ಕರ್ತವ್ಯನಿಷ್ಠೆ- ಪ್ರಾಮಾಣಿಕತೆಯಿಂದ ಉತ್ತಮ ಆಡಳಿತ ನೀಡಲು ಸಾಧ್ಯ


Team Udayavani, Aug 24, 2021, 6:49 PM IST

24-17

ಕಡೂರು: ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಹಾಗೂ ಪ್ರಾಮಾಣಿಕತೆಯಿಂದ ಅಧಿ ಕಾರಿಗಳು ಕರ್ತವ್ಯ ನಿರ್ವಹಿಸಿದರೆ ಜನ ಸಾಮಾನ್ಯರಿಗೆ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಹಾಗೂ ಶಾಸಕ ಬೆಳ್ಳಿಪ್ರಕಾಶ್‌ ಅ ಧಿಕಾರಿಗಳಿಗೆ ಕರೆ ನೀಡಿದರು.

ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು. ಅ ಧಿಕಾರಿ ವರ್ಗವು ತಮ್ಮ ಕಚೇರಿಗೆ ಬರುವ ಜನರನ್ನು ಪ್ರೀತಿ- ವಿಶ್ವಾಸಗಳಿಂದ ಮಾತನಾಡಿಸಿ ಅವರ ಸಮಸ್ಯೆಯನ್ನು ಆಲಿಸಿ ಪರಿಹಾರ ನೀಡಲು ಮುಂದಾಗಬೇಕು. ಈ ವಿಷಯದಲ್ಲಿ ತಾವು ಯಾರೊಂದಿಗೂ ರಾಜಿ ಇಲ್ಲವೆಂದು ಖಡಕ್ಕಾಗಿ ಅ ಧಿಕಾರಿಗಳಿಗೆ ಎಚ್ಚರಿಸಿದರು.

ಆರೋಗ್ಯ ಇಲಾಖೆಯ ಡಾ| ರವಿಕುಮಾರ್‌ ಸಭೆಗೆ ಮಾಹಿತಿ ನೀಡಿ ಮೊದಲನೆ, ಎರಡನೇ ಅಲೆಯಿಂದ 7,113 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು 48 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ. ಈಗಾಗಲೇ ಲಸಿಕೆಯನ್ನು 1,21,553 ಜನರಿಗೆ ನೀಡಲಾಗಿದ್ದು ಇದರಲ್ಲಿ 18 ವರ್ಷ ಮೇಲ್ಪಟ್ಟವರಿಗೆ 28,889 ಜನರಿಗೆ ನೀಡಲಾಗಿದೆ ಎಂದರು.

ತಾಲೂಕಿನಲ್ಲಿರುವ ಪಿಎಚ್‌ಸಿಗಳಲ್ಲಿನ ಆರೋಗ್ಯ ಸಮಿತಿಯ ಕುಂದು-ಕೊರತೆಯ ಸಂಪೂರ್ಣ ವರದಿ ನೀಡಲು, ಆಸಂದಿ ವೈದ್ಯರ ವಿರುದ್ಧ ಬಂದಿರುವ ದೂರುಗಳ ಪರಿಶೀಲನೆ ಮತ್ತು ಚೌಳಹಿರಿಯೂರಿನ ಮಾದರಿ ಆರೋಗ್ಯ ಕೇಂದ್ರ ಹಾಗೂ ಪ್ರಗತಿಯ ಬಗ್ಗೆ ಮಾಹಿತಿಯನ್ನು ಶಾಸಕರು ಕೇಳಿದರು. ಕೃಷಿ ಇಲಾಖೆ: ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬಿತ್ತನೆ ಪ್ರಮಾಣದಲ್ಲಿ 4 ಸಾವಿರ ಹೆಕ್ಟೇರ್‌ ಪ್ರದೇಶ ಹೆಚ್ಚಾಗಿದೆ. ಬೆಂಗಳೂರಿನಲ್ಲಿದ್ದ ರೈತಾಪಿ ಕುಟುಂಬಗಳು ಕೊರೊನಾದಿಂದ ವಾಪಸ್‌ ಹಳ್ಳಿಗಳಿಗೆ ಬಂದಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಕೃಷಿ ಅಧಿ ಕಾರಿ ಮಂಜುಳಾ ಸಭೆಯ ಗಮನಕ್ಕೆ ತಂದರು.

