ಸಹಕಾರ ಕ್ಷೇತ್ರ ಅಶಕ್ತಗೊಳಿಸಲು ಹುನ್ನಾರ: ಎಚ್ಕೆ

Team Udayavani, Aug 22, 2021, 6:42 PM IST

22-15

ಹೊಸಪೇಟೆ: ಸಹಕಾರ ಕ್ಷೇತ್ರವನ್ನು ಅಶಕ್ತಗೊಳಿಸುವ ಕಾರ್ಯ ನಡೆಯುತಿದ್ದು, ಸದ್ಯ ಗಂಡಾಂತರದಲ್ಲಿದೆ. ಈ ಬಗ್ಗೆ ಸಹಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ ಎಂದು ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.

ನಗರದ ಮಲ್ಲಿಗಿ ಹೋಟೆಲ್‌ ಸಭಾಂಗಣದಲ್ಲಿ ಶನಿವಾರ ನಡೆದ ಸ್ಥಳೀಯ ವಿಕಾಸ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ನ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರ ಬ್ಯಾಂಕುಗಳಲ್ಲಿ ಸರಕಾರಿ ಸಂಸ್ಥೆಗಳು ಠೇವಣಿ ಇಡಬಾರದು ಎಂದು ಸುತ್ತೋಲೆ ಹೊರಡಿಸಿ ನಿರ್ದೇಶನ ನೀಡಲಾಗುತ್ತಿದೆ.

ಆದರೂ ಸಹಕಾರ ಬ್ಯಾಂಕುಗಳು ಸಶಕ್ತವಾಗಿವೆ. ಹೆಚ್ಚಿನ ಠೇವಣಿ ಸಂಗ್ರಹಿಸಿವೆ. ಆದರೆ, ವಾಣಿಜ್ಯ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಗೆ ನೀಡುವ ಮಾನದಂಡ, ಅವಕಾಶ ಅರ್ಬನ್‌ ಸಹಕಾರ ಬ್ಯಾಂಕುಗಳಿಗೆ ದೊರೆಯುತ್ತಿಲ್ಲ ಎಂದರು. ಅರ್ಬನ್‌ ಸಹಕಾರ ಬ್ಯಾಂಕುಗಳನ್ನು ಈಕ್ವಿಟಿ ಪದ್ಧತಿಗೆ ಒಳಪಡಿಸುತ್ತಿದೆ. ಇದರಿಂದ ಸಹಕಾರ ರಂಗ ಶ್ರೀಮಂತರ ಪಾಲಾಗಲಿದೆ. ಬಡ, ಮಧ್ಯಮ ವರ್ಗದವರ ಹಿತ ಕಾಪಾಡುವುದಕ್ಕಾಗಿ ಸಹಕಾರ ಬ್ಯಾಂಕುಗಳು ಜನ್ಮತಳೆದಿವೆ. ರಾಜ್ಯದಲ್ಲಿ 50 ಸಾವಿರ ಕೋಟಿ ರೂ.ಗು ಅ ಧಿಕ ಬಂಡವಾಳ ಇದೆ. ಇನ್ನೂ ದೇಶದಲ್ಲಿ 5ಲಕ್ಷ ಕೋಟಿ ರೂ. ಬಂಡವಾಳ ಇದೆ. ಇದರಲ್ಲಿ ಶೇ.25ರಷ್ಟನ್ನು ಸಹಕಾರದಿಂದ ಸರಕಾರಿ ವಲಯಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ.

