ಆಸ್ತಿ ತೆರಿಗೆ ಹೆಚ್ಚಳಕ್ಕೆ ವಿಪಕ ಆಕ್ರೋಶ

Team Udayavani, Aug 26, 2021, 6:55 PM IST

26-17

ಶಿವಮೊಗ್ಗ: ಮಹಾನಗರ ಪಾಲಿಕೆ ಪರಿಷತ್‌ ಸಾಮಾನ್ಯ ಸಭೆಯಲ್ಲಿ ಆಸ್ತಿ ತೆರಿಗೆ ವಿಚಾರ ಪ್ರತಿಧ್ವನಿಸಿತು. ತೆರಿಗೆ ಹೆಚ್ಚಳ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆದು ಕಾಂಗ್ರೆಸ್‌ ಸದಸ್ಯರ ಪ್ರತಿಭಟನೆ ನಡುವೆಯೇ ಗದ್ದಲ, ಗಲಾಟೆ ಕೋಲಾಹಲ ಉಂಟಾಯಿತು. ಸಭೆ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ಅವರು ಅವೈಜ್ಞಾನಿಕ ಆಸ್ತಿ ತೆರಿಗೆ ವಿರೋಧಿ ಸಿ ಪಾಲಿಕೆ ಹೊರಗಡೆ ಸಂಘ, ಸಂಸ್ಥೆಗಳು, ಸಾರ್ವಜನಿಕರು ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಯನ್ನು ಗಮನಕ್ಕೆ ತೆಗೆದುಕೊಳ್ಳದೇ ಸಭೆ ನಡೆಸುವುದು ಸರಿಯಲ್ಲ ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್‌ ಸದಸ್ಯರಾದ ರಮೇಶ್‌ ಹೆಗ್ಡೆ, ಯೋಗೀಶ್‌, ರೇಖಾ ರಂಗನಾಥ್‌, ಜೆಡಿಎಸ್‌ ಸದಸ್ಯ ನಾಗರಾಜ್‌ ಕಂಕಾರಿ, ಇದು ಅಭಿವ್ಯಕ್ತಿ ಸ್ವಾತಂತ್ರದ ಹರಣವಾಗಿದೆ. ನ್ಯಾಯವಾಗಿ ನೋಡಿದರೆ ಎಸ್‌ಆರ್‌ ದರದಲ್ಲಿ ಆಸ್ತಿ ತೆರಿಗೆ ವಿ ಧಿಸುವುದು ಸರಿಯಲ್ಲ. ಬೆಂಗಳೂರಿಗೆ ಒಂದು, ಶಿವಮೊಗ್ಗಕ್ಕೆ ಒಂದು ತೆರಿಗೆ ನೀತಿ ಇರಬಾರದು. ಇದು ಸಾರ್ವಜನಿಕರಿಗೆ ಹೊರೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈಗಾಗಲೇ ಆಸ್ತಿ ತೆರಿಗೆಗೆ ಸಂಬಂಧಿ ಸಿದಂತೆ ಸರ್ಕಾರಕ್ಕೆ ಪತ್ರ ಬರೆದು ಮರುಪರಿಶೀಲನೆ ನಡೆಸುವಂತೆ ಹಿಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಆದರೂ ಸರ್ಕಾರಕ್ಕೆ ಪತ್ರ ಬರೆದಿಲ್ಲ ಎಂದು ಸದಸ್ಯರು ಆರೋಪಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಅಭಿವ್ಯಕ್ತಿ ಸ್ವಾತಂತ್ರದ ಹರಣದ ಬಗ್ಗೆ ನಿಮ್ಮಿಂದ ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್‌ ತುರ್ತು ಪರಿಸ್ಥಿತಿಯನ್ನು ತಂದಿದ್ದು ನೆನಪಿಲ್ಲವೇ ಎಂದರು. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್‌ ಸದಸ್ಯರು, ಇದು ಭಾಷಣದ ಸಮಯವಲ್ಲ. ಪ್ರಸ್ತುತದ ಸಮಸ್ಯೆ ಇದೆ. ಹೊರಗಡೆ ಪ್ರತಿಭಟನಾಕಾರರು ಮನವಿ ಸಲ್ಲಿಸಲು ಹೋರಾಟ ನಡೆಸುತ್ತಿದ್ದಾರೆ.