ಕಳೆದ ಬಾರಿ ರಾಗಿ ಬಿತ್ತನೆ 31.500 ಹೆಕ್ಟೇರ್‌ನಲ್ಲಿ ನಡೆದಿದ್ದರೆ ಈ ಬಾರಿ 36 ಸಾವಿರ ಹೆಕ್ಟೇರ್‌ ದಾಟಿದೆ. ಇದಕ್ಕೆ ರಾಗಿ ಖರೀದಿ ಕೇಂದ್ರದ ಬೆಂಬಲ ಬೆಲೆಯೇ ಕಾರಣ. ಆದರೆ ಮುಸುಕಿನ ಜೋಳ ಕಡಿಮೆ ಪ್ರಮಾಣದಲ್ಲಿ ಬಿತ್ತನೆಯಾಗಿದೆ ಎಂಬ ಮಾಹಿತಿ ನೀಡಿದರು. ಬೆಳೆ ವಿಮೆ, ಗೊಬ್ಬರ, ಬೀಜ ಮತ್ತಿತರ ಸರಕಾರದ ಸೌಲಭ್ಯಗಳ ಮಾಹಿತಿಯನ್ನು ಶಾಸಕರು ಹಾಗೂ ವಿಧಾನ ಪರಿಷತ್‌ ಉಪ ಸಭಾಪತಿಗಳಾದ ಎಂ.ಕೆ. ಪ್ರಾಣೇಶ್‌ ಪಡೆದರು. ತೋಟಗಾರಿಕೆ ಇಲಾಖೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಅರ್ಜಿಗಳು ಡ್ರಿಪ್‌ ಸೌಲಭ್ಯ ಪಡೆಯಲು ಬಂದಿರುವುದಾಗಿ ಮಾಹಿತಿ ನೀಡಿದರು. ಪಶು ಸಂಗೋಪನಾ ಇಲಾಖೆಯಲ್ಲಿ ಕಾಲು ಬಾಯಿ ಜ್ವರದ ಬಗ್ಗೆ, ಹಾಲು ಕರೆಯುವ ಯಂತ್ರ ಪಡೆಯಲು ಬಂದಿರುವ ಅರ್ಜಿಗಳ ಬಗ್ಗೆ ಮಾಹಿತಿ ಪಡೆದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಿ ಅಂಬೇಡ್ಕರ್‌ ಭವನ ಪೂರ್ಣವಾಗಿದ್ದರೆ ಲೋಕಾರ್ಪಣೆ ಮಾಡಲು ಅಧಿ ಕಾರಿ ಶಂಕರಮೂರ್ತಿಗೆ ತಿಳಿಸಿದರು. ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಚೌಳಹಿರಿಯೂರು ಗ್ರಾಮದ ಭಾಗ್ಯಲಕ್ಷಿ ¾ ಬ್ರಾ0ಡ್‌ ವಿತರಣೆಯಲ್ಲಿ ಆಗಿರುವ ಲೋಪವನ್ನು ಸರಿಪಡಿಸಿ ವಿಶೇಷ ಪ್ರಕರಣ ಎಂದು ನ್ಯಾಯ ನೀಡಲು ಶಾಸಕ ಬೆಳ್ಳಿಪ್ರಕಾಶ್‌ ಅಧಿಕಾರಿ ಆಶಾ ಅವರಿಗೆ ಸೂಚಿಸಿದರು.