ಕೇಂದ್ರ ಸರಕಾರದ ನೀತಿ ಹಾಗೂ ಆರ್‌ಬಿಐ ನೀತಿಯಿಂದ ಸಹಕಾರ ರಂಗಕ್ಕೆ ಪೆಟ್ಟು ಬೀಳುತ್ತಿದೆ. ಹೀಗಾಗಿ ಸಹಕಾರಿಗಳು ಚರ್ಚಿಸಿ ಉನ್ನತ ಸ್ಥಾನದಲ್ಲಿದ್ದವರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದರು. ಸಹಕಾರ ಬ್ಯಾಂಕುಗಳು ಹಾನಿಗೊಳಗಾದರೆ ಸರಕಾರ ನೆರವು ನೀಡುವುದಿಲ್ಲ. ಆದರೆ, ವಾಣಿಜ್ಯ, ರಾಷ್ಟ್ರೀಕೃತ ಬ್ಯಾಂಕುಗಳ ಬಾಕಿ ಶುದ್ಧಿಗೆ ಲಕ್ಷ ಲಕ್ಷ ಕೋಟಿ ರೂ. ನೆರವು ನೀಡಲಾಗುತ್ತಿದೆ. ಈ ತಾರತಮ್ಯ ಹೋಗಲಾಡಿಸಬೇಕು ಎಂದರು.

ವಿಕಾಸ ಬ್ಯಾಂಕ್‌ ಬೆಳ್ಳಿಹಬ್ಬ ಆಚರಿಸಿಕೊಳ್ಳುತ್ತಿರುವುದು, ಬ್ಯಾಂಕ್‌ನ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಪರಿಶ್ರಮದಿಂದ ಬೆಳೆದಿರುವುದು ಹೆಮ್ಮೆಯ ಸಂಗತಿ ಎಂದರು. ಬ್ಯಾಂಕ್‌ನ ಅಧ್ಯಕ್ಷ ವಿಶ್ವನಾಥ ಹಿರೇಮಠ ಮಾತನಾಡಿ, ಕಳೆದ 25 ವರ್ಷಗಳಲ್ಲಿ ಬ್ಯಾಂಕು ಹಲವು ಪ್ರತಿಕೂಲ ಸನ್ನಿವೇಶ ಎದುರಿಸಿ ಬೆಳೆದಿದೆ. 2003ರಲ್ಲಿ ಸುಳ್ಳು ಆರೋಪದಿಂದ ಜನರು ಠೇವಣಿ ವಾಪಸ್‌ ಕೇಳಿದಾಗ ರಾತ್ರಿ 2 ಗಂಟೆವರೆಗೂ 6 ಕೋಟಿ ರೂ. ಠೇವಣಿ ವಾಪಸ್‌ ನೀಡಲಾಯಿತು. ಇನ್ನೂ 2011ರಲ್ಲೂ ಇಂತಹದ್ದೇ ಸ್ಥಿತಿ ನಿರ್ಮಾಣವಾಗಿತ್ತು.

ಆಗಲೂ ಜನರ ವಿಶ್ವಾಸಗಳಿಸಿ ಬ್ಯಾಂಕು ಸಶಕ್ತವಾಗಿ ಬೆಳೆದಿದೆ ಎಂದರು. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಬಿ.ಎಚ್‌. ಕೃಷ್ಣಾರೆಡ್ಡಿ ಮಾತನಾಡಿದರು. ಕೊಟ್ಟೂರು ಸಂಸ್ಥಾನಮಠದ ಕುರಗೋಡು ಶಾಖಾಮಠದ ಶ್ರೀಪರ್ವತದೇವರು ಸಾನ್ನಿಧ್ಯವಹಿಸಿದ್ದರು. ವಿಕಾಸ ಯುವಕ ಮಂಡಳದ ಸಂಸ್ಥಾಪಕ ಅಧ್ಯಕ್ಷ ದಿವಾಕರ, ಬ್ಯಾಂಕ್‌ನ ಸಿಇಒ ಪ್ರಸನ್ನ ಹಿರೇಮಠ ಮತ್ತಿತರರಿದ್ದರು.

ಬ್ಯಾಂಕಿನ ಮಾಜಿ ನಿರ್ದೇಶಕ ಅನಂತ ಜೋಶಿ, ಅಧಿಕಾರಿ ಅನ್ನಪೂರ್ಣ ನಿರ್ವಹಿಸಿದರು. ಶಂಕುಸ್ಥಾಪನೆ: ನಗರದ ಪಟೇಲ್‌ನಗರದಲ್ಲಿ ಬ್ಯಾಂಕ್‌ ನ ಪ್ರಧಾನ ಕಚೇರಿ ಕಟ್ಟಡಕ್ಕೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.