ಮುಖ್ಯವಾಹಿನಿಗೆ ಬರಲು ದಮನಿತ ಮಹಿಳೆಯರ ಹಿಂಜರಿಕೆ! 


Team Udayavani, Aug 25, 2021, 3:30 AM IST

Untitled-1

ಉಡುಪಿ: ದಮನಿತ (ಲೈಂಗಿಕ ಕಾರ್ಯಕರ್ತೆಯರು) ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲು ರಾಜ್ಯ ಸರಕಾರ ಜಾರಿಗೆ ತಂದ “ಚೇತನ’ ಯೋಜನೆಯಿಂದ ಜಿಲ್ಲೆಯ ಲೈಂಗಿಕ ಕಾರ್ಯಕರ್ತೆಯರು ದೂರ ಉಳಿದಿದ್ದಾರೆ. ಸರಕಾರ ಯೋಜನೆಯಡಿ ಜಿಲ್ಲೆಗೆ ನೀಡಿರುವ ಗುರಿಯಲ್ಲಿ ಶೂನ್ಯ ಪ್ರಗತಿ ಸಾಧಿಸಿದೆ.

ಸರಕಾರ ಅನಿವಾರ್ಯವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು, ಹೊಸ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ “ಚೇತನ’ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಉಡುಪಿ ಜಿಲ್ಲೆಯ ದಮನಿತ ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಮುಂದಾಗುತ್ತಿಲ್ಲ. ಜತೆಗೆ ದಮನಿತ ಪರ ಯಾವುದೇ ಸಂಘ -ಸಂಸ್ಥೆಗಳು ಕಾರ್ಯ ನಿರ್ವಹಿಸದೆ ಇರುವುದರಿಂದ ದಮನಿತ ಮಹಿಳೆಯರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ.

ಎನ್‌ಜಿಒ ಮೂಲಕ…

ದಮನಿತ ಮಹಿಳೆಯರು ಸಾರ್ವಜನಿಕವಾಗಿ ಎಲ್ಲಿಯೂ ತಮ್ಮ ಗುರುತು ಅಧಿಕಾರಿಗಳ ಬಳಿಯಲ್ಲಿ ಹೇಳಿಕೊಳ್ಳಲು ಇಚ್ಛಿಸುತ್ತಿಲ್ಲ. ಇದರಿಂದಾಗಿ ಸರಕಾರ ಸಮಾಜದಲ್ಲಿ ಈ ವರ್ಗಕ್ಕಾಗಿ ದುಡಿಯುತ್ತಿರುವ ಎನ್‌ಜಿಒ ಹಾಗೂ ಇತರ ಸಂಘ-ಸಂಸ್ಥೆಗಳ ಮೂಲಕ ವೃತ್ತಿಯನ್ನು ಬಿಡಲು ಇಚ್ಛಿಸುವ ಮಹಿಳೆಯರನ್ನು ಗುರುತಿಸಿ, ಅವರಿಗೆ ಚೇತನ ಯೋಜನೆಯಡಿ ಸ್ವೋದ್ಯೋಗ ಮಾಡಲು ಆರ್ಥಿಕ ಸಹಾಯ ಮಾಡುತ್ತದೆ.

32 ಫ‌ಲಾನುಭವಿಗಳು ಮಾತ್ರ:

ಜಿಲ್ಲೆಯಲ್ಲಿ ಇದುವರೆಗೆ ಕೇವಲ 32 ಫ‌ಲಾನುಭವಿಗಳು ಯೋಜನೆಯ ಲಾಭವನ್ನು ಪಡೆದುಕೊಂಡು ವೃತ್ತಿಯಿಂದ ಹೊರ ಬಂದು ಸ್ವೋದ್ಯೋಗವನ್ನು ಪ್ರಾರಂಭಿಸಿ ಹೊಸ ಜೀವನ ನಡೆಸುತ್ತಿದ್ದಾರೆ. 2015ರಿಂದ 2019ರ ವರೆಗೆ ಕ್ರಮವಾಗಿ 10, 13, 3, 6 ಫ‌ಲಾನುಭವಿಗಳು ಒಟ್ಟು 9.10 ಲ.ರೂ. ಸಾಲಸೌಲಭ್ಯ ಹಾಗೂ ಸಹಾಯಧನ ಪಡೆದುಕೊಂಡಿದ್ದಾರೆ.

