ಗಣೇಶ ಹಬ್ಬ ಆಚರಣೆ ಕುರಿತು ಸಿಎಂ ಜೊತೆ ಚರ್ಚೆ : ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Aug 25, 2021, 6:38 PM IST
ಬೆಂಗಳೂರು: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ಶಾಸಕರು ಕೂಡ ಸಾರ್ವಜನಿಕ ಗಣೇಶ ಹಬ್ಬದ ಆಚರಣೆಗೆ ಅನುಮತಿ ನೀಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ಭಾವನಾತ್ಮಕ ವಿಚಾರ. ಆದರೆ, ಕೊವೀಡ್ ಮೂರನೇ ಅಲೆ ಬಗ್ಗೆ ತಜ್ಞರು ಒತ್ತಿ ಹೇಳಿದ್ದಾರೆ. ಹೀಗಾಗಿ ಯಾವ ರೀತಿ ಆಚರಣೆ ಮಾಡಬೇಕು ಎಂದು ಮುಂದೆ ತೀರ್ಮಾನ ಮಾಡುತ್ತೇವೆ ಎಂದರು.
ಎಲ್ಲಡೆ ಕೋವಿಡ್ ಪರಿಸ್ಥಿತಿ ಇರುವ ಕಾರಣ ನಿಯಮಾನುಸಾರ ಹಬ್ಬ ಆಚರಣೆ ಮಾಡಬೇಕು. ಮನೆಯಲ್ಲಿ ಹಬ್ಬ ಆಚರಣೆ ಮಾಡಲು ಏನೂ ಸಮಸ್ಯೆ ಇಲ್ಲ.ಆದರೆ, ಹೊರಗಡೆ ಆಚರಿಸುವ ಕುರಿತು ಸಭೆ ನಡೆಸಿ, ಮಾರ್ಗಸೂಚಿ ಹೊರಡಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.