ಪಾಲಿಕೆ ಫೈಟ್:ಕಾಂಗ್ರೆಸ್‌ ಟಿಕೆಟ್‌ಗೆ ಅಲ್ಪಸಂಖ್ಯಾತರ ಬಿಗಿಪಟ್ಟು!

ಅಲ್ಪಸಂಖ್ಯಾತರಿಗೆ ನೀಡುವ ಅವಕಾಶ ಇದ್ದಾಗ್ಯೂ ಕಾಂಗ್ರೆಸ್‌ ನೀಡದಿರುವುದು ಮುಸ್ಲಿಂ ಆಕ್ರೋಶಕ್ಕೆ ಕಾರಣವಾಗಿತ್ತು.

Team Udayavani, Aug 21, 2021, 5:34 PM IST

ಪಾಲಿಕೆ ಫೈಟ್:ಕಾಂಗ್ರೆಸ್‌ ಟಿಕೆಟ್‌ಗೆ ಅಲ್ಪಸಂಖ್ಯಾತರ ಬಿಗಿಪಟ್ಟು!

ರಾಯಚೂರು: ಸಂಪ್ರದಾಯದಂತೆ ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ತಪ್ಪದೆ ಪಡೆದಿರುವ ಅಲ್ಪಸಂಖ್ಯಾತರು, ಮುಂಬರುವ ಚುನಾವಣೆಗೂ ಟಿಕೆಟ್‌ ನೀಡಲೇಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಮೂಲಕ ರಾಜಕೀಯ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇರುವಾಗಲೇ ಈ ವಿಚಾರ ಮುನ್ನೆಲೆಗೆ ಬಂದಿರುವುದು ಕಾಂಗ್ರೆಸ್‌ ಒಳಜಗಳದ ಕಾವು ಹೆಚ್ಚಿಸಿದೆ.

ರಾಯಚೂರು ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕಾಂಗ್ರೆಸ್‌ ಟಿಕೆಟ್‌ ನೀಡುತ್ತಲೇ ಬರಲಾಗುತ್ತಿದೆ. ಆದರೆ, 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿತ್ತು. ಕೊನೆ ಕ್ಷಣದಲ್ಲಿ ಮಾಜಿ ಶಾಸಕ ಸೈಯದ್‌ ಯಾಸಿನ್‌ರಿಗೆ ಟಿಕೆಟ್‌ ಸಿಗುವ ಮೂಲಕ ಕಾಂಗ್ರೆಸ್‌ ಸಂಪ್ರದಾಯ ಮುಂದುವರಿಸಿತ್ತು. ಆದರೆ, ಆಗ ಪಕ್ಷದ ವರಿಷ್ಠರು ಇದೇ ಕೊನೆ ಮುಂದಿನ ಬಾರಿ ಟಿಕೆಟ್‌ ಬೇರೆಯವರಿಗೆ ನೀಡಲಾಗುವುದು ಎಂಬ ಷರತ್ತಿನ ಮೇಲೆ ನೀಡಿದ್ದರು ಎನ್ನುತ್ತವೆ ಮೂಲಗಳು.

ಆ ಕ್ಷಣಕ್ಕೆ ಅದು ನ್ಯಾಯೋಚಿತ ಎನಿಸಿದರೂ ಈಗ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಂಜುಮನ್‌ ಎ ಸಂಘಟನೆ ಮತ್ತೆ ಧ್ವನಿ ಎತ್ತಿದೆ. ಈಚೆಗೆ ನಗರಕ್ಕೆ ಆಗಮಿಸಿದ್ದ ಪಕ್ಷದ ವರಿಷ್ಠರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಸೇರಿ ಇತರರಿಗೆ ಟಿಕೆಟ್‌ ವಿಚಾರವಾಗಿ ಮನವಿ ಸಲ್ಲಿಸಿದೆ. ಅದಕ್ಕೂ ಮುಂಚೆ ನಗರದಲ್ಲಿ ರ್ಯಾಲಿ ಕೂಡ ನಡೆಸಿದೆ. ಈ ಬೆಳವಣಿಗೆ ಬೇರೆ ಸಮುದಾಯದ ಟಿಕೆಟ್‌ ಆಕಾಂಕ್ಷಿಗಳಿಗೆ ನುಂಗಲಾರದ ತುತ್ತಾಗಿ ಪರಿಣಿಸಿದ್ದು, ಮುಂದಿನ ಬಾರಿಯೂ ಟಿಕೆಟ್‌ ಸಂಘರ್ಷ ಜೋರಾಗಲಿದೆಯೇ ಎಂಬ ಮುನ್ಸೂಚನೆ ನೀಡಿದೆ.