ಬಡ್ಡಿ ರಹಿತ ಸಾಲ:

ಚೇತನ ಯೋಜನೆಯಡಿ ಸರಕಾರ ಇವರಿಗೆ ಬಡ್ಡಿ ರಹಿತ ಸಾಲ ನೀಡಿ ಸ್ವೋದ್ಯೋಗ ಆರಂಭಿಸಲು ಮೂಲ ಬಂಡವಾಳವನ್ನು  ನೀಡಲಿದೆ. ಇದನ್ನು ಪಡೆಯಲು ಬಯಸುವವರು ಲೈಂಗಿಕ ವೃತ್ತಿಯನ್ನು  ಬಿಡುವುದಾಗಿ ಪ್ರಮಾಣಪತ್ರ ಕೊಡಬೇಕು. ಅನಂತರವೂ ವೃತ್ತಿ ಮುಂದುವರಿಸಿದರೆ, ಕೊಟ್ಟ ಹಣ ಸರಕಾರಕ್ಕೆ ಹಿಂದಿರುಗಿಸಬೇಕು.

ಸಹಾಯಧನ ಎಷ್ಟು ? :

18-60 ವರ್ಷದೊಳಗಿನ ಮಹಿಳೆಯರಿಗೆ 30,000 ರೂ. ದೊರೆಯಲಿದೆ. ಈ ಮೊತ್ತ ಸರಕಾರಕ್ಕೆ ಮರುಪಾವತಿ ಮಾಡಬೇಕಾಗಿಲ್ಲ. ಕಳೆದ ವರ್ಷ ಮಹಿಳೆಯರಿಗೆ 50,000 ರೂ. ನೀಡುತ್ತಿದ್ದು, 25,000 ರೂ. ಬಡ್ಡಿ ರಹಿತ ನೇರ ಸಾಲ ಹಾಗೂ 25,000 ರೂ.  ಸಹಾಯಧನ ಸಿಗುತ್ತಿತ್ತು. ವೃತ್ತಿಯಿಂದ ಹೊರ ಬರಲು ಇಚ್ಛಿಸುವವರು ನೇರವಾಗಿ ಕಚೇರಿಯಿಂದ (ದೂರವಾಣಿ ಸಂಖ್ಯೆ 0820-2574978) ಮಾಹಿತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

ಎನ್‌ಜಿಒ ಕೊರತೆ :

ಪ್ರಸ್ತುತ ಜಿಲ್ಲೆಯಲ್ಲಿ ಈ ವರ್ಗಕ್ಕಾಗಿ ಕೆಲಸ ನಿರ್ವಹಿಸುತ್ತಿದ್ದ ಎನ್‌ಜಿಒ ಸಂಸ್ಥೆ ಮುಚ್ಚಿ ಹೋಗಿದ್ದು, ಇದೀಗ ಯಾವುದೇ ಎನ್‌ಜಿಒ ದಮನಿತ ಮಹಿಳೆಯರ ಪರವಾಗಿ ಕೆಲಸ  ಮಾಡುತ್ತಿಲ್ಲ. ಇದರಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಲೈಂಗಿಕ ಕಾರ್ಯಕರ್ತೆಯರ ಕುರಿತು ಯಾವುದೇ ರೀತಿಯಾದ ಸರ್ವೇಯಾಗಲಿ ನಡೆದಿಲ್ಲ. ಅವರೇ ಮುಂದೆ ಬಂದು ಯೋಜನೆಯ ಲಾಭ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

550 ಕಾರ್ಯಕರ್ತೆಯರು  :

ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಉಡುಪಿ, ಹೆಬ್ರಿ, ಕಾರ್ಕಳ, ಕಾಪು, ಬೈಂದೂರು ತಾಲೂಕಿನಲ್ಲಿ 2017ರ ಸರ್ವೇ ಅನ್ವಯ ಸುಮಾರು 550 ಲೈಂಗಿಕ ಕಾರ್ಯಕರ್ತೆಯರು ಇದ್ದರು. ಪ್ರಸ್ತುತ ಜಿಲ್ಲೆಯಲ್ಲಿ ಹೊಸದಾಗಿ ಸೇರ್ಪಡೆ ಅಥವಾ ವೃತ್ತಿಯಿಂದ ಹೊರ ಬಂದವರ ಅಂಕಿ- ಅಂಶಗಳು ಲಭ್ಯವಿಲ್ಲ.

ವೃತ್ತಿಯನ್ನು ಬಿಟ್ಟು ಬರುವವರಿಗೆ ಚೇತನ ಯೋಜನೆಯಡಿ ಸ್ವೋದ್ಯೋಗಕ್ಕೆ ಆರಂಭಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಪ್ರಸ್ತುತ ದಮನಿತ ಮಹಿಳೆಯರನ್ನು ಗುರುತಿಸುವ ಸಂಸ್ಥೆಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸದೆ ಇರುವುದರಿಂದ ಫ‌ಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಹಿನ್ನಡೆಯಾಗಿದೆ. ಆಸ್ತಕರು ಮಹಿಳಾ ಮತ್ತು ಮಕ್ಕಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.ಶೇಷಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ, ಉಡುಪಿ

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.