ನಿರ್ಜೀವ ಪಾಲಿಸಿಗಳಿಗೆ ಮತ್ತೆ ಚಾಲನೆ ನೀಡಲು ಮುಂದಾದ ಎಲ್‌ಐಸಿ
Team Udayavani, Aug 23, 2021, 2:00 PM IST
ಮುಂಬಯಿ : ಈಗಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಜೀವ ವಿಮೆ ಪಾಲಿಸಿಯ ರಿಸ್ಕ್ ಕವರ್ ಮುಂದುವರಿಸಲು ಭಾರತೀಯ ಜೀವ ವಿಮಾ ನಿಗಮವು ಹೊಸ ಅವಕಾಶವೊಂದನ್ನು ನೀಡಲು ಮುಂದಾಗಿದೆ. ಅದರಂತೆ ಯಾವುದೇ ಕಾರಣಗಳಿಂದ ಲ್ಯಾಪ್ಸ್ ಆಗಿರುವ ಪಾಲಿಸಿಗಳಿಗೆ ಮತ್ತೆ ಜೀವ ತುಂಬುವ ಅಭಿಯಾನವನ್ನು ಆ. 23ರಿಂದ ಅ. 22ರ ವರೆಗೆ ನಡೆಸಲು ನಿರ್ಧರಿಸಿದೆ.
ಈ ಅಭಿಯಾನದಲ್ಲಿ ಪಾವತಿಗೆ ಬಾಕಿ ಇರುವ ಮೊತ್ತದ ಮೇಲಿನ ವಿಳಂಬ ಶುಲ್ಕದಲ್ಲೂ ರಿಯಾಯಿತಿ ನೀಡಲಾಗುವುದು. ಆದರೆ ಈ ಕೊಡುಗೆಯು ಟರ್ಮ್ ಅಶ್ಶೂರೆನ್ಸ್ ಹಾಗೂ ಹೈ ರಿಸ್ಕ್ ಪ್ಲಾನ್‌ಗಳಿಗೆ ಅನ್ವಯಿಸುವುದಿಲ್ಲ. ಜತೆಗೆ ಮೆಡಿಕಲ್ ಸಂಬಂಧಿಸಿದ ದಾಖಲೆಗಳಲ್ಲೂ ರಿಯಾಯಿತಿ ನೀಡಲಾಗುವುದಿಲ್ಲ. ಈ ವಿಶೇಷ ಅಭಿಯಾನದಲ್ಲಿ 5 ವರ್ಷಗಳಿಂದೀಚೆಗೆ ಲ್ಯಾಪ್ಸ್ ಆಗಿರುವ ಅರ್ಹ ಪಾಲಿಸಿಗಳಿಗೆ ಮತ್ತೆ ಚಾಲನೆ ನೀಡಬಹುದು.
ಇದನ್ನೂ ಓದಿ :ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ: ಗೋವಾ ಸರ್ಕಾರ
ಪಾವತಿಗೆ ಬಾಕಿಯಿರುವ 1 ಲಕ್ಷ ರೂ. ಮೊತ್ತಕ್ಕೆ ವಿಳಂಬ ಶುಲ್ಕದಲ್ಲಿ ಶೇ. 20ರಷ್ಟು (ಗರಿಷ್ಠ 2 ಸಾವಿರ ರೂ.), 1ರಿಂದ 3 ಲಕ್ಷ ರೂ. ವರೆಗಿನ ಮೊತ್ತಕ್ಕೆ ಶೇ. 25 (ಗರಿಷ್ಠ 2,500 ರೂ.) ಹಾಗೂ 3 ಲಕ್ಷಕ್ಕಿಂತ ಮೇಲ್ಪಟ್ಟ ಮೊತ್ತಕ್ಕೆ ಶೇ. 30 (ಗರಿಷ್ಠ 3 ಸಾ.ರೂ.) ರಿಯಾಯಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ www.licindia.in ಅನ್ನು ಪರಿಶೀಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.