26 ರಿಂದ ಪ್ರತಿಜ್ಞಾ ಪಂಚಾಯತಿ ಅಭಿಯಾನ

| ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಿ | ಮೀಸಲಾತಿ ನೀಡದಿದ್ದಲ್ಲಿ ಹೋರಾಟ ಅನಿವಾರ್ಯ

Team Udayavani, Aug 23, 2021, 4:15 PM IST

hdtretret

ಹುನಗುಂದ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಆ. 26ರಿಂದ ಮಲೈ ಮಹದೇಶ್ವರ ಬೆಟ್ಟದ ಶಕ್ತಿ ಪೀಠದಿಂದ ಮೈಸೂರ, ಕಿತ್ತೂರು, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಜ್ಞಾ ಪಂಚಾಯತಿ ಅಭಿಯಾನ ಆರಂಭಿಸಲಾಗುವುದು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ತಾಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠದಲ್ಲಿ ನಡೆದ 2ಎ ಮೀಸಲಾತಿಯ ಪ್ರತಿಜ್ಞಾ ಪಂಚಾಯತ ಅಭಿಯಾನದ ಪೂರ್ವಭಾವಿ ಸಭೆ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಆ. 26ರಿಂದ ಪ್ರತಿಜ್ಞಾ ಪಂಚಾಯತಿ ಆರಂಭವಾಗುವ ಮೀಸಲಾತಿ ಹೋರಾಟವು ಸೆ. 30ರವರೆಗೆ ಅಭಿಯಾನ ನಡೆಯಲಿದೆ. ಅಷ್ಟರಲ್ಲಿಯೇ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೇ ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಅ. 1ರಂದು ಮಾಜಿ ಮುಖ್ಯಮಂತ್ರಿ ಜೆ.ಎಚ್‌.ಪಟೇಲರ ಜನ್ಮ ದಿನದಂದು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು.

ಕಳೆದ ಜ. 14ರಿಂದ 2ಎ ಮೀಸಲಾತಿಗಾಗಿ ಕೂಡಲಸಂಗಮದಿಂದ ಬೆಂಗಳೂರದವರೆಗೆ ಪಾದಯಾತ್ರೆ ಕೈಗೊಂಡ ಸಂದರ್ಭದಲ್ಲಿ ಅಂದಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಯಿ ಪಾದಯಾತ್ರೆಗೆ ಸಹಾಯ ಸಹಕಾರವನ್ನು ನೀಡುವ ಮೂಲಕ ಸರ್ಕಾರ ಮತ್ತು ಪಂಚಮಸಾಲಿ ಸಮುದಾಯದ ಮಧ್ಯದ ಕೊಂಡಿಯಾಗಿ ಕಾರ್ಯ ನಿರ್ವಹಿಸಿದ್ದರು. ಮುಖ್ಯಮಂತ್ರಿಗಳಾದ ಬಳಿಕ ಮೀಸಲಾತಿ ಕಲ್ಪಿಸುವುದರ ಬಗ್ಗೆ ಕಾಲಾವಕಾಶ ಕೇಳಿದ್ದು ಸೆ. 30ರೊಳಗಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಯನ್ನು ಮುಖ್ಯಮಂತ್ರಿಗಳು ಘೋಷಿಸುವ ಭರವಸೆಯಿದೆ. ಆದರೂ ಕೂಡಾ ಸಮುದಾಯದ ಮೀಸಲಾತಿಗಾಗಿ ಹೋರಾಟ ಅನಿವಾರ್ಯ ಎಂದರು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸದನದಲ್ಲಿ ಚರ್ಚಿಸಿ ಸರ್ಕಾರ 6 ತಿಂಗಳು ಗಡುವು ಕೇಳಿತ್ತು. ಸದ್ಯ ನಾಲ್ಕು ತಿಂಗಳು ಕಳೆದಿದ್ದು, ಸರ್ಕಾರವನ್ನು ಎಚ್ಚರಿಸಲು ಪ್ರತಿಜ್ಞಾ ಪಂಚಾಯತಿ ಅಭಿಯಾನವನ್ನು ಪೂಜ್ಯರ ನೇತೃತ್ವದಲ್ಲಿ ಮಾಡುವ ನಿರ್ಧಾರ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡುತ್ತಾರೆ ಎಂಬ ಭರವಸೆಯಿದೆ. ಗೌಡ ಲಿಂಗಾಯತ, ಮಲೇಗೌಡ, ದೀಕ್ಷಾ ಲಿಂಗಾಯತರು ಸಹ ಪಂಚಮಸಾಲಿಗಳಾಗಿದ್ದು ಅವರು ಮೀಸಲಾತಿ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು ಪಂಚಮಸಾಲಿ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದು ಇವರು ಮುಖ್ಯಮಂತ್ರಿನಾ ? ಇಲ್ಲ ಪ್ರಧಾನಮಂತ್ರಿನಾ ಎಂದು ಪ್ರಶ್ನಿಸುವ ಮೂಲಕ ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕೇಳುತ್ತಿರುವ ಮೀಸಲಾತಿಯ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ಪಂಚನದಿಗಳ ರಾಜ್ಯಾಧ್ಯಕ್ಷ ಅಮರೇಶ ನಾಗೂರ,ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಶಂಕ್ರಪ್ಪ ನೇಗಲಿ, ಶಿವಾನಂದ ಕಂಠಿ, ನಿಂಗಪ್ಪ ಕೋಟಿ, ಸೋಮನಗೌಡ ಪಾಟೀಲ, ಹುಚ್ಚಪ್ಪ ಐಹೊಳೆ, ಮಹಾಂತೇಶ ಹೊಸೂರ, ಬಸವರಾಜ ಗೊಣ್ಣಾಗರ, ಎಸ್‌.ಬಿ. ದಾನಪ್ಪಗೋಳ, ಸಂಗಣ್ಣ ಗಂಜೀಹಾಳ, ರವಿ ಹುಚನೂರ, ಮಲ್ಲಿಕಾರ್ಜುನ ವೀರಾಪುರ, ಶೇಖರಗೌಡ ಗೌಡರ, ಚನ್ನವೀರ ಅಂಗಡಿ, ಶಂಕರ ತೋಟದ, ಮುತ್ತಣ್ಣ ಗಂಜೀಹಾಳ ಇದ್ದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.