ತಿಲ್ಲ.

ಇದನ್ನೂ ಓದಿ:ಸುಗಂಧ ದ್ರವ್ಯ ಹಚ್ಚಿಕೊಂಡ ಅನುಯಾಯಿಗಳು ರಜನೀಶ್ ಹತ್ತಿರ ಸುಳಿಯಲೂ ಸಾಧ್ಯವಿಲ್ಲ!

ಇನ್ನು ಕೆಟ್ಟಿರುವ ಬೋರ್‌ವೆಲ್‌ಗ‌ಳನ್ನು ದುರಸ್ತಿಪಡಿ ಸಲು ಮ್ಯಕಾನಿಕ್‌ಗಳಿಗೆ ಸಮರ್ಪಕವಾಗಿ ಬಿಲ್‌ಗ‌ಳನ್ನೂ ಪಾವತಿಸಿಲ್ಲ. ಈ ಹಿನ್ನೆಲೆ ಸ್ಥಳೀಯ ಮ್ಯಕಾನಿಕ್‌ ಕೆಲಸಗಾರರು ಪಂಚಾಯಿತಿ ಕೆಲಸ ಕಾರ್ಯ ನಿರ್ವಹಿಸಲು ಯಾರೂ ಮುಂದಾಗುತ್ತಿಲ್ಲ.

2ನೇ ಹಂತದ ಯೋಜನೆ ಜಾರಿಗೊಳಿಸಿ: ತಾಲೂಕಿನ 100 ಗ್ರಾಮಗಳಿಗೆ ಮೊದಲ ಹಂತದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಯೋಜನೆ ಜಾರಿಯಾಗದ ಗ್ರಾಮಗಳಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆ 2ನೇ ಹಂತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಂಡು ಶೀಘ್ರ ನೀರಿನ ಬವಣೆಯನ್ನು ತಪ್ಪಿಸಬೇಕುಎಂಬುದುಸಾರ್ವಜನಿಕರ ಒತ್ತಾಯವಾಗಿದೆ.

ದಾನಿಗಳು ಸಹಕಾರ: ತಾಲೂಕಿನ ಗ್ರಾಮಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳಿಂದ ಅಥವಾ ಜನ ಪ್ರತಿನಿಧಿಗಳಿಂದ ಪರಿಹಾರ ದೊರಕದ ಹಿನ್ನೆಲೆ ಜನಾಶ್ರಯ ಟ್ರಸ್ಟ್‌ ಅಥವಾ ಮಾನಸ ಸೇವಾ ಫೌಂಡೇಷನ್‌ನ ಸಹಾಯ ಪಡೆದು ಕುಡಿಯುವ ನೀರಿನ ಸಮಸ್ಯೆ ನೀಗಿಸಿಕೊಳ್ಳುತ್ತಿದ್ದಾರೆ.

ತಾಲೂಕಿನ ಸಮರ್ಪಕ ಮಳೆಯಾಗದೆಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಬಗ್ಗೆ ಮತ್ತು ಕೃಷಿ ಚಟುವಟಿಕೆ ಕುಂಠಿತವಾಗಿರುವ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್‌ ಗಮನಕ್ಕೆ ತರಲಾಗಿದೆ. ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಜಿಲ್ಲಾಧಿಕಾರಿಗೆ
ಮನವಿ ಮಾಡಲಾಗಿದೆ. ಸಾಧ್ಯವಾದಷ್ಟು ಕಡೆ ನೀರಿನ ಸಮಸ್ಯೆ ನಿವಾರಿಸಲು ಕ್ರಮವಹಿಸಲಾಗಿದೆ.
-ಆರ್‌. ನರೇಂದ್ರ, ಶಾಸಕ

-ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.