ಹಾಲ್‌ಮಾರ್ಕ್‌ ಕಡ್ಡಾಯದಿಂದ ತೊಂದರೆ ಜಾಸ್ತಿ: ಬದ್ರಿನಾಥ್‌

Team Udayavani, Aug 23, 2021, 6:59 PM IST

23-11

ದಾವಣಗೆರೆ: ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಆ. 23 ರಂದು ದಾವಣಗೆರೆ ಒಳಗೊಂಡಂತೆ ದೇಶದಾದ್ಯಂತ ಚಿನ್ನ, ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡಲಾಗುವುದು ಎಂದು ದಿ| ದಾವಣಗೆರೆ ಜ್ಯೂಯಲರ್ ಅಸೋಸಿಯೇಷನ್‌ ಉಪಾಧ್ಯಕ್ಷ ಆರ್‌.ಡಿ. ಬದ್ರಿನಾಥ್‌ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಕಡ್ಡಾಯಗೊಳಿಸಿರುವ ಎಚ್‌ ಯುಐಡಿಯಿಂದ (ಹಾಲ್‌ಮಾರ್ಕ್‌ ಯೂನಿಕ್‌ ಐಡೆಂಟಿಕೇಷನ್‌ ಡಿಸ್ಕಿಪ್ಷನ್‌) ಚಿನ್ನ, ಬೆಳ್ಳಿ ವರ್ತಕರು ತೊಂದರೆ ಅನುಭವಿಸಬೇಕಾಗುತ್ತದೆ. ಎಚ್‌ಯುಐಡಿ ರದ್ದುಗೊಳಿಸಬೇಕು ಇಲ್ಲವೇ ಸರಳೀಕಣಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ದೇಶದಾದ್ಯಂತ ಚಿನ್ನ-ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು. ದಾವಣಗೆರೆ ನಗರದಲ್ಲಿ 700ಕ್ಕೂ ಅಧಿಕ ಚಿನ್ನ-ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯ ಮಾಡಿರುವುದರಿಂದ ಚಿನ್ನ-ಬೆಳ್ಳಿ ವ್ಯಾಪಾರಸ್ಥರಿಗೆ ಸಾಕಷ್ಟು ಸಮಸ್ಯೆ ಆಗುತ್ತದೆ. ಯಾವುದೇ ಚಿನ್ನ-ಬೆಳ್ಳಿ ಆಭರಣ ತಯಾರಿಸಿ ನೋಂದಣಿ ಹಾಗೂ ಎಚ್‌ಯುಐಡಿ ಮಾಡಿದ ನಂತರ ಯಾವುದೇ ಕಾರಣಕ್ಕೂ ಆಭರಣಗಳ ವಿನ್ಯಾಸ, ತೂಕದಲ್ಲಿ ಬದಲಾವಣೆ ಮಾಡುವಂತೆಯೇ ಇಲ್ಲ. ಗ್ರಾಹಕರು ಏನೇ ಇಷ್ಟಪಟ್ಟರೂ ವ್ಯಾಪಾರಸ್ಥರು ಏನೂ ಮಾಡುವಂತಿಲ್ಲ. ಹಾಗಾಗಿ ಸಾಕಷ್ಟು ಸಮಸ್ಯೆ ಆಗುತ್ತದೆ ಎಂದು ಹೇಳಿದರು. ಎಚ್‌ಯುಐಡಿ ಕಡ್ಡಾಯ ಮಾಡಿರುವುದರಿಂದ ಲೆಕ್ಕಪತ್ರ ಇಡುವುದು, ವ್ಯಾಪಾರ-ವಹಿವಾಟು ನಡೆಸುವುದು ಒಳಗೊಂಡಂತೆ ಸಾಕಷ್ಟು ಪ್ರಾಯೋಗಿಕ ತೊಂದರೆಗಳನ್ನ ಅನುಭವಿಸಬೇಕಾಗುತ್ತದೆ.

ನಂಬಿಕೆ ಮತ್ತು ವಿಶ್ವಾಸದ ಆಧಾರದ ಮೇಲೆಯೆ ನಡೆಯುವಂತಹ ಚಿನ್ನ-ಬೆಳ್ಳಿ ವ್ಯಾಪಾರ ಮುಂದುವರಿಸುವುದಕ್ಕೆ ತೊಂದರೆ ಆಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯಗೊಳಿಸಿರುವುದನ್ನ ಕೈ ಬಿಡಬೇಕು ಇಲ್ಲವೇ ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು. ಚಿನ್ನ-ಬೆಳ್ಳಿ ಆಭರಣಗಳಲ್ಲಿ ತಯಾರಿಕೆ ಒಳಗೊಂಡಂತೆ ಎಲ್ಲ ಹಂತದಲ್ಲಿ ಪಾರದರ್ಶಿಕತೆ, ಪರಿಶುದ್ದತೆ ಕಾಪಾಡಿ ಕೊಳ್ಳುವ ಸರ್ಕಾರದ ಉದ್ದೇಶವನ್ನ ಸ್ವಾಗತಿಸುತ್ತೇವೆ.

ಆದರೆ ಗ್ರಾಹಕರು ಅಪೇಕ್ಷೆ, ಹಣ, ಬೇಡಿಕೆಗೆ ಅನುಗುಣವಾಗಿ ಎಚ್‌ಯುಐಡಿ ಕಡ್ಡಾಯದಿಂದ ವ್ಯಾಪಾರ-ವಹಿವಾಟು ನಡೆಸುವುದು ಕಷ್ಟವಾಗುತ್ತದೆ. ಚಿನ್ನ-ಬೆಳ್ಳಿ ವಹಿವಾಟು ಕ್ಷೇತ್ರದಲ್ಲಿ ಪರಿಶುದ್ಧತೆ, ಪಾರದರ್ಶಿಕತೆ ಬಯಸುವಂತಹ ಸರ್ಕಾರ ರಾಜಸ್ತಾನದ ಕುಂದನ್‌ ಜ್ಯೂಯಲರಿ, ಝಡಾವ್‌ ಜ್ಯೂಯಲರಿಗೆ ಎಚ್‌ಯುಐಡಿನಿಂದ ರಿಯಾಯತಿ ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು. ಸಂಘದ ಗೌರವಾಧ್ಯಕ್ಷ ಶಂಕರ್‌ ಎನ್‌. ವಿಠuಲಕರ್‌, ಅಧ್ಯಕ್ಷ ಅರುಣಾಚಲ ಎನ್‌. ರೇವಣಕರ್‌, ನಲ್ಲೂರು ಎಸ್‌. ರಾಜ್‌ಕುಮಾರ್‌, ಮಂಜುನಾಥ್‌ ವರ್ಣೇಕರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.