ಚಿಕ್ಕಬಳ್ಳಾಪುರ : ಮಳೆಯ ಆರ್ಭಟ, ನಂದಿಗಿರಿ ಧಾಮದಲ್ಲಿ ಗುಡ್ಡ ಕುಸಿತ : ರಸ್ತೆ ಬಂದ್
Team Udayavani, Aug 25, 2021, 1:34 PM IST
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿನ್ನೆ (ಮಂಗಳವಾರ, ಆಗಸ್ಟ್ 24) ರಾತ್ರಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದರಲ್ಲದೆ ವಿಶ್ವ ವಿಖ್ಯಾತ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಮಣ್ಣುಗುಡ್ಡ ಕುಸಿದು ಸುಮಾರು 10 ಅಡಿ ಆಳಕ್ಕೆ ಮುಖ್ಯ ರಸ್ತೆ ಕುಸಿದು ಸಂಪೂರ್ಣವಾಗಿ ಮುಚ್ಚಿಹೋಗಿದೆ.
ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ನಿಂತಿವೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಾಪಸ್ ಕಳುಹಿಸಲಾಗುತ್ತಿದೆ.
ಇದನ್ನೂ ಓದಿ : ಡಬಲ್ ಡೋಸ್ ವ್ಯಾಕ್ಸಿನ್ ಪಡೆದಿದ್ದರೂ ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ತಡೆ : ಆಕ್ರೋಶ
ಮಂಗಳವಾರ ರಾತ್ರಿ ನಂದಿಬೆಟ್ಟದ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಮೇಲ್ಭಾಗದಿಂದ ಮಣ್ಣು ಕೊಚ್ಚಿಕೊಂಡು ಬಂದಿದೆ. ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ನಂದಿಬೆಟ್ಟದ ಚೆಕ್ ಪೋಸ್ಟ್ ನ ಸ್ವಲ್ಪ ದೂರದಲ್ಲೇ ರಸ್ತೆಗೆ ಅಡ್ಡಲಾಗಿ ಮಣ್ಣು ಶೇಖರಣೆಯಾಗಿದ್ದರಿಂದ, ಮೊದಲೇ ರೆಸಾರ್ಟ್ ಬುಕ್ ಮಾಡಿಕೊಂಡು ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಮಣ್ಣು ತೆರವು ಕೆಲಸದಲ್ಲಿ ನಿರತರಾಗಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಭೂ ಕುಸಿತವಾಗಿರೋದು. ಮಲೆನಾಡು ಭಾಗದಲ್ಲಿ ಕಾಣಿಸುತ್ತಿದ್ದ ದೃಶ್ಯಗಳನ್ನ ತಮ್ಮಲ್ಲಿ ಆಗಿರೋದನ್ನು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.
ಕರೆ-ಕುಂಟೆಗಳು ಭರ್ತಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಒಂದು ಕಡೆ ನಂದಿಗಿರಿಧಾಮದಲ್ಲಿ ಭೂ ಕುಸಿತ ಕಂಡು ಬಂದರೇ ಮತ್ತೊಂದಡೆ ಗ್ರಾಮೀಣ ಪ್ರದೇಶದಲ್ಲಿ ನಿರ್ಮಿಸಿರುವ ಕೆರೆ-ಕುಂಟೆಗಳು ಭರ್ತಿಯಾಗಿ ಗಮನಸೆಳೆಯುತ್ತಿದೆ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಗೋಪಾಲ್ ಎಂಬುವರ ರೇಷ್ಮೆ ಬೆಳೆಗಾರರನ ಮನೆಗೆ ನೀರು ನುಗ್ಗಿ ರೇಷ್ಮೆ ಹುಳುಗಳು ನೀರು ಪಾಲಾಗಿ ಅಪಾರ ನಷ್ಟ ಸಂಭವಿಸಿದೆ.
ಇದನ್ನೂ ಓದಿ : ಎಚ್ಚರ 2022ರಲ್ಲೂ ಮತ್ತಷ್ಟು ಸಂಕಷ್ಟ…ಡೆಲ್ಟಾಗಿಂತಲೂ ಕೋವಿಡ್ 22 ಹೆಚ್ಚು ಅಪಾಯಕಾರಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.