![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 26, 2021, 11:56 AM IST
ಬೆಂಗಳೂರು: ಮೈಸೂರು ಘಟನೆಯಂತಹ ವಿಚಾರಗಳಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು. ಇದು ರಾಜಕೀಯ ಮಾಡುವ ಘಟನೆಯೂ ಅಲ್ಲ. ಕಾಂಗ್ರೆಸ್ ಅವಧಿಯಲ್ಲಿ ಎಲ್ಲವೂ ಸುಖವಾಗಿತ್ತಾ? ಇಂತಹ ಘಟನೆಗಳು ಆಗಿರಲಿಲ್ವಾ? ಅವರ ಅವಧಿಯಲ್ಲೂ ನಡೆದಿತ್ತು. ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ. ರಾಜಕೀಯ ಲಾಭ ಪಡೆಯುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆದಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಈಗಾಗಲೇ ಎಫ್ ಐಆರ್ ದಾಖಲಾಗಿದೆ. ಪೊಲೀಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಇಂದು ಸಂಜೆ ಮೈಸೂರಿಗೆ ತೆರಳುತ್ತಿದ್ದೇನೆ. ನಾಳೆ ಅಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದರು.
ಈಗಾಗಲೇ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಬೇಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿಯವರನ್ನು ಮೈಸೂರಿಗೆ ಕಳುಹಿಸಲಾಗಿದೆ. ಬೇರೆ ಬೇರೆ ತಂಡಗಳನ್ನು ರಚಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಬಂಧನದ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದರು.
ಇದನ್ನೂ ಓದಿ:BJPಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ, ಅತ್ಯಾಚಾರಿಗಳ ರಕ್ಷಣೆ ಮಾಡುವಂತಿದೆ: ಕಾಂಗ್ರೆಸ್
ದುರದೃಷ್ಟಕರ: ಮೈಸೂರು ಪ್ರಮುಖ ಪ್ರವಾಸಿತಾಣ. ಸಾವಿರಾರು ಜನ ಪ್ರವಾಸಿಗರು ಅಲ್ಲಿಗೆ ಬರುತ್ತಾರೆ. ಈ ಘಟನೆ ದುರದೃಷ್ಟಕರ, ತಲೆತಗ್ಗಿಸುವಂತದ್ದು. ಪೊಲೀಸರು ತಕ್ಷಣವೇ ಕಾರ್ಯೋನ್ಮಖರಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸುವುದರಿಂದ ಎಲ್ಲವನ್ನೂ ನಿಭಾಯಿಸಿದ್ದಾರೆ. ಘಟನೆ ನಡೆದ ಇಪ್ಪತ್ನಾಲ್ಕು ಗಂಟೆಯೊಳಗೆ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಮೂಲತಃ ಮಹಾರಾಷ್ಟದವರು ಎಂಬ ಮಾಹಿತಿ ಇದೆ. ಅವರ ತಂದೆ, ತಾಯಿ ಸಹ ಆಗಮಿಸಿದ್ದಾರೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.
ಜೈಲುಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ನನ್ನ ಗಮನಕ್ಕೂ ಬಂದಿದೆ. ಮಾಧ್ಯಮಗಳನ್ನು ನೋಡಿ ಮಾಹಿತಿಯನ್ನ ತಿಳಿದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು. ಸಾಧ್ಯವಾದಷ್ಟು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದರು.
You seem to have an Ad Blocker on.
To continue reading, please turn it off or whitelist Udayavani.