ಕಾಂಗ್ರೆಸ್ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬೇಡ : ಗುಂಡೂರಾವ್ ಕಿಡಿ
Team Udayavani, Aug 25, 2021, 5:58 PM IST
ಪಣಜಿ : ರಾಜ್ಯದ ಜನರು ಇಂಧನ ದರ ಹೆಚ್ಚಳ, ವಿವಿಧ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಹೀಗೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೂ ಕೂಡ ಬಿಜೆಪಿಯು ಕಾಂಗ್ರೇಸ್ ಪಕ್ಷವನ್ನು ಟೀಕಿಸುತ್ತಲೇ ಇದೆ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಪ್ರಮೋದ್ ಸಾವಂತ್ ನೇತೃತ್ವದ ರಾಜಯ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ.
ಗೋವಾದ ಸಾಂಗೆಯಲ್ಲಿ ಆಯೋಜಿಸಿದ್ದ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನುದ್ದೇಶಿ ಮಾತನಾಡಿದ ಗುಂಡೂರಾವ್, ರಾಜ್ಯದ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ರವರು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿದ್ದರೆ ಪುರಾವೆಗಳೊಂದಿಗೆ ಸಾಬೀತುಪಡಿಸಲಿ. ಚುನಾವಣೆ ಸಮೀಪಿಸುತ್ತಿದ್ದಂತೆ ಕೇವಲ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಬೇಡಿ. ಅಧಿಕಾರದಲ್ಲಿದ್ದರೂ ಕೂಡ ಬಿಜೆಪಿ ಪಕ್ಷದ ನಾಯಕರು 10 ವರ್ಷಗಳ ಕಾಲ ಏಕೆ ಸುಮ್ಮನೆ ಕುಳಿತುಕೊಂಡಿದ್ದಾರೆ..? ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಮುಂಗಾರು ಚಟುವಟಿಕೆಯಲ್ಲಿ ರೈತರು ತಲ್ಲೀನ; ಉತ್ತಮ ಬೆಳೆ ನಿರೀಕ್ಷೆಯಲ್ಲಿ ಅನ್ನದಾತರು
ಇನ್ನು, ಚುನಾವಣೆಯ ಕುರಿತಾಗಿ ಮಾತನಾಡಿದ ಅವರು, ಫೆಬ್ರವರಿ 2022 ರಲ್ಲಿ ಗೋವಾ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದ ಸಂಘಟನೆಗಾಗಿ ಕಾರ್ಯಕರ್ತರು ಹೆಚ್ಚಿನ ಸಮಯ ನೀಡಬೇಕು ಎಂದ ಅವರು, ಸಾಂಗೆ ಮತಕ್ಷೇತ್ರದಲ್ಲಿ ಇನ್ನು ಒಂದು ತಿಂಗಳಲ್ಲಿ 5000 ಸದಸ್ಯರನ್ನು ಮಾಡುವ ಜವಾಬ್ದಾರಿಯನ್ನು ಪ್ರತಿಯೊಬ್ಬ ಕಾಂಗ್ರೇಸ್ ಕಾರ್ಯಕರ್ತರು ಹೊರಬೇಕು ಎಂದಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೇಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್, ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಗೋವಾ : ಕಾಂಗ್ರೇಸ್ ನ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ಆಗಮನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.