ದ.ಕ.: ಆ. 30ರಿಂದ ಪಿಯು ತರಗತಿ
Team Udayavani, Aug 24, 2021, 7:04 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದ. ಕ. ಜಿಲ್ಲೆಯಲ್ಲಿ ಕೆಲವು ಷರತ್ತು¤ಗಳಿಗೊಳಪಟ್ಟು ಆ. 30ರಿಂದ ಹಂತಹಂತವಾಗಿ ಪದವಿಪೂರ್ವ ತರಗತಿಗಳನ್ನು ಪ್ರಾರಂಭಿಸಲು ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‌ಟಿಪಿಸಿಆರ್ ವರದಿಯನ್ನು ತರಬೇಕು. ಸೋಂಕಿತರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿರಬೇಕು. ಕ್ವಾರಂಟೈನ್‌ನಿಂದ ಹೊರಬಂದ ಅನಂತರ ಮತ್ತೂಮ್ಮೆ ಆರ್‌ಟಿಪಿಸಿಆರ್ ತಪಾಸಣೆ ಮಾಡಿಸಿ ಕೊಳ್ಳಬೇಕು. ರೋಗ ಲಕ್ಷಣಗಳು ಕಂಡುಬಂದರೆ ಸ್ಥಳೀಯ ಆಡಳಿತಕ್ಕೆ ಕೂಡಲೇ ತಿಳಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತಿಗೊಳಪಟ್ಟು ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗುವುದು. ಇದೇ ಆಧಾರದಲ್ಲಿ ಮುಂದಿನ ದಿನಗಳಲ್ಲಿ 9, 10ನೇ ತರಗತಿಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾಲೇಜುಗಳಿಗೆ ಸೂಚನೆ :
ವಿದ್ಯಾರ್ಥಿಗಳು ಸುರಕ್ಷಿತವಾಗಿ ಕಾಲೇಜಿಗೆ ಹಾಜರಾಗುವ ಬಗ್ಗೆ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ಸಿದ್ಧಪಡಿಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಕಾರದ ಎಸ್‌ಒಪಿಯಂತೆ ಕ್ರಮ ಕೈಗೊಳ್ಳಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಡಿಸಿ ತಿಳಿಸಿದರು.
ಸಚಿವ ಎಸ್. ಅಂಗಾರ ಮಾತನಾಡಿ, ಕೋವಿಡ್ ಸೋಂಕಿನ ಈ ಸಂದರ್ಭದಲ್ಲಿ ಕಾಲೇಜುಗಳ ಕೈಗೊಳ್ಳುವ ನಿಯಮಗಳನ್ನು ಕೂಡಲೇ ತಿಳಿಸಬೇಕು ಎಂದರು. ಈ ಹಿಂದೆ ಎಸೆಸೆಲ್ಸಿ ಹಾಗೂ ಇತರ ಪರೀಕ್ಷೆಗಳನ್ನು ನಡೆಸಿದ ವೇಳೆ ಕೈಗೊಂಡ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಿದರು.
ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾೖಕ್, ಹರೀಶ್ ಪೂಂಜ, ಪ್ರತಾಪ್‌ಚಂದ್ರ ನಾಯಕ್ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಎಸ್‌ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಜಿ.ಪಂ. ಉಪಕಾರ್ಯದರ್ಶಿ ಆನಂದ್ ಕುಮಾರ್, ಎಡಿಸಿ ಪ್ರಜ್ಞಾ ಅಮ್ಮೆಂಬಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.