ಮುಖ್ಯಮಂತ್ರಿ ಬೊಮ್ಮಾಯಿ ಮುಂದಿದೆ ಪಂಚ ಜಲಸವಾಲು
Team Udayavani, Aug 23, 2021, 7:40 AM IST
ಬೆಂಗಳೂರು: ರಾಜ್ಯದಲ್ಲಿ ಒಂದಲ್ಲೊಂದು ಕಾರಣಕ್ಕೆ ಕುಂಟುತ್ತ ಸಾಗುತ್ತಿರುವ ಐದು ಮಹತ್ತರ ನೀರಾವರಿ ಯೋಜನೆಗಳ ಜಾರಿ ಮಾಡುವ ಸವಾಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲಿದೆ. ಇವುಗಳಿಗೆ ಕೇಂದ್ರ ಸರಕಾರದ ನೆರವು ಮತ್ತು ನೆರೆಯ ರಾಜ್ಯಗಳ ಸಹಕಾರ ಜತೆಗೆ ಅನುಮೋದನೆ ಪಡೆದುಕೊಳ್ಳಬೇಕಿದೆ.
ಕೃಷ್ಣಾ ಮೇಲ್ದಂಡೆಗೆ ಕೇಂದ್ರದ ಸಹಕಾರ :
ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆ ನ್ಯಾ| ಬ್ರಿಜೇಶ್ ಕುಮಾರ್ ಮಿಶ್ರಾ ನೇತೃತ್ವದ ನ್ಯಾಯಮಂಡಳಿ ನೀಡಿರುವ ತೀರ್ಪಿನಿಂದ ತಮಗೆ ಅನ್ಯಾಯವಾಗಿದೆ ಎಂದು ಆಂಧ್ರಪ್ರದೇಶ ಮತ್ತು ತೆಲಂಗಾಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ತೆಲಂಗಾಣ ರಾಜ್ಯ ತನಗೆ ಪ್ರತ್ಯೇಕವಾಗಿ ನೀರಿನ ಹಂಚಿಕೆ ಮಾಡುವಂತೆ ಕೇಳಿಕೊಂಡಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ತಮಗೂ ಅನ್ಯಾಯವಾಗಿದೆ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಪ್ರಕರಣ ಇತ್ಯರ್ಥವಾಗಲು ಕೇಂದ್ರದ ಸಹಕಾರ ಅಗತ್ಯ. ಬೆನ್ನಲ್ಲೇ, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಷೋಷಿಸಲು ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಮುಖ್ಯಮಂತ್ರಿಯವರು ಹೇಳಿದ್ದಾರೆ.
ಕಳಸಾ ಬಂಡೂರಿಗೆ ಕೇಂದ್ರದ ಅನುಮತಿ :
ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದ ಪಾಲಿನ ನೀರಿನ ಬಳಕೆಗೆ ಅನುವಾಗುವಂತೆ ಗೆಜೆಟ್ ಅಧಿಸೂಚನೆ ಹೊರಡಿಸಿತು. ಯೋಜನೆ ಜಾರಿಗೆ ಸಚಿವ ಸಂಪುಟ ಸಹ ಅನುಮೋದನೆಗಳನ್ನು ನೀಡಿದೆ. ಈ ಯೋಜನೆಗೆ 1,675 ಕೋಟಿ ರೂ. ಆಡಳಿತಾತ್ಮಕ ಅನು ಮೋದನೆಯನ್ನೂ ನೀಡಿದೆ. ಆದರೆ, ರಾಜ್ಯ ಸರಕಾರ ನೀರನ್ನು ತಿರುಗಿಸಿ ಯೋಜನೆ ಕೈಗೆತ್ತಿಕೊಂಡಿದೆ ಎಂದು ಗೋವಾ ಸರಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇದರ ಪರಿಶೀಲನೆಗೆ ಸುಪ್ರೀಂಕೋರ್ಟ್ ಸಮಿತಿ ಯೊಂದನ್ನು ರಚಿಸಿದೆ.
