ಉತ್ತರಾಖಂಡ : ತಾನಕ್ ಪುರ್ – ಚಂಪಾವತ್ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿತ : ಸಂಚಾರ ಸ್ಥಗಿತ
ಸ್ವಾಲಾ ಬಳಿ ಗುಡ್ಡ ಕುಸಿತ, ಭಾರಿ ಗಾತ್ರದ ಬಂಡೆಗಳು ಉರುಳಿ ಬಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
Team Udayavani, Aug 24, 2021, 11:44 AM IST
ತಾನಕ್ ಪುರ್ : ಉತ್ತರಾಖಂಡದಲ್ಲಿ ಮತ್ತೊಂದು ಭಾರಿ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದ್ದು, ತಾನಕ್ ಪುರ ಹಾಗೂ ಚಂಪಾವತ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಚಂಪಾವತ್ ಸಮೀಪದ ಸ್ವಾಲಾ ಬಳಿ ಗುಡ್ಡ ಕುಸಿತ, ಭಾರಿ ಗಾತ್ರದ ಬಂಡೆಗಳು ಉರುಳಿ ಬಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : ಸಮಯಕೋಸ್ಕರ ನಾವು ಕಾಯಬೇಕೆ ಹೊರತು ಸಮಯ ನಮಗಾಗಿ ಕಾಯುವುದಿಲ್ಲ…
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೀಡಿಯೋಗಳಲ್ಲಿ ಭಾರಿ ಗಾತ್ರದ ಮರಗಳು ಧರಾಶಾಯಿಯಾಗುತ್ತಿರುವುದು, ದೊಡ್ಡ ದೊಡ್ಡ ಬಂಡೆಗಳು ಉರುಳಿ ಬೀಳುತ್ತಿರುವುದು ಭಯಾನಕವಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.
Footage coming from NH9 (Tanakpur to Pithoragarh),
STAY Safe . @Champawatpolice @uttarakhandcops @PIBDehradun @DMChampawat @ShivAroor pic.twitter.com/z6bTmG1oZu— Sachin Bhatt ?? (@bhattsachin30) August 23, 2021
ಈ ಬಗ್ಗೆ ಪ್ರತಿಕ್ರಿಯಿಸಿದ ಅಲ್ಲಿನ ಜಿಲ್ಲಾಧಿಕಾರಿ ವಿನೀತ್ ತಾಮೋರ್, ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಹೆದ್ದಾರಿಯ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸಂಚಾರಕ್ಕೆ ಮುಕ್ತವಾಗುವುದಕ್ಕೆ ಇನ್ನೂ ಎರಡು ದಿನಗಳ ಕಾಲ ತೆಗೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದರು ದಾರಿ ಮಧ್ಯದಲ್ಲಿ ಸಿಲುಕಿದ್ದಾರೆ. ಗುಡ್ಡ ಕುಸಿತದ ಪರಿಣಾಮದಿಂದಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೇ, ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ರಸ್ತೆ ತೆರವು ಕಾರ್ಯಾಚರಣೆಯನ್ನು ಶೀಘ್ರದಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಮುಗಿಸುವಂತೆ ಆದೇಶಿಸಲಾಗಿದೆ ಎಂದಿದ್ದಾರೆ.
ಇನ್ನು, ಕೆಲವು ವಾರಗಳ ಹಿಂದೆ, ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದ ಕಾರಣದಿಂದಾಗಿ ಸುಮಾರು 28 ಮಂದಿ ಮೃತ ಪಟ್ಟಿದ್ದರು.
ಇದನ್ನೂ ಓದಿ : ನಾಲ್ಕು ವರ್ಷಗಳಿಂದ ಚಿಂಪಾಂಜಿ ಜತೆ ಮಹಿಳೆಯ ಲವ್ ಅಫೇರ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.