ಸುಸೂತ್ರವಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
Team Udayavani, Aug 22, 2021, 10:30 PM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರಿಕೃತ ದಾಖಲಾತಿ ಘಟಕ ವತಿಯಿಂದ ಭಾನುವಾರ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್‌ಟಿಟಿಇಟಿ-2021) ಸುಸೂತ್ರವಾಗಿ ನಡೆಯಿತು. ಸುಮಾರು 400 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಶೇ.90 ಮಂದಿ ಅಭ್ಯರ್ಥಿಗಳು ಹಾಜರಾಗಿದ್ದರು.
ಪತ್ರಿಕೆ-1ಕ್ಕೆ 1,02,281 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 93,151 ಮಂದಿ ಪರೀಕ್ಷೆ ಬರೆದಿದ್ದು 9130 ಗೈರು ಹಾಜರಾಗಿದ್ದರು. ಪತ್ರಿಕೆ-2ಕ್ಕೆ 1,49,551 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 1,38,455 ಅಭ್ಯರ್ಥಿಗಳು ಹಾಜರಾಗಿದ್ದು, 11,096 ಗೈರು ಹಾಜರಾಗಿದ್ದರು. ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಕೋವಿಡ್ ನಿಯಮ ಪಾಲಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.
ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಈ ರೀತಿಯ ಘಟನೆಗಳು ನಡೆದಿಲ್ಲ. ಪ್ರಥಮ ಪತ್ರಿಕೆ-1ಕ್ಕೆ ಶೇ.91ರಷ್ಟು ಮತ್ತು ಪತ್ರಿಕೆ -2ಕ್ಕೆ ಶೇ.93 ಹಾಜರಾತಿಯಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ :‘ನಾನು ಕಾಮನ್ ಮ್ಯಾನ್’ : ಸಿಎಂ ಬೊಮ್ಮಾಯಿ ಸರಳತೆಗೆ ಅಪಾರ ಮೆಚ್ಚುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
MUST WATCH
ಹೊಸ ಸೇರ್ಪಡೆ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.