ಅವರನ್ನು ಒಳಗೆ ಬಿಡದೇ ಇರುವುದು ಎಷ್ಟರಮಟ್ಟಿಗೆ ಸರಿ? ಅವರಿಂದ ಮನವಿ ಪಡೆಯಲು ಯಾಕೆ ಹಿಂದೇಟು ಹಾಕುತ್ತಿದ್ದೀರಿ ಎಂದು ಪ್ರಶ್ನಿಸಿದರು. ಆಸ್ತಿ ತೆರಿಗೆಗೆ ಸಂಬಂಧಿ ಸಿದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲವೇ ಉಂಟಾಗಿ ಒಂದು ಹಂತದಲ್ಲಿ ಕಾಂಗ್ರೆಸ್‌ ಸದಸ್ಯರು ಬಾವಿಗಳಿದು ಪ್ರತಿಭಟನೆ ನಡೆಸಿದರು. ಆಸ್ತಿ ತೆರಿಗೆಗೆ ಸಂಬಂಧಿ ಸಿದಂತೆ ಸರ್ಕಾರಕ್ಕೆ ಪತ್ರ ಬರೆಯುವುದರಿಂದ ಹಿಡಿದು ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ. ಸಭೆಗೆ ಉತ್ತರ ಹೇಳಿ ಎಂದು ಜೋರುಧ್ವನಿಯಲ್ಲೇ ಕೇಳಿದರು. ಆಡಳಿತ ಪಕ್ಷದ ಸದಸ್ಯರು ಕೂಡ ಪಟ್ಟು ಬಿಡದೇ ಕೂಗಾಟ ನಡೆಸಿದರು. ಸುರೇಖಾ ಮುರಳೀಧರ್‌, ಸುವರ್ಣಾ ಶಂಕರ್‌, ಅನಿತಾ ರವಿಶಂಕರ್‌ ಸೇರಿದಂತೆ ಮಹಿಳಾ ಸದಸ್ಯೆಯರು ಕೂಡ ಜೋರು ಧ್ವನಿಯಲ್ಲಿ ಮಾತನಾಡಿದರು.

ಯಾರು ಏನು ಮಾತನಾಡುತ್ತಿದ್ದಾರೆ? ಮೇಯರ್‌ ಸುನಿತಾ ಅಣ್ಣಪ್ಪ ಉತ್ತರವೇನು? ಆಯುಕ್ತರು ಏನು ಹೇಳುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿರಲಿಲ್ಲ. ಆಯುಕ್ತ ಚಿದಾನಂದ ವಠಾರೆ ಒಂದು ಹಂತದಲ್ಲಿ ವಿರೋಧ ಪಕ್ಷದವರಿಗೆ ಉತ್ತರ ಹೇಳಲು ಮುಂದಾದರು. ಆಸ್ತಿ ತೆರಿಗೆಗೆ ಸಂಬಂ ಸಿದಂತೆ ನಾಗರಿಕ ಹಿತರಕ್ಷಣಾ ಸಮಿತಿಯವರು ಸಲ್ಲಿಸಿದ ಮನವಿಯನ್ನು ಸರ್ಕಾರಕ್ಕೆ ತಲುಪಿಸಲಾಗಿದೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ಸದಸ್ಯರು, ನಾಗರಿಕ ಹಿತರಕ್ಷಣಾ ಸಮಿತಿಯವರು ಪಾಲಿಕೆಗೆ ಸಲ್ಲಿಸಿದ ಮನವಿ ಬಗ್ಗೆ ನಾವು ಕೇಳುತ್ತಿಲ್ಲ. ಪಾಲಿಕೆ ವತಿಯಿಂದಲೇ ತೀರ್ಮಾನವಾಗಿದ್ದನ್ನು ಸರ್ಕಾರಕ್ಕೆ ತಿಳಿಸಿದ್ದೀರಾ ಎಂದು ಪ್ರಶ್ನೆ ಮಾಡಿದರು.

