“ಮಿಗ್-21′ ಯುದ್ಧ ವಿಮಾನ ಪತನ; ಪೈಲಟ್ ರಕ್ಷಣೆ
Team Udayavani, Aug 25, 2021, 9:49 PM IST
ಬಾರ್ಮರ್ (ರಾಜಸ್ಥಾನ): ಭಾರತೀಯ ವಾಯುಪಡೆಗೆ ಸೇರಿದ “ಮಿಗ್-21′ ಯುದ್ಧ ವಿಮಾನ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಬುಧವಾರ ಸಂಜೆ 5:30ರ ಸುಮಾರಿಗೆ ಪತನವಾಗಿದೆ.
ಬಾರ್ಮರ್ ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ.
ಘಟನೆಯಲ್ಲಿ ಯಾರಿಗೂ ಸಾವು-ನೋವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್, ತುರ್ತು ನಿರ್ಗಮನ ಕೈಗೊಂಡಿದ್ದರಿಂದ ಅವರು ಪ್ಯಾರಾಚೂಟ್‌ಗಳ ಸಹಾಯದಿಂದ ಸುರಕ್ಷಿತವಾಗಿ ಬಂದಿಳಿದಿದ್ದಾರೆ.
ಆದರೆ, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ:ಪುಲ್ವಾಮಾ ರಕ್ಕಸ ಸಮೀರ್ ದಾರ್ ಇನ್ನೂ ಜೀವಂತ!
ತರಬೇತಿ ಹಿನ್ನೆಲೆಯಲ್ಲಿ ಆಗಸದಲ್ಲಿ ಸಾರ್ಟಿಂಗ್ ಮಾಡುತ್ತಿರುವಾಗ ಉಂಟಾದ ತಾಂತ್ರಿಕ ದೋಷದಿಂದಾಗಿ ಈ ದುರಂತ ಸಂಭವಿಸಿದೆ.
ಈ ವರ್ಷದಲ್ಲಿ ಪತನವಾದ ನಾಲ್ಕನೇ ಮಿಗ್-21 ವಿಮಾನವಿದು. ಘಟನೆ ಬಗ್ಗೆ ಐಎಎಫ್ ತನಿಖೆಗೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.