ಆಮೆಗಳನ್ನು ಸುಟ್ಟುತಿಂದು ತೇಗಿದ ಭಕ್ಷಕರು
Team Udayavani, Aug 22, 2021, 3:52 PM IST
ಕುಷ್ಟಗಿ: ಆಮೆಗಳನ್ನು ಅಕ್ರಮವಾಗಿ ಹಿಡಿದು ಸುಟ್ಟು ತಿಂದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಪಟ್ಟಣದ ಕೆಐಡಿಬಿಯ ಗ್ರಾನೈಟ್ ಪಾಲೀಶ್ ಕಾರ್ಖಾನೆ ಬಳಿ, ಸಂತ ಶಿಶುನಾಳ ಶರೀಫ್ ಬಡಾವಣೆ ಹತ್ತಿರದ ನಿರ್ಜನ ಪ್ರದೇಶದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಆಮೆಗಳನ್ನು ಸುಟ್ಟಿರುವುದು ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಆಮೆಗಳ ಸುಟ್ಟ ಚಿಪ್ಪುಗಳು ಬಿದ್ದಿದ್ದು ಅವುಗಳನ್ನು ಹಿಡಿದು ಮಾಂಸವನ್ನು ಸುಟ್ಟು ನಂತರ ತಿನ್ನಲಾಗಿದೆ.
ಈ ಪ್ರದೇಶದಲ್ಲಿ ಸಣ್ಣ ನಾಲೆಯೊಂದು ಇದ್ದು, ಮಳೆಗಾಲದಲ್ಲಿ ಮಾತ್ರ ಇಲ್ಲಿ ನೀರು ಹರಿಯುತ್ತದೆ. ಈ ವೇಳೆ ಕಾಣಿಸಿಕೊಂಡ ಆಮೆಗಳನ್ನು ಹಿಡಿಯಲಾಗಿದೆ. ಆಮೆಯ ಚಿಪ್ಪುಗಳ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ನಾಲ್ಕೈದು ದೊಡ್ಡ ಆಮೆ, ಹಾಗೂ ಚಿಕ್ಕ ಆಮೆಗಳ ಚಿಪ್ಪು ದೊರಕಿದ್ದು ಅವೂ ಸಹ ಸುಟ್ಟು ಕರಕಲಾಗಿವೆ.
ಮಳೆಗಾಲದ ಸಂದರ್ಭದಲ್ಲಿ ಹಳ್ಳ ಹಾಗೂ ಕೆರೆಗಳಲ್ಲಿ ಹೊಸ ನೀರು ಬಂದಾಗ ಆಮೆಗಳು ಆಹಾರ ಅರಸಿ ಬಯಲಿಗೆ ಬರುತ್ತವೆ. ಇದೇ ಸಂದರ್ಭದಲ್ಲಿ ಮೀನು ಹಿಡಿಯುವವರು, ಆಮೆಗಳನ್ನು ಹಿಡಿಯುತ್ತಾರೆ. ಆಮೆಗಳಲ್ಲಿ ಹೆಚ್ಚು ಪ್ರೊಟೀನ್ ಕಾರಣದಿಂದಾಗಿ ಅಕ್ರಮವಾಗಿ ಆಮೆ ಹಿಡಿದು ತಿನ್ನುತ್ತಿದ್ದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಕಳೆದ ಮೇ ತಿಂಗಳಿನಲ್ಲಿ ಮುದೇನೂರು ತೋಳದ ಹಳ್ಳದಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣದ ಬೆನ್ನಲ್ಲೇ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಕಂಡು ಬಂದಿದ್ದು, ಆಮೆಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಆಮೆಗಳ ರಕ್ಷಣೆಗೆ ಅರಣ್ಯ ಇಲಾಖೆ ಪ್ರತಿಬಂಧಕ ಕಾನೂನು ಜಾರಿಯಲ್ಲಿದ್ದರೂ, ಆಮೆಗಳ ರಕ್ಷಣೆ ನಿಜಕ್ಕೂ ಅರಣ್ಯ ಇಲಾಖೆಗೆ ಸವಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.