ಮೇಕೆದಾಟು :
ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆಗೆ ಮೇಕೆದಾಟು ಬಳಿ ಕಾವೇರಿ ನದಿಗೆ ಸಮಾನಾಂತರ ಜಲಾಶಯ ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಇದಕ್ಕಾಗಿ ಸುಮಾರು 9 ಸಾವಿರ ಕೋಟಿ ರೂ. ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಿದ್ದು, ಸುಮಾರು 60 ಟಿಎಂಸಿ ನೀರು ಸಂಗ್ರಹಿಸುವುದು ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಈ ಯೋಜನೆಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಅಗತ್ಯವಿದೆ. ಯೋಜನೆಗೆ ಪಕ್ಕದ ತಮಿಳುನಾಡು ತಕರಾರು ತೆಗೆಯುತ್ತಿದೆ.
ಎತ್ತಿನಹೊಳೆ :
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಹಾಸನ, ತುಮಕೂರು ಜಿಲ್ಲೆಗಳ ಬರ ನೀಗಿಸಲು 2012ರಲ್ಲಿ ಆರಂಭವಾಗಿರುವ ಎತ್ತಿನಹೊಳೆ ಯೋಜನೆ ಕುಂಟುತ್ತಲೇ ಸಾಗಿದೆ. ಇದಕ್ಕೆ ಯಾವುದೇ ಅಂತಾರಾಜ್ಯ ತಕರಾರಿಲ್ಲ. ಈ ಯೋಜನೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ರಾಜ್ಯ ಸರಕಾರಕ್ಕೆ ಯೋಜನಾ ವೆಚ್ಚ ಹೆಚ್ಚಾಗುತ್ತಲೇ ಇದೆ. ಆರಂಭದಲ್ಲಿ 7 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ತೀರ್ಮಾನಿಸಿದ್ದ ಈ ಯೋಜನೆಗೆ ಪ್ರಸ್ತುತ 21 ಸಾವಿರ ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ.
ಭದ್ರಾ ಯೋಜನೆ :
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಕೇಂದ್ರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದೆ. ಈ ಕುರಿತು ಶೀಘ್ರವೇ ಕೇಂದ್ರ ಸರಕಾರ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ನಿರೀಕ್ಷೆಯಲ್ಲಿ ರಾಜ್ಯದ್ದಾಗಿದೆ. ಸುಮಾರು 21,473 ಕೋಟಿ ರೂ. ವೆಚ್ಚದ ಇದನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿದರೆ, ಕೇಂದ್ರ ಸರಕಾರ ಶೇ. 90 ರಷ್ಟು ಹಣಕಾಸು ಒದಗಿಸುತ್ತದೆ. ರಾಷ್ಟ್ರೀಯ ಯೋಜನೆ ಎಂದು ಘೋಷಣೆಯಾದರೆ, ಕೇಂದ್ರ 16,125 ಕೋಟಿ ರೂ. ಭರಿಸಲಿದೆ.
ನವಲಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಆಂಧ್ರ, ತೆಲಂಗಾಣದ ಒಪ್ಪಿಗೆ ಅಗತ್ಯ :
ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ ನೀರು ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ. ಹೀಗಾಗಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ನವಲಿ ಗ್ರಾಮದ ಸಮೀಪ ಸಮತೋಲನ ಜಲಾಶಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಜಾರಿಗೆ ರಾಜ್ಯ ಸರಕಾರ ಯೋಜನಾ ವರದಿ ಸಿದ್ಧಪಡಿಸಲು 14.20 ಕೋಟಿ ರೂ. ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ನವಲಿ ಸಮತೋಲಿತ ಜಲಾಶಯ ನಿರ್ಮಾಣದಿಂದ ಪ್ರಸ್ತುತ ತುಂಗ ಭದ್ರಾ ಜಲಾಶಯದ ನೀರು ಸಂಗ್ರಹ ಸಾಮರ್ಥ್ಯ 130 ಟಿಎಂಸಿಯಷ್ಟು ಇದ್ದರೂ 31.616 ಟಿಎಂಸಿಯಷ್ಟು ಹೂಳು ತುಂಬಿರುವ ಕಾರಣದಿಂದ ಕನಿಷ್ಟ 30 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಈ ಯೋಜನೆ ಜಾರಿಗೊಳ್ಳಲು ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ಸಹಮತ ಅಗತ್ಯವಿದೆ.
– ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.