“ಲೋಪ ಬಾರದಂತೆ ಕರ್ತವ್ಯ ನಿರ್ವಹಿಸಿ’

ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ|ಬಿ. ಬಸವರಾಜು ಅಧಿಕಾರಿಗಳಿಗೆ ಸೂಚನೆ

Team Udayavani, Aug 26, 2021, 5:36 PM IST

“ಲೋಪ ಬಾರದಂತೆ ಕರ್ತವ್ಯ ನಿರ್ವಹಿಸಿ’

ಧಾರವಾಡ: ಹು-ಧಾ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದ್ದು, ಈ ಚುನಾವಣೆಯ ಅಧಿಕಾರಿ ಮತ್ತು
ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಕಂಡು ಬಂದರೆ ಆಯೋಗವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ|ಬಿ. ಬಸವರಾಜು ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಪೊಲೀಸ್‌ ಆಯುಕ್ತರು ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ಸಾಮಾನ್ಯ ವೀಕ್ಷಕರು ಮತ್ತು ಚುನಾವಣಾ ವಿವಿಧ ನೋಡಲ್‌ ಅಧಿಕಾರಿಗಳ ಸಭೆ
ಕೈಗೊಂಡು ಅವರು ಮಾತನಾಡಿದರು.

ಚುನಾವಣಾ ಪ್ರಕ್ರಿಯೆಯಲ್ಲಿರುವ ಎಲ್ಲ ಹಂತದ ಅಧಿಕಾರಿಗಳು ಆಯೋಗದ ನಿರ್ದೇಶನಗಳನ್ನು ಪಾಲಿಸುವ ಮೂಲಕ ಯಶಸ್ವಿಯಾಗಿ ಚುನಾವಣೆ
ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಚುನಾವಣೆಯನ್ನು ಮುಕ್ತ- ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಜರುಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಚುನಾವಣಾ ಕಾರ್ಯದಲ್ಲಿ ತೊಡಗುವ ಎಲ್ಲ ಹಂತದ ಅಧಿಕಾರಿಗಳಿಗೆ ಉತ್ತಮ ತರಬೇತಿ ನೀಡಬೇಕು. ನೇಮಕವಾಗುವ ಅಧಿಕಾರಿಗಳು ತಮಗೆ ನೀಡಿರುವ ಜವಾಬ್ದಾರಿಗಳ ಕುರಿತು ಕೈಪಿಡಿಗಳನ್ನು ಓದಿ ತಿಳಿದುಕೊಳ್ಳಬೇಕು. ಯಾವುದೇ ಪ್ರಭಾವ-ಒತ್ತಡಗಳಿಗೆ ಒಳಗಾಗದೇ ನಿರ್ಭಯವಾಗಿ ಚುನಾವಣಾ ನಿಯಮಗಳನ್ನು ಪಾಲಿಸಬೇಕು ಎಂದರು.

ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ, ಪರಿಶೀಲನೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳಿಂದ ಚುನಾವಣಾ ಪ್ರಚಾರ ಆರಂಭವಾಗಿದೆ. ಈ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಹೆಚ್ಚು ಮುಂಜಾಗ್ರತೆ ವಹಿಸಿ ಚುನಾವಣಾ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಮದ್ಯಸಂಗ್ರಹ, ಮದ್ಯಸರಬರಾಜು ಮತ್ತು ಮದ್ಯಬಳಕೆ ಕುರಿತು ಪ್ರತಿದಿನ ಮಾಹಿತಿ ಪಡೆದು ಪರಿಶೀಲಿಸಬೇಕು. ಅಕ್ರಮಗಳ ಬಗ್ಗೆ ಸುಳಿವು ಸಿಕ್ಕರೆ ತಕ್ಷಣ ದಾಳಿ ಮಾಡಿ ವಶಪಡಿಸಿಕೊಂಡು ಸೂಕ್ತ ಕ್ರಮ ಜರುಗಿಸಬೇಕು ಎಂದರು.

