ಯುಪಿಎಸ್‌ ಇಲ್ಲದೆ ನಾಡಕಚೇರಿಯಲ್ಲಿ ಪರದಾಟ

ವಿದ್ಯುತ್‌ ಸಮಸ್ಯೆಯಿಂದ ಪ್ರತಿದಿನ ಸಾರ್ವಜನಿಕರ ಅಲೆದಾಟ ; ಜಿಲ್ಲಾಧಿಕಾರಿ ಸೂಚಿಸಿದ್ದರೂ ಸಿಗದ ಪರಿಹಾರ

Team Udayavani, Aug 21, 2021, 4:44 PM IST

ಯುಪಿಎಸ್‌ ಇಲ್ಲದೆ ನಾಡಕಚೇರಿಯಲ್ಲಿ ಪರದಾಟ

ಸಕಲೇಶಪುರ: ತಾಲೂಕಿನ ಬೆಳಗೋಡು ಹೋಬಳಿ ನಾಡಕಚೇರಿಯಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾದಾಗ ಯುಪಿಎಸ್‌ ಹಾಗೂ ಜನರೇಟರ್‌
ವ್ಯವಸ್ಥೆ ಇಲ್ಲದ ಕಾರಣ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಬೆಳಗೋಡು ಹೋಬಳಿ ನಾಡಕಚೇರಿಯಲ್ಲಿ ಯುಪಿಎಸ್‌, ಜನರೇಟರ್‌ ವ್ಯವಸ್ಥೆ ಇಲ್ಲದ ಕಾರಣ ಪ್ರತಿಯೊಂದು ಕೆಲಸ ಕಾರ್ಯಗಳು ವಿದ್ಯುತ್‌ ಬರುವವರೆಗೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.ಮಲೆನಾಡುಪ್ರದೇಶವಾಗಿರುವುದರಿಂದ ವಿದ್ಯುತ್‌ ಅಡಚಣೆ ಸಹಜವಾಗಿದ್ದು, ಇದಕ್ಕೆ ಬದಲಿ ವ್ಯವಸ್ಥೆ ಮಾಡದೆ ಇರುವುದು ದುರದೃಷ್ಟ ಕರವಾದ ಸಂಗತಿಯಾಗಿದೆ. ದಿನನಿತ್ಯ ಸಾವಿರಾರು ಜನರು ಬೆಳೆಗೋಡಿನ ನಾಡ ಕಚೇರಿಗೆ ವಿವಿಧ ಕೆಲಸ ಕಾರ್ಯಗಳಿಗೆ ಬರುವ ಜನ ಕೆಲಸವಾಗದ ಕಾರಣ ಹಾಗೆಯೇ ಹಿಂತಿರುಗಬೇಕಾದ ಪರಿಸ್ಥಿತಿ ಇದೆ. ನಾಡ ಕಚೇರಿಯ ಸಿಬ್ಬಂದಿ ವಿದ್ಯುತ್‌ ಇಲ್ಲದ ಸಂದರ್ಭದಲ್ಲಿ ಜನರಿಗೆ ನಾಳೆ ಬನ್ನಿ ಅಥವಾ ಸಂಜೆ ತನಕ ಕಾಯಿರಿ ಕರೆಂಟ್‌ ಬಂದಾಗ ನಿಮ್ಮ ಕೆಲಸ ಮಾಡಿ ಕೊಡುತ್ತೇವೆ ಎಂಬುದಾಗಿ ಹೇಳುತ್ತಾರೆ.

ಇದನ್ನೂ ಓದಿ:ಸೆ.5 ರಂದು ರೈತರ ಮಕ್ಕಳ ಶಿಷ್ಯವೇತನ ಬಿಡುಗಡೆಗೆ ಚಾಲನೆ: ಸಿಎಂ ಬೊಮ್ಮಾಯಿ

ಕಳೆದ ಆರೇಳು ತಿಂಗಳ ಹಿಂದೆ ಇದೇ ನಾಡಕಚೇರಿಗೆ ಜಿಲ್ಲಾಧಿಕಾರಿ ಅವರು ಭೇಟಿ ಕೊಟ್ಟಾಗ ಅಲ್ಲಿನ ನಿವಾಸಿಯಾದ ಬೆಳಗೋಡು ಬಸವರಾಜ್‌ ಎಂಬುವವರು ಜಿಲ್ಲಾಧಿಕಾರಿಯವರಿಗೆ ನಾಡಕಚೇರಿಯಲ್ಲಿ, ವಿದ್ಯುತ್‌ ಇಲ್ಲದ ಸಂದರ್ಭದಲ್ಲಿ ಬದಲಿ ವ್ಯವಸ್ಥೆ ಮಾಡಿಕೊಡಬೇಕು ಎಂಬುದಾಗಿ ಮನವಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ಅವರು ಅಲ್ಲೇ ಇದ್ದ ಉಪತಹಶೀಲ್ದಾರ್‌, ಹಿಂದಿನ ಉಪವಿಭಾಗಧಿಕಾರಿ ಹಾಗೂ ತಹಶೀಲ್ದಾರ್‌ ಅವರ ಸಮ್ಮುಖದಲ್ಲಿ ನಾಡಕಚೇರಿಗೆ ತ್ವರಿತಗತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುವಂತೆ ಸೂಚಿಸಿದ್ದರು. ಆದರೂ ಇಲ್ಲಿಯವರೆಗೆ ಯಾವುದೇ ಕಾರ್ಯಗಳು ಆಗಿಲ್ಲ. ಇದರಿಂದ ಸಣ್ಣಪುಟ್ಟ ಕಾರ್ಯಗಳಿಗೂ ಜನಸಾಮಾನ್ಯರು ಅಲೆದಾಡುವಂತಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಉಪತಹಶೀಲ್ದಾರ್‌ ಅವರು ಬದಲೀ ವ್ಯವಸ್ಥೆಯ ಬಗ್ಗೆ ಗಮನ ಕೊಡದೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸದೆ ಬೇಜವಾಬ್ದಾರಿತನ ತೋರುತ್ತಿದ್ದಾರೆ. ಇನ್ನು ನಾಡಕಚೇರಿಗೆ ಹಾಕಿರುವ ಸಿಸಿ ಕ್ಯಾಮೆರಾ ಸಹ ಯಾವುದೇ ಉಪಯೋಗಕ್ಕೆ ಬಾರದಾಗಿದೆ. ಸಣ್ಣಪುಟ್ಟ ಕೆಲಸಗಳಿಗೆ ಇಲ್ಲಿ ವ್ಯಾಪಕ ಲಂಚ ತೆಗೆದುಕೊಳ್ಳುತ್ತಿರುವುದು ಸಾರ್ವಜನಿಕರಆಕ್ರೋಶಕ್ಕೆ ಕಾರಣವಾಗಿದೆ.

ಮುಂದಿನ ದಿನಗಳಲ್ಲಿ ನಾಡಕಚೇರಿಯಲ್ಲಿ ವಿದ್ಯುತ್‌ ಕಡಿತವಾದಾಗಯುಪಿಎಸ್‌ ಹಾಗೂ ಜನರೇಟರ್‌ ವ್ಯವಸ್ಥೆ ಮಾಡದಿದ್ದಲ್ಲಿ ಬೆಳಗೋಡಿನ ನಾಡಕಚೇರಿಯ ಮುಂದೆ ಸಾರ್ವಜನಿಕ ಧರಣಿ ಮಾಡಬೇಕಾಗುತ್ತದೆ.
-ಕಾಕನಮನೆ ಹೆನ್ರಿ, , ಸಮಾಜ ಚಿಂತಕ

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.