ಬಿಲ್ಲವ ಭವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತ್ಯುತ್ಸವ

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ

Team Udayavani, Aug 24, 2021, 2:24 PM IST

ಬಿಲ್ಲವ ಭವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತ್ಯುತ್ಸವ

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆಯು ಆ. 23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ. 23ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಯಿಂದ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಓಂ ನಮೋ ನಾರಾಯಣಾಯಃ ಜಪಯಜ್ಞ, ಭಜನೆ, ಮಹಾಪೂಜೆ, ಮಂಗಳಾರತಿ ಇನ್ನಿತರ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನಡೆದವು.

ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಅಧ್ಯಕ್ಷತೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ನ ಕಾರ್ಯಧ್ಯಕ್ಷ ಯು. ಎಸ್‌. ಪೂಜಾರಿ, ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ತೀಯಾ ಸಮಾಜ ಮುಂಬಯಿ ಇದರ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಹಿರಿಯ ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ

ಸಾಧಕರಿಗೆ ಸಮ್ಮಾನ
ಇದೇ ಸಂದರ್ಭದಲ್ಲಿ ನವಿಮುಂಬಯಿ ಸಮಾಜ ಸೇವಕ ಡಾ| ಹರೀಶ್‌ ಎಸ್‌. ಪೂಜಾರಿ ಹಾಗೂ ಬಿಲ್ಲವರ ಅಸೋಸಿಯೇಶನ್‌ ಇದರ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌ ಜಿ. ಪೂಜಾರಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.
ಬಿಲ್ಲವ ಅಸೋಸಿಯೇಶನ್‌ ಉಪಾಧ್ಯಕ್ಷರಾದ ಶಂಕರ ಡಿ. ಪೂಜಾರಿ, ದಯಾನಂದ್‌ ಆರ್‌. ಪೂಜಾರಿ, ಶ್ರೀನಿವಾಸ್‌ ಆರ್‌. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್‌. ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌ ಜಿ. ಪೂಜಾರಿ, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಗೌರವ ಕಾರ್ಯದರ್ಶಿ ಕೇಶವ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಧನಂಜಯ ಶಾಂತಿ, ಶೇಖರ ಶಾಂತಿ ಮತ್ತಿತರರು ನೆರವೇರಿಸಿದರು.

ಅಸೋಸಿಯೇಶನ್‌ನ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಇನ್ನಿತರ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಪ್ರಾದೇಶಿಕ, ಸ್ಥಳೀಯ ಕಚೇರಿಗಳ ಪ್ರತಿನಿಧಿಗಳು, ಭಾರತ್‌ ಬ್ಯಾಂಕ್‌ನ ನಿರ್ದೇಶಕರು, ಇತರ ಅಧಿಕಾರಿಗಳು, ಸದಸ್ಯ ಬಾಂಧವರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಗುರುದೇವರ ಅನುಗ್ರಹಕ್ಕೆ ಪಾತ್ರರಾದರು.

ಚಿತ್ರ-ವರದಿ: ಸುಭಾಷ್‌ ಶಿರಿಯ

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.