ಇದನ್ನೂ ಓದಿ:40 ವಿಧಾನಸಭಾ ಕ್ಷೇತ್ರಗಳ “ಯುದ್ಧಕ್ಕೆ ಕಾಂಗ್ರೆಸ್ ಸಿದ್ಧ” : ಪಿ. ಚಿದಂಬರ್

ಪ್ರಸಕ್ತ ಚುನಾವಣೆಯಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗವು ಸೂಚಿಸಿ, ಕೋವಿಡ್‌ ಕುರಿತ ಎಸ್‌ಒಪಿಯನ್ನು ನೀಡಿದೆ. ಈ ಚುನಾವಣಾ ಪ್ರಚಾರಕ್ಕೆ ಅಭ್ಯರ್ಥಿ ಸೇರಿ ಕೇವಲ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಭ್ಯರ್ಥಿಯ
ಪ್ರಚಾರಕ್ಕಾಗಿ ಯಾವುದೇ ರೀತಿಯ ಗುಂಪು ಸೇರುವುದು, ಮೆರವಣಿಗೆ, ವಾಹನ ಬಳಕೆ,ರ್ಯಾಲಿ, ಸಾರ್ವಜನಿಕ ಸಭೆ ಮುಂತಾದವುಗಳ
ಆಯೋಜನೆಯನ್ನು ನಿರ್ಬಂಧಿಸಲಾಗಿದೆ. ವಿದ್ಯುನ್ಮಾನ, ಸಾಮಾಜಿಕ ಜಾಲತಾಣ ಹಾಗೂ ಮದ್ರಣ ಮಾಧ್ಯಮ ಸೇರಿದಂತೆ ಕರಪತ್ರ, ಪೋಸ್ಟರ್‌ ಇತ್ಯಾದಿ ಮಾದ್ಯಮ ಮತ್ತು ಪ್ರಚಾರ ಸಾಮಗ್ರಿಗಳ ಬಳಕೆಗೆ ಅನುಮತಿ ನೀಡಲಾಗಿದೆ. ಅಭ್ಯರ್ಥಿಗೆ 3,00,000 ರೂ.ಗಳವರೆಗೆ ವೆಚ್ಚ ಮಾಡಲು
ಅನುಮತಿಸಲಾಗಿದ್ದು, ಪ್ರತಿ ದಿನ ವೆಚ್ಚದ ವಿವರಗಳನ್ನು ಅಭ್ಯರ್ಥಿಗಳು ಸಂಬಂಧಿಸಿದ ಚುನಾವಣಾ ಅಧಿ ಕಾರಿಗಳಿಗೆ ನಿಗದಿತ ನಮೂನೆಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದರು.ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ನಿತೇಶ ಪಾಟೀಲ ಮಾತನಾಡಿ,ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 403497 ಪುರುಷ, 407954 ಮಹಿಳಾ ಮತ್ತು ಇತರೆ 86 ಸೇರಿದಂತೆ ಒಟ್ಟು 8,11,537 ಮತದಾರರು ಮತದಾನ ಮಾಡಲಿದ್ದಾರೆ. 82 ವಾರ್ಡ್‌ ವ್ಯಾಪ್ತಿಯಲ್ಲಿ 5 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 4,210 ಜನ ವಿವಿಧ ಹಂತದ ಅಧಿಕಾರಿ, ಸಿಬ್ಬಂದಿಗಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.

ಮಹಾನಗರ ಪಾಲಿಕೆಯ ಚುನಾವಣೆಗಾಗಿ 18 ಜನ ಚುನಾವಣಾ ಅಧಿಕಾರಿಗಳನ್ನು ಮತ್ತು 18 ಜನ ಸಹಾಯಕ ಚುನಾವಣಾಧಿಕಾರಿಗಳನ್ನು
ನೇಮಿಸಲಾಗಿದೆ. ಪ್ರತಿ 10 ವಾರ್ಡ್‌ಗೆ ಒಬ್ಬರಂತೆ ಅ ಧಿಕಾರಿಯನ್ನು ನೇಮಿಸಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಕುರಿತು ನಿಗಾ ವಹಿಸಿ ಪರಿಶೀಲಿಸಲಾಗುತ್ತಿದೆ. 63 ಜನ ಸೆಕ್ಟರ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಮಹಾನಗರ ಪಾಲಿಕೆಯ 82 ವಾರ್ಡ್‌ಗಳಿಗೆ ಸ್ಪರ್ಧೆ ಬಯಸಿ 569
ನಾಮಪತ್ರಗಳ ಸಲ್ಲಿಕೆಯಾಗಿದ್ದು, ಈ ಪೈಕಿ 486 ಜನ ಕ್ರಮಬದ್ಧ ನಾಮನಿರ್ದೇಶಿತ ಅಭ್ಯರ್ಥಿಗಳು ಉಳಿದಿದ್ದಾರೆ.

ಮಹಾನಗರ ಪಾಲಿಕೆ ಚುನಾವಣೆಯನ್ನು ಯಶಸ್ವಿಗೊಳಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಮಹಾನಗರ ಪೊಲೀಸ್‌ ಆಯುಕ್ತ ಲಾಬೂರಾಮ್‌, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಪೊಬೇಷನರಿ ಐಎಎಸ್‌ ಅಧಿಕಾರಿ ಮಾಧವ ಗಿತ್ತೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಎಸಿ ಡಾ|ಗೋಪಾಲಕೃಷ್ಣ ಬಿ., ಸಾಮಾನ್ಯ ವೀಕ್ಷಕ ಷಣ್ಮುಖಪ್ಪ ಡಿ., ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನಾಯಕ ಪಾಲನಕರ, ಭೂ ದಾಖಲೆಗಳ ಉಪ ನಿರ್ದೇಶಕ ವಿಜಯಕುಮಾರ .ಎ.ಪಿ., ಎನ್‌ಐಸಿ ಅಧಿಕಾರಿ ಮೀನಾಕುಮಾರಿ ಎಂ., ವೆಚ್ಚ ನಿರ್ವಹಣಾ ನೋಡಲ್‌ ಅಧಿಕಾರಿ ವರದರಾಜ್‌, ಅಬಕಾರಿ ಇಲಾಖೆ ಅಧಿಕಾರಿ ಆತ್ಮಲಿಂಗ ಮಠಪತಿ ಇದ್ದರು.

