ವಿಪಕ್ಷ ಪ್ರಧಾನಿ ಭೇಟಿ ಮಾಡಲಿ: ಸಿಎಂ
Team Udayavani, Aug 23, 2021, 6:55 AM IST
ಹುಬ್ಬಳ್ಳಿ: ಜಾತಿಗಣತಿ ವಿಷಯ ಕುರಿತು ವಿಪಕ್ಷಗಳು ಪ್ರಧಾನಿಯವರನ್ನು ಭೇಟಿಯಾಗಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ತಮ್ಮ ನಿವಾಸದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವಿಷಯ ನ್ಯಾಯಾಲಯದಲ್ಲಿದೆ. ಈ ಕುರಿತು ಪ್ರಧಾನಿಗಳನ್ನು ಭೇಟಿಯಾಗಲು ವಿಪಕ್ಷಗಳ ಮುಖಂಡರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ ಎಂದರು.
ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ಇಲ್ಲ :
ಗಣೇಶ ಚತುರ್ಥಿ ಆಚರಣೆ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏನೂ ಹೇಳುವುದಿಲ್ಲ ಎಂದರು.
ರಕ್ಷಾ ಬಂಧನ : ಇದೇ ವೇಳೆ ಮುಖ್ಯಮಂತ್ರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ರಕ್ಷಾ ಬಂಧನ ಹಿನ್ನೆಲೆಯಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸಹೋದರಿಯರು ರಾಖೀ ಕಟ್ಟಿ ಹಬ್ಬದ ಶುಭಾಶಯ ಹೇಳಿದರು.
ಗೃಹ ಪ್ರವೇಶದಲ್ಲಿ ಭಾಗಿ :
ಅನಂತರ ಬೊಮ್ಮಾಯಿಯವರು ಈರಪ್ಪ ಕಾಡಪ್ಪ ನವರ ಕುಟುಂಬದವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ವಿಮಾನ ನಿಲ್ದಾಣಕ್ಕೆ ತೆರಳಿ ಹಂಪಿ ಯಿಂದ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರ ಸಹೋದರನ ಪುತ್ರನ ವಿವಾಹದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.