ಪೌರತ್ವ ತಿದ್ದುಪಡಿ ಕಾಯ್ದೆ ಅಗತ್ಯ ಏಕೆ ಎನ್ನುವುದು ಈಗ ತಿಳಿಯುತ್ತಿದೆ: ಹರ್ದೀಪ್ ಸಿಂಗ್ ಪುರಿ

Team Udayavani, Aug 23, 2021, 1:35 PM IST

why it was necessary to enact the Citizenship Amendment Act : Hardeep Singh Puri

ನವ ದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಅಗತ್ಯ ಏಕೆ ಎನ್ನುವುದು ನಿಖರವಾಗಿ ಈಗ ತಿಳಿದು ಬರುತ್ತಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಮೂಲ ಭಾರತೀಯರನ್ನು ಭಾರತಕ್ಕೆ ಕರೆತರುತ್ತಿರುವ ಪ್ರಯತ್ನಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಂದೂ ಮತ್ತು ಸಿಖ್ ಅಲ್ಪಸಂಖ್ಯಾತರಿಗೆ ಒತ್ತು ನೀಡುತ್ತಾ, ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತ ತನ್ನ ಮೂಲ ದೇಶವಾಸಿಗಳನ್ನು ಸ್ಥಳಾಂತರ ಮಾಡುತ್ತಿದೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡಿದ ಅವರು,  ‘ನಮ್ಮ  ನೆರೆರಾಷ್ಟ್ರಗಳ ಇತ್ತೀಚಿನ ಬೆಳವಣಿಗೆಗಳಿಂದಾಗಿ ಸಿಖ್ಖರು ಮತ್ತು ಹಿಂದೂಗಳು ಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಸಂದರ್ಭವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಏಕೆ ಅಗತ್ಯ ಎಂಬುದನ್ನು ಸ್ಪಷ್ಟವಾಗಿ ಕಾಣಿಸುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಆರತಿ ಬೆಳಗಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡ ಸಚಿವ ಕೆಎಸ್‌ ಈಶ್ವರಪ್ಪ

2019ರಲ್ಲಿ ಸಿಎಎ ಕಾಯ್ದೆಯನ್ನು ಅಂಗೀಕರಿಸಿದಾಗ ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಭಾರಿ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಗಲಭೆಯಲ್ಲಿ ಸುಮಾರು 100 ಮಂದಿ ಸಾವನ್ನಪ್ಪಿದ್ದರು.

2015ಕ್ಕೂ ಮುನ್ನ ಭಾರತಕ್ಕೆ ಬಂದ ನೆರೆಹೊರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳ ಕಿರುಕುಳಕ್ಕೊಳಗಾದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಈ ಕಾನೂನು ಪೌರತ್ವವನ್ನು ಒದಗಿಸುತ್ತದೆ.

2019 ರಲ್ಲಿ ಅಂಗೀಕರಿಸಲ್ಪಟ್ಟು, ಜನವರಿ 10, 2020 ರಲ್ಲಿ ಜಾರಿಗೆ ಬಂದಿತು.ಅಫ್ಗಾನಿಸ್ತಾನ ಬಿಕ್ಕಟ್ಟನ್ನು ಸೂಕ್ಷ್ಮವವಾಗಿ ಪರಿಶೀಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ‘ಆಫ್ಗಾನ್ ಸಹೋದರರು ಮತ್ತು ಸಹೋದರಿಯರಿಗೆ’ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ವಿಶೇಷವಾಗಿ ಆಶ್ರಯವನ್ನು ಎದುರು ನೋಡುತ್ತಿರುವ ಸಿಖ್ ಮತ್ತು ಹಿಂದೂ ಅಲ್ಪಸಂಖ್ಯಾತರ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ.

ತಾಲಿಬಾನ್ ಉಗ್ರ ಸಂಘಟನೆ ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಲ್ಲಿನ ಪರಿಸ್ಥಿತಿ ಹದಗೆಟ್ಟಿರುವ ಕಾರಣದಿಂದಾಗಿ ಭಾರತ ನಿನ್ನೆ(ಆದಿತ್ಯವಾರ, ಆಗಸ್ಟ್ 23) 329 ನಾಗರಿಕರು ಮತ್ತು ಇಬ್ಬರು ಅಫ್ಘಾನ್ ಶಾಸಕರು ಒಳಗೊಂಡು ಸುಮಾರು 400 ಮಂದಿಯನ್ನು ಮೂರು ವಿಮಾನಗಳ ಮೂಲಕ ಏರ್ ಲಿಫ್ಟ್ ಮಾಡಿದೆ.

ಇದನ್ನೂ ಓದಿ : ಕೊಲ್ಯ ಕನೀರುತೋಟ ನಿವಾಸಿ ಪ್ರಸಾದ್ ಆನಂದ್ ಸುರಕ್ಷಿತವಾಗಿ ಅಫ್ಗಾನಿಸ್ತಾನದಿಂದ ತವರಿಗೆ.!

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.