ಮತಗಟ್ಟೆ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆ ಅಧಿಕಾರಿಗಳಾಗಿ ನೇಮಕಗೊಂಡ ಸಿಬ್ಬಂದಿ ಗಳಿಗೆ ಅಂಚೆ ಮೂಲಕ ಮತದಾನ ಮಾಡಲು ರಾಜ್ಯ ಚುನಾವಣಾ ಆಯೋಗವು ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾದ ಡಿಸಿ ನಿತೇಶ ಪಾಟೀಲ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣಾ ಕರ್ತವ್ಯಕ್ಕೆ ನೇಮಿಸಲ್ಪಟ್ಟ ಅಧಿಕಾರಿ ಅಥವಾ ಸಿಬ್ಬಂದಿಗಳು ಅಂಚೆ ಮತಪತ್ರ ಕೋರಿ, ಪ್ರಪತ್ರ 15 ರಲ್ಲಿ ಅವಶ್ಯಕ ಮಾಹಿತಿಯನ್ನು ಭರ್ತಿಮಾಡಿ ಚುನಾವಣಾ ಗುರುತಿನ ಚೀಟಿ ಮತ್ತು ನೇಮಕಾತಿ ಆದೇಶದಛಾಯಾಪ್ರತಿಯನ್ನು ಲಗತ್ತಿಸಿ ಆ.29 ರೊಳಗಾಗಿ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿರುವ ಮಹಾನಗರ ಪಾಲಿಕೆಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಕ್ಟರ್‌ ಅಧಿಕಾರಿಗಳಿಗೆ ಪಾಲಿಕೆ ಚುನಾವಣಾ ತರಬೇತಿ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ 2021ರಲ್ಲಿ ಕಾರ್ಯ ನಿರ್ವಹಿಸಲಿರುವ ಸೆಕ್ಟರ್‌ ಅಧಿಕಾರಿಗಳಿಗೆ
ಉತ್ತಮ ಸಂವಹನ ಕೌಶಲ್ಯ ಮುಖ್ಯವಾಗಿದ್ದು, ತಮ್ಮ ಸಿಬ್ಬಂದಿ ಹಾಗೂ ಚುನಾವಣಾ ಅಧಿಕಾರಿಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸ ಬೇಕೆಂದು ಚುನಾವಣಾ ತರಬೇತುದಾರ ಎನ್‌.ವಿ. ಶಿರಗಾಂವಕರ್‌ ಹೇಳಿದರು. ನಗರದಲ್ಲಿ ಜಿಲ್ಲಾ ಚುನಾವಣಾ ವಿಭಾಗದಿಂದ ಡಿಸಿ ಕಚೇರಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸೆಕ್ಟರ್‌ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣಾ ಕಾರ್ಯ ಒಂದು ಸಾಮೂಹಿಕ ಕಾರ್ಯವಾಗಿದೆ. ಗುಂಪಿನ ಎಲ್ಲ ಸದಸ್ಯರೂ ಒಳ್ಳೆಯ ಭಾಂಧವ್ಯ ಹಾಗು ಉತ್ತಮ ಹೊಂದಾಣಿಕೆ ಯೊಂದಿಗೆ ಕಾರ್ಯ ನಿರ್ವಹಿಸಿದರೆ ಮಾತ್ರ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮತ್ತು ಮಾಸ್ಟರ್‌ ಟ್ರೇನರ್‌ ಎಸ್‌.ಎನ್‌. ರುದ್ರೇಶ ಮಾತನಾಡಿ, ಸೆಕ್ಟರ್‌ ಅ ಧಿಕಾರಿಗಳ ತರಬೇತಿ ಬಹುಮುಖ್ಯವಾಗಿರುವುದರಿಂದ ಸೆಕ್ಟರ್‌ ಅಧಿಕಾರಿಗಳು ಪ್ರತಿಯೊಂದನ್ನು ಗಮನವಿಟ್ಟು ತಿಳಿದುಕೊಳ್ಳಬೇಕು. ಗೊಂದಲ, ಸಂಶಯಗಳಿದ್ದಲ್ಲಿ ಸ್ಥಳದಲ್ಲಿಯೇ ಕೇಳಿ ಪರಿಹರಿಸಿಕೊಳ್ಳಬೇಕು ಎಂದರು.

ಚುನಾವಣಾ ತಹಶೀಲ್ದಾರ್‌ ಹೆಚ್‌. ಎನ್‌.ಬಡಿಗೇರ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಎಲ್ಲ ಸೆಕ್ಟರ್‌ ಅಧಿಕಾರಿಗಳು, ಚುನಾವಣಾ ಶಾಖೆಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-uv-fusion

Simple Life: ಬದುಕು ನಿರಾಡಂಬರವಾಗಿರಲಿ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.