ರಾಯಚೂರು ನಗರ ಕ್ಷೇತ್ರದ ಇತಿಹಾಸವನ್ನೊಮ್ಮೆ ನೋಡಿದರೆ 1957ರಿಂದ ಈವರೆಗೆ ನಡೆದ 15 ಚುನಾವಣೆಗಳಲ್ಲಿ ಏಳು ಬಾರಿ ಅಲ್ಪಸಂಖ್ಯಾತ ಸಮುದಾಯದವರೇ ಕಾಂಗ್ರೆಸ್‌ನಿಂದ ಗೆದ್ದಿದ್ದಾರೆ. ಎಲ್ಲ ಚುನಾವಣೆಗಳಲ್ಲೂ ಟಿಕೆಟ್‌ ಮಾತ್ರ ಅಲ್ಪಸಂಖ್ಯಾತರಿಗೆ ನೀಡಲಾಗಿತ್ತು. ಈ ಬಾರಿ ಬೇರೆಯವರಿಗೆ ನೀಡಬೇಕು ಎನ್ನುವ ಕಾರಣಕ್ಕೆ ಕಳೆದ ಚುನಾವಣೆಯಲ್ಲಿ ಪಕ್ಷದೊಳಗೆ ಗುಂಪುಗಾರಿಕೆ ಏರ್ಪಟ್ಟಿತ್ತು. ಆದರೂ ಅಲ್ಪಸಂಖ್ಯಾತರು ಪ್ರಾಬಲ್ಯ ಸಾಧಿಸಿದ್ದರೂ 2023ರ ಚುನಾವಣೆಯಲ್ಲಾದರೂ ಹಾದಿ ಸುಗಮವಾಗಲಿದೆ ಎಂದುಕೊಂಡವರಿಗೆ ಈಗಿಂದಲೇ ಭಿನ್ನಮತದ ಬಿಸಿ ತಟ್ಟುತ್ತಿರುವುದು ವಿಪರ್ಯಾಸ.

ಅಲ್ಪಸಂಖ್ಯಾತರನ್ನು ಅಲ್ಲಗಳೆಯುವಂತಿಲ್ಲ
ರಾಯಚೂರು ನಗರ ಕ್ಷೇತ್ರ ಮಾತ್ರವಲ್ಲದೇ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಮುಸ್ಲಿಂ ಮತಗಳು ನಿರ್ಣಾಯಕ ಹಂತದಲ್ಲಿವೆ. ಆದರೆ, ರಾಯಚೂರು, ಸಿಂಧನೂರು ಹೊರತಾಗಿಸಿ ಉಳಿದೆಲ್ಲ ಕ್ಷೇತ್ರಗಳಿಗೆ ಬೇರೆ ಸಮುದಾಯಗಳಿಗೆ ಮೀಸಲಾತಿ ಇದೆ. ಹೀಗಾಗಿ ಅಲ್ಪಸಂಖ್ಯಾತರು ರಾಯಚೂರು ನಗರ ಕ್ಷೇತ್ರ ಒಂದರ ಮೇಲೆಯೇ ಒಲವು ತೋರಿಸುತ್ತಿದ್ದಾರೆ. ಕಾಂಗ್ರೆಸ್‌ ಅಷ್ಟು ಸುಲಭಕ್ಕೆ ಅಲ್ಪಸಂಖ್ಯಾತರ ಬೇಡಿಕೆಯನ್ನು ಅಲ್ಲಗಳೆಯುವುದು ಕಷ್ಟ ಸಾಧ್ಯ ಎನ್ನುವುದು ರಾಜಕೀಯ ವಲಯದ ಚರ್ಚೆಯಾಗುತ್ತಿದೆ.

ಕಾಂಗ್ರೆಸ್‌ ಅಲ್ಪಸಂಖ್ಯಾತರ ಮತಗಳನ್ನು ಭದ್ರ ಮತ ಬ್ಯಾಂಕ್‌ ರೀತಿ ಪಡೆಯುತ್ತಿದ್ದು, ಟಿಕೆಟ್‌ ಹಂಚಿಕೆ ವಿಚಾರ ಬಂದಾಗ ಹಿಂದೇಟಾಕುವುದು ಕಷ್ಟ ಸಾಧ್ಯ ಎನ್ನುತ್ತಾರೆ ಪಕ್ಷದ ಕೆಲ ನಾಯಕರು. ಅಲ್ಲದೇ, ಈಚೆಗೆ ನಗರಸಭೆ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ನೀಡುವ ಅವಕಾಶ ಇದ್ದಾಗ್ಯೂ ಕಾಂಗ್ರೆಸ್‌ ನೀಡದಿರುವುದು ಮುಸ್ಲಿಂ ಆಕ್ರೋಶಕ್ಕೆ ಕಾರಣವಾಗಿತ್ತು.

