ರೈಲು ವಸ್ತು ಸಂಗ್ರಹಾಲಯ: ಶುಲ್ಕ ಪಾವತಿಸಿ ಫೋಟೋ ತೆಗೆಯಿರಿ
Team Udayavani, Aug 22, 2021, 5:50 PM IST
ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ನಿರ್ಮಿಸಿರುವ ರೈಲು ವಸ್ತು ಸಂಗ್ರಹಾಲಯದ ಆವರಣದಲ್ಲಿ ಪ್ರವಾಸಿಗರು ಶುಲ್ಕ ಪಾವತಿಸಿ ಫೋಟೋ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿದೆ.
ಮ್ಯೂಸಿಯಂ ಆವರಣದಲ್ಲಿ ಡಿಜಿಟಲ್ ಡಿಎಸ್‌ಎಲ್‌ಆರ್ ಕ್ಯಾಮರಾ ಮತ್ತು ವಿಶೇಷ ಕಾರ್ಯಕ್ರಮಗಳ ಫೋಟೋ ಶೂಟ್‌ಗಳಿಗೆ ಅವಕಾಶ ನೀಡಲಾಗಿದ್ದು, ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವವರು ಪೂರ್ವಾನುಮತಿ ಪಡೆದು, ನಿಗದಿತ ಶುಲ್ಕ ಪಾವತಿಸಿ ಪ್ರೊಫೆಷನಲ್ ಕ್ಯಾಮರಾ ಬಳಸಿ ಫೋಟೋ ತೆಗೆಯಬಹುದಾಗಿದೆ.
ಈ ಹೊಸ ನಿಯಮ ಆ.23ರಿಂದ ಜಾರಿಗೆ ಬರಲಿದ್ದು, ಪ್ರತಿ ಮಂಗಳವಾರ ವಸ್ತು ಪ್ರದರ್ಶನಾಲಯಕ್ಕೆ ರಜಾ ಇರಲಿದೆ. ಈ ವೇಳೆ ಸಂದರ್ಶಕರು ಮತ್ತು ವೀಕ್ಷಕರಿಗೆ ಪ್ರವೇಶ ಇರುವುದಿಲ್ಲ. ಆದರೆ ಪೂರ್ವಾನುಮತಿ ಪಡೆದವರು ಮಂಗಳವಾರ ಟ್ರೈಪಾಡ್ ಮತ್ತು ವಿಶೇಷ ದೀಪಗಳನ್ನು ಬಳಸಿ ವೃತ್ತಿಪರ ಛಾಯಾಚಿತ್ರ ಮತ್ತು ವಿಡಿಯೋಗ್ರಫಿ ತೆಗೆಯಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ:ಮಗಳ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದ ಸಿಎಂ
ಈ ಸಂಬಂಧ ಮಾಹಿತಿಯನ್ನು ಮ್ಯೂಸಿಯಂನ ಸ್ವಾಗತಕೇಂದ್ರದಲ್ಲಿ ಪಡೆಯಬಹುದು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೈಋತ್ಯ ರೈಲ್ವೆ ಒದಗಿಸಿರುವ ಈ ಸದಾವಕಾಶವನ್ನು ಸಾರ್ವಜನಿಕರು, ಪ್ರೇಕ್ಷಕರು ಮತ್ತು ಪ್ರವಾಸಿಗರು ಸದುಪಯೋಗಪಡಿಸಿಕೊಳ್ಳಬೇಕೆಂದು
ವಿಭಾಗೀಯ ರೆಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.