ಆಡಳಿತ ಪಕ್ಷದ ಸದಸ್ಯರು ಸಮಜಾಯಿಷಿ ನೀಡಲು ಮುಂದಾದಾಗ ವಿಪಕ್ಷ ಸದಸ್ಯರು ಅದನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಆಸ್ತಿ ತೆರಿಗೆಗೆ ಸಂಬಂ ಧಿಸಿದಂತೆ ಕಳೆದ ಸಭೆಯಲ್ಲಿಯೇ ತೀರ್ಮಾನಿಸಲಾಗಿದೆ. ಈ ಬಾರಿಯ ಅಜೆಂಡಾದಲ್ಲಿ ಆ ವಿಷಯವನ್ನು ಸೇರಿಸಿಯೇ ಇಲ್ಲ. ಹಾಗಾಗಿ ಚರ್ಚೆಗೆ ಅವಕಾಶವಿಲ್ಲ ಎಂಬ ಆಯುಕ್ತರ ಉತ್ತರಕ್ಕೆ ಆಕ್ರೋಶಗೊಂಡ ಕಾಂಗ್ರೆಸ್‌ ಸದಸ್ಯರು ಮತ್ತೂಮ್ಮೆ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ಹಂತದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಎಲ್ಲ ಸದಸ್ಯರು ಹೋಗಿ ಮನವಿ ಪಡೆದು ಬರುವಂತಹ ತುರ್ತು ನಿರ್ಧಾರವನ್ನು ಸಭೆ ತೆಗೆದುಕೊಂಡಿತು.

ಬಹುತೇಕ ಎಲ್ಲ ಸದಸ್ಯರು ಪ್ರತಿಭಟನೆ ಸ್ಥಳಕ್ಕೆ ಹೋಗಿ ಮನವಿ ಪಡೆದು ಮತ್ತೆ ಸಭೆ ಆರಂಭಿಸಿದರು. ಆಗಲೂ ಕೂಡ ಗದ್ದಲ, ಗಲಾಟೆ ನಡೆಯಿತು. ನಂತರ ಅಜೆಂಡಾ ಪ್ರಕಾರವೇ ಸಭೆ ನಡೆಸಬೇಕು ಎಂದು ತೀರ್ಮಾನಿಸಿ ಆಸ್ತಿ ತೆರಿಗೆ ವಿಷಯವನ್ನು ಅಲ್ಲಿಗೆ ನಿಲ್ಲಿಸಲಾಯಿತು. ಮಾಹಿತಿ ಕೊಡಲು ಹಿಂದೇಟು: ಸದಸ್ಯರಾದ ನಾಗರಾಜ್‌ ಕಂಕಾರಿ, ಯೋಗೀಶ್‌, ಯಮುನಾ ರಂಗೇಗೌಡ ಮುಂತಾದವರು ಸಿಟಿ ಸೆಂಟರ್‌ಗೆ ಸಂಬಂಧಿ ಸಿದಂತೆ ಲೀಸ್‌ಗೆ ನೀಡಿದ ಬಗ್ಗೆ ಸಮಿತಿ ರಚಿಸಿ ವರದಿ ಪಡೆದು ಕ್ರಮ ಕೈಗೊಳ್ಳುವಂತೆ ನಿರ್ಣಯವಾಗಿದ್ದರೂ ಯಾರೂ ಚೆಕಾರವೆತ್ತಿಲ್ಲ. ಸಭೆ ಏಕೆ ನಡೆಯುತ್ತಿಲ್ಲ. ಏನಾಗುತ್ತಿದೆ ಇಲ್ಲಿ? ಇದನ್ನೆಲ್ಲ ನೋಡಿದರೆ ಭ್ರಷ್ಟಾಚಾರದ ಘಾಟು ಕಾಣಿಸುತ್ತಿದೆ ಎಂದು ನೇರ ಆರೋಪ ಮಾಡಿದರು.

ಇದಕ್ಕೆ ಉತ್ತರ ನೀಡಿದ ಆಯುಕ್ತರು ಸಮಿತಿ ರಚನೆ ಮಾಡಿದಾಗ ಅ ಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿತ್ತು. ಆದರೆ, ಅವರಿಗೆ ಅನಾರೋಗ್ಯ ಕಾರಣ ರಜೆ ನೀಡಲಾಗಿದೆ. ಅವರ ಬದಲು ಬೇರೊಬ್ಬ ಅ ಧಿಕಾರಿಯನ್ನು ನೇಮಿಸಲಾಗಿದೆ ಎಂದರು. ಸಭೆಯಲ್ಲಿ ಉಪಮೇಯರ್‌ ಶಂಕರ್‌ ಗನ್ನಿ, ಆಯುಕ್ತ ಚಿದಾನಂದ ವಟಾರೆ, ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಪಾಲಿಕೆ ಸದಸ್ಯರಾದ ಎಚ್‌.ಸಿ.ಯೋಗೇಶ್‌, ನಾಗರಾಜ್‌ ಕಂಕಾರಿ, ಬಿ.ಎ.ರಮೇಶ್‌ ಹೆಗಡೆ,ಆರ್‌ .ಸಿ.ನಾಯ್ಕ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.