ಶಿಕ್ಷಣ ಇಲಾಖೆ: ಕಡೂರು ಹೊಸಹಳ್ಳಿಯಲ್ಲಿರುವ ಬೀರೂರು ವಲಯದ ಮುಚ್ಚಿರುವ ಶಾಲೆಯನ್ನು ಕಡೂರು ವಲಯಕ್ಕೆ ವರ್ಗಾವಣೆ ಮಾಡಲು ಅ ಧಿಕಾರಿಗಳು ಮುಂದಾಗಬೇಕೆಂದು ಆದೇಶಿಸಿದರು. ಕಾರ್ಮಿಕ ಇಲಾಖೆಯ ಅ ಧಿಕಾರಿ ಶಶಿಕಲಾ ಅವರು ಕೊರೊನಾ ಕಿಟ್‌ಗಳನ್ನು ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಹಾಗೂ ಶಾಸಕರಿಂದ ಬಿಡುಗಡೆ ಮಾಡಿಸಿದರು. ಕಂದಾಯ ಇಲಾಖೆಯಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಬರುವ ಅರ್ಜಿಗಳನ್ನು ಅವರ ವಿಳಾಸಕ್ಕೆ ತೆರಳಿ ನೈಜ ಮಾಹಿತಿ ಪಡೆದು ಪರಿಶೀಲಿಸಿ ಜಾತಿ ಪ್ರಮಾಣ ಪತ್ರ ನೀಡಲು ತಹಶೀಲ್ದಾರ್‌ರಿಗೆ ಶಾಸಕರು ಸೂಚಿಸಿದರು.

ಕಡೂರು ಪುರಸಭೆ ವ್ಯಾಪ್ತಿಯಲ್ಲಿನ ಪಾದಚಾರಿ ರಸ್ತೆಗಳಲ್ಲಿ ವ್ಯಾಪಾರಿಗಳು ಹೆಚ್ಚಿದ್ದು ಸಾರ್ವಜನಿಕರು ರಸ್ತೆಯ ಮೇಲೆಯೇ ಓಡಾಡುವಂತಾಗಿದೆ. ಇದಕ್ಕೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಮುಖ್ಯಾಧಿಕಾರಿ ಮಂಜುನಾಥ್‌ ಅವರನ್ನು ಶಾಸಕರು ಪ್ರಶ್ನಿಸಿದರು. ತಂಗಲಿ ಗ್ರಾಪಂ ವ್ಯಾಪ್ತಿಗೆ ಸೇರುವ ಲೇಔಟ್‌ ಗಳಿಗೆ ಪುರಸಭೆ ಖಾತೆ ಮಾಡುತ್ತಿದೆ ಇದು ಹೇಗೆ ಎಂದು ಪ್ರಶ್ನಿಸಿದರು.

ಪಂಪ್‌ಹೌಸ್‌ ಹತ್ತಿರ ನಿರ್ಮಿಸುತ್ತಿರುವ ಉದ್ಯಾನವನ ನಿರ್ಮಾಣಕ್ಕೆ ನಮ್ಮದೇನು ತಕರಾರಿಲ್ಲ. ಆದರೆ ತಂಗಲಿ ಪಂಚಾಯ್ತಿಗೆ ಸೇರುತ್ತದೆ ಎಂಬ ಅಂಶವನ್ನು ಪ್ರಸ್ತಾಪಿಸಿದರು. ಮೆಸ್ಕಾಂ, ಲೋಕೊಪಯೋಗಿ, ಜಿಪಂ, ಎಂಜಿನಿಯರ್‌ ವಿಭಾಗ, ಆಹಾರ, ಅರಣ್ಯ, ಅಗ್ನಿ, ಪೊಲೀಸ್‌ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಯ ಪ್ರಗತಿ ಪರಿಶೀಲಿಸಿದರು. ತಹಶೀಲ್ದಾರ್‌ ಜೆ. ಉಮೇಶ್‌, ಇಒ ಡಾ| ದೇವರಾಜ ನಾಯ್ಕ, ತಾಪಂ ಆಡಳಿತಾ ಧಿಕಾರಿ ಸತೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.