ನಾನೇ ಅಭ್ಯರ್ಥಿ ಎನ್ನುವವರಿಲ್ಲ
ಚುನಾವಣೆಗೆ ಇನ್ನೂ ಕಾಲಾವಕಾಶ ಇದ್ದರೂ ಜಿಲ್ಲೆಯ ಕೆಲ ಕ್ಷೇತ್ರಗಳಲ್ಲಿ ನಾವೇ ಮುಂದಿನ ಅಭ್ಯರ್ಥಿ ಎಂದು ಕೆಲಸ ಮಾಡುವ ನಾಯಕರಿದ್ದಾರೆ. ಆದರೆ, ನಗರ ಕ್ಷೇತ್ರದಲ್ಲಿ ಅದರಲ್ಲೂ ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ ನಾನೇ ಮುಂದಿನ ಅಭ್ಯರ್ಥಿ ಎಂದು ಬಹಿರಂಗವಾಗಿ ಹೇಳಿಕೊಂಡು ಯಾವುದೇ ನಾಯಕರು ಕೆಲಸ ಮಾಡುತ್ತಿಲ್ಲ. ಚುನಾವಣೆಗೆ ವೇದಿಕೆ ಸಿದ್ಧ ಮಾಡಿಕೊಂಡು ಕೆಲ ನಾಯಕರು ಕೆಲಸ ಮಾಡುತ್ತಿದ್ದಾರೆ.

ವಿನಃ ಬಹಿರಂಗವಾಗಿ ಹೇಳಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಇದು ಪಕ್ಷದ ಕಾರ್ಯಕರ್ತರಿಗೂ ಗೊಂದಲ ಮೂಡಿಸುತ್ತಿದೆ. ಏತನ್ಮಧ್ಯೆ ರಾಯಚೂರು ನಗರ ಕ್ಷೇತ್ರಕ್ಕೆ ಬೇರೆ ಭಾಗದಿಂದ ಅಭ್ಯರ್ಥಿಗಳು ಬಂದು ಸ್ಪರ್ಧಿಸಲಿದ್ದಾರೆ ಎಂಬ ಗುಮಾನಿಗಳು ಕೂಡ ಜೋರಾಗುತ್ತಿದೆ. ಅಪರೂಪದ ಅತಿಥಿಗಳಂತೆ ಕೆಲ ನಾಯಕರು ನಗರದಲ್ಲಿ ಗುರುತಿಸಿಕೊಳ್ಳುವ ಯತ್ನ ಮಾಡುತ್ತಿರುವುದು ಕೂಡ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಯಾದಗಿರಿ ವಿಧಾನಸಭೆ ಕ್ಷೇತ್ರವನ್ನು ಈ ಬಾರಿ ಅಲ್ಪಸಂಖ್ಯಾತರಿಗೆ ಬಿಟ್ಟು ಕೊಡಲಾಗುತ್ತಿದೆ ಎಂಬ ಸುದ್ದಿಯೂ ಈ ಎಲ್ಲ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ.

ಪ್ರತಿಪಕ್ಷಗಳಿಗೆ ವರವಾದೀತೆ ನಡೆ?
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿದ್ದ ಗುಂಪುಗಾರಿಕೆ ಬಿಜೆಪಿ ಅಭ್ಯರ್ಥಿ ಗೆಲುವಿಗೆ ನೆರವಾಯಿತು. ಈ ಬಾರಿಯೂ ಮತ್ತದೆ ಪರಿಸ್ಥಿತಿ ಏರ್ಪಡುತ್ತಿರುವುದು ಪ್ರತಿಪಕ್ಷಗಳಿಗೆ ವರವಾದರೆ ಅಚ್ಚರಿ ಪಡುವಂತಿಲ್ಲ. ಕಳೆದ ಬಾರಿ ಜೆಡಿಎಸ್‌ನಿಂದ ದುರ್ಬಲ ಅಭ್ಯರ್ಥಿ ಕಣಕ್ಕಿಳಿದ ಕಾರಣ ಕಾಂಗ್ರೆಸ್‌ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಕಾಂಗ್ರೆಸ್‌ನಲ್ಲಿ ಟಿಕೆಟ್‌ನಿಂದ ಉಂಟಾದ ಭಿನ್ನಮತ ಚುನಾವಣೆ ಮೇಲೆ ಪ್ರಭಾವ ಬೀರಿತು. ಇದು ಬಿಜೆಪಿಗೆ ಅನುಕೂಲವಾಯಿತು. ಈಗಲೂ ಕಾಂಗ್ರೆಸ್‌ನಲ್ಲಿ ಒಮ್ಮತದ ಧ್ವನಿ ಕೇಳಿ ಬರುತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮವಾಗಿದ್ದರೆ ಈ ರೀತಿ ವರಿಷ್ಠರ ಮುಂದೆ ಟಿಕೆಟ್‌ಗೆ
ಪ್ರಸ್ತಾಪ ಇಡುವ ಸನ್ನಿವೇಶ ಬರುವುದಿಲ್ಲ ಎಂದು ಪಕ್ಷದ ಕೆಲ ನಾಯಕರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

*ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.