ವಿದ್ಯಾರ್ಥಿಗಳ ಪೋಷಕರಿಗೆ ವಿಶ್ವಾಸ ಮೂಡಿಸಿ: ಸಚಿವರುಗಳಿಗೆ ಸಿಎಂ ಸಲಹೆ
ನಾಳೆಯಿಂದ 9-12ನೇ ತರಗತಿ ಪ್ರಾರಂಭ|ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ| ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ|
Team Udayavani, Aug 22, 2021, 9:55 PM IST
ಬೆಂಗಳೂರು: ನಾಳೆಯಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭಗೊಳ್ಳುತ್ತಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದು ಸಲಹೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಾಳೆಯಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭಗೊಳ್ಳುತ್ತಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದು ಸಲಹೆ ನೀಡುತ್ತೇನೆ. (1/2)
— CM of Karnataka (@CMofKarnataka) August 22, 2021
ಇಂದು(ಆ.22) ಸಂಜೆ ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಮಕ್ಕಳ ಸುರಕ್ಷತೆಯ ಜೊತೆಗೆ ಅವರ ಶೈಕ್ಷಣಿಕ ಭವಿಷ್ಯದ ಹಿತಾಸಕ್ತಿಗಳನ್ನೂ ಪರಿಗಣಿಸಿ, ತಜ್ಞರ ಸಲಹೆಗಳಿಗೆ ಅನುಗುಣವಾಗಿ, ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು, ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ಆತಂಕವಿಲ್ಲದೆ ಸರ್ಕಾರದೊಂದಿಗೆ ಸಹಕರಿಸಲು ಕೋರುತ್ತೇನೆ ಎಂದಿದ್ದಾರೆ.
ಮಕ್ಕಳ ಸುರಕ್ಷತೆಯ ಜೊತೆಗೆ ಅವರ ಶೈಕ್ಷಣಿಕ ಭವಿಷ್ಯದ ಹಿತಾಸಕ್ತಿಗಳನ್ನೂ ಪರಿಗಣಿಸಿ, ತಜ್ಞರ ಸಲಹೆಗಳಿಗೆ ಅನುಗುಣವಾಗಿ, ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು, ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ಆತಂಕವಿಲ್ಲದೆ ಸರ್ಕಾರದೊಂದಿಗೆ ಸಹಕರಿಸಲು ಕೋರುತ್ತೇನೆ. (2/2)
— CM of Karnataka (@CMofKarnataka) August 22, 2021
ಇನ್ನು ಕೋವಿಡ್ ಮಹಾಮಾರಿ ಆರ್ಭಟದಿಂದ ಆರಂಭ ಆಗದೇ ಇದ್ದ ಶಾಲೆಗಳನ್ನು ಕೋವಿಡ್ ಸೋಂಕು ಕಡಿಮೆಯಾಗಿರುವ ಹಿನ್ನೆಲೆ ಸರ್ಕಾರ ಆರಂಭ ಮಾಡಲು ಮುಂದಾಗಿದೆ. ಆ.23ರ ಸೋಮವಾರದಿಂದ 9 ರಿಂದ 12ನೇ ತರಗತಿಗಳು ಶುರುವಾಗಲಿದ್ದು, ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.