ಕೋವಿಡ್ ಸುರಕ್ಷತಾ ನಿಯಮದೊಂದಿಗೆ ಸರ್ಕಾರ ಶಾಲೆಗಳನ್ನು ತೆರೆದಿದೆ: ಸಚಿವ ಅಶೋಕ್
Team Udayavani, Aug 23, 2021, 6:48 PM IST
ಬೆಂಗಳೂರು : ಸೋಮವಾರದಿಂದ ಭೌತಿಕವಾಗಿ ಒಂಬತ್ತು ಮತ್ತು ಹತ್ತನೇ ತರಗತಿಗಳು ಆರಂಭಗೊಂಡ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಪದ್ಮನಾಭನಗರ ಕ್ಷೇತ್ರದ ಆರ್ ಕೆ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿದರು.
ಈ ವೇಳೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಮಾತನಾಡಿದ ಸಚಿವರು ಕೋವಿಡ್ ನ ಎಲ್ಲಾ ನಿಯಮಗಳನ್ನ ಪಾಲಿಸುವಂತೆ ಸೂಚಿಸಿದರು. ಹಾಗೆಯೇ ಆತ್ಮಸ್ಥೈರ್ಯ ತುಂಬುವ ಮಾತುಗಳನ್ನಾಡಿದ ಅವರು,”ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸುರಕ್ಷಿತ ವಾತಾವರಣ ಸೃಷ್ಟಿಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡೆ ಶಾಲೆಗಳನ್ನು ತೆರೆದಿದೆ. ಎಲ್ಲರೂ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆಯೇ ಎನ್ನುವದನ್ನು ಖಚಿತಪಡಿಸಿಕೊಳ್ಳಲು ಶಾಲೆಗಳಿಗೆ ಭೇಟಿ ನೀಡಲಾಗುತ್ತಿದೆ. ಇದರ ಸಾಧಕ ಬಾಧಕಗಳ ಮೇಲೆ ಉಳಿದ ತರಗತಿಗಳನ್ನ ಆರಂಭಿಸುವ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು”, ಎಂದು ತಿಳಿಸಿದರು.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 1151 ಹೊಸ ಪ್ರಕರಣಗಳು ಪತ್ತೆ|1442 ಸೋಂಕಿತರು ಗುಣಮುಖ
ಆರಾಧನೆ ನಿಮಿತ್ತ ರಾಯರ ಮಠಕ್ಕೆ ಭೇಟಿ:
ಆರ್ ಅಶೋಕ ಅವರು ರಾಘವೇಂದ್ರ ಸ್ವಾಮಿಗಳ 350 ನೇ ಪೂರ್ವಾರಾಧನೆಯ ನಿಮಿತ್ತ ದೇವಗಿರಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ನಾಡಿನ ಜನರ ಆರೋಗ್ಯಕ್ಕಾಗಿ ಗುರು ರಾಯರ ಬಳಿ ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.