ಕಾರ್ಮಿಕ ಅದಾಲತ್ ಸಮರ್ಪಕ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ
50 ತಾಲ್ಲೂಕುಗಳಲ್ಲಿ ಇಲಾಖೆ ಕಚೇರಿ ಆರಂಭ: ಸಚಿವ ಶಿವರಾಂ ಹೆಬ್ಬಾರ್
Team Udayavani, Aug 26, 2021, 10:12 PM IST
ಬೆಂಗಳೂರು: ರಾಜ್ಯದಲ್ಲಿನ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಜಾರಿ ಮಾಡಲಾಗಿರುವ ಕಾರ್ಮಿಕ ಅದಾಲತ್‌ನ ಸಮರ್ಪಕ ಜಾರಿಗೆ ಅನುವಾಗುವಂತೆ ನೋಡೆಲ್ ಅಧಿಕಾರಿಗಳನ್ನು ನೇಮಿಸುವುದಾಗಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರಕಟಿಸಿದರು.
ವಿಕಾಸಸೌಧದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿನ ಕಾರ್ಮಿಕರು ಮತ್ತು ಕಾರ್ಮಿಕ ಕುಟುಂಬಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾರ್ಮಿಕರ ಸಮಸ್ಯೆಗಳಿಗೆ ಒಂದೇ ಬಾರಿಗೆ ಪರಿಹಾರ ಒದಗಿಸುವ ಸಲುವಾಗಿ ಕಾರ್ಮಿಕ ಅದಾಲತ್ ಯೋಜನೆ ಜಾರಿ ಮಾಡಲಾಗಿದೆ. ಹೀಗೆ ಜಾರಿ ಮಾಡಲಾಗಿರುವ ಯೋಜನೆ ಉದ್ದೇಶ ಯಶಸ್ವಿಗೊಳಿಸುವ ಸಲುವಾಗಿ ಅದಾಲತ್‌ಗಳ ಕಾರ್ಯವೈಖರಿಗೆ ಚುರುಕು ನೀಡುವ ಸಲುವಾಗಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ ಎಂದರು.
ಕಾರ್ಮಿಕ ಇಲಾಖೆ ಅಧಿಕಾರಿಗಳು 1ರಿಂದ 5ನೇ ತಾರೀಖಿನವರೆಗೆ ಪ್ರಚಾರ ಕೈಗೊಂಡು ಅಹವಾಲುಗಳನ್ನು ಸ್ವೀಕರಿಸಬೇಕು, 5ರಿಂದ 15ರವರೆಗೆ ಅರ್ಜಿಗಳ ವಿಚಾರಣೆ ನಡೆಸಿ ವಿಲೇವಾರಿ ಮಾಡಬೇಕು. 15ರಿಂದ 30ರೊಳಗೆ ವಿಲೇವಾರಿಯಾದ ಅರ್ಜಿಗೆ ಸಂಬಂಧಿಸಿದಂತಹ ತೀರ್ಮಾನಗಳನ್ನು ಜಾರಿ ಮಾಡಬೇಕು. ತೀರ್ಮಾನಗಳ ಜಾರಿ ಎಂದರೆ ಸಂಬಂಧಿತ ಕಾರ್ಮಿಕರ ಖಾತೆಗೆ ಪರಿಹಾರ ಧನ ಸೇರಿದಂತೆ ಯೋಜನೆಗಳ ಸಹಾಯಧನ ಜಮೆ ಆಗಿರಬೇಕು. ತಪ್ಪಿದಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಒಟ್ಟಾರೆ ಕಾರ್ಮಿಕ ಅದಾಲತ್‌ನ ಉದ್ದೇಶ ಜಾರಿ ಮತ್ತಿ ಅದಾಲತ್ ಕಾರ್ಯವೈಖರಿ ಪರಿಶೀಲನೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಇದನ್ನೂ ಓದಿ:ನೋಡ ಬನ್ನಿ ಕರಡಿ ಸಫಾರಿ : ಹುಲಿ-ಸಿಂಹ ಸಫಾರಿಯಂತೆ ಕರಡಿ ಸಫಾರಿ ಕಣ್ತುಂಬಿಕೊಳ್ಳಿ..
50 ಕಾರ್ಮಿಕ ಕಚೇರಿಗಳ ಆರಂಭ:
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತಾಲ್ಲೂಕುಗಳೂ ಸೇರಿದಂತೆ 50 ತಾಲ್ಲೂಕುಗಳಲ್ಲಿ ಕಾರ್ಮಿಕ ಇಲಾಖೆ ಕಚೇರಿಗಳಿಲ್ಲ ಎಂದು ಹೇಳಿದ ಸಚಿವ ಶಿವರಾಂ ಹೆಬ್ಬಾರ್, ಈ ಐವತ್ತೂ ತಾಲ್ಲೂಕುಗಳಲ್ಲಿ ಕಾರ್ಮಿಕ ಇಲಾಖೆ ಕಚೇರಿಗಳನ್ನು ಆರಂಭಿಸಿ ಓರ್ವ ಅಧಿಕಾರಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ ಎಂದರು.
ಕಾರ್ಮಿಕ ಇಲಾಖೆಯನ್ನು ಸರ್ವ ಸ್ಪರ್ಶಿ ಸರ್ವ ವ್ಯಾಪಿಯನ್ನಾಗಿಸಲಾಗುವುದು, ಕಾರ್ಮಿಕರ ಹಿತರಕ್ಷಣೆಗಾಗಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈ ವಿಚಾರದಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸತತ ಸಂಪರ್ಕ ಸಾಧಿಸಲಾಗಿದೆ. ಕಾರ್ಮಿಕ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯಧನ ನೀಡಲಾಗುತ್ತಿದೆ. ಕೆಎಎಸ್, ಐಎಎಸ್, ಐಐಟಿ, ಐಪಿಎಸ್ ಓದುವ ಕಾರ್ಮಿಕ ಮಕ್ಕಳಿಗೆ ಸಹಾಯಧನ ನೀಡುವ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.
ಪ್ರತಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ:
ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಇಎಸ್‌ಐ ಆಸ್ಪತ್ರೆ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಇದಕ್ಕಾಗಿ ಮುಂದಿನ ವಾರ ದಿಲ್ಲಿಗೆ ತೆರಳುವುದಾಗಿ ಅವರು ಪ್ರಕಟಿಸಿದರು.
ಇಎಸ್‌ಐ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳಿದ್ದರೂ ಸಹ ವೈದ್ಯರು ಎಂ ಪ್ಯಾನೆಲ್ ಆಗಿರುವ ಆಸ್ಪತ್ರೆಗಳಿಗೆ ರೋಗಿಗಳನ್ನು ಸಾಗಾಕುತ್ತಿದ್ದಾರೆ. ಹೀಗೆ ಎಂಪ್ಯಾನಲ್ ಆಸ್ಪತ್ರೆಗೆ ಕಳುಹಿಸಲಾಗಿರುವ ರೋಗಿಗಳ ಬಿಲ್ ಅನ್ನು ಇಲಾಖೆಯೇ ನೀಡುತ್ತಿದೆ ಎಂದ ಸಚಿವರು, ಮುಂದಿನ ದಿನಗಳಲ್ಲಿ ಈ ಅವ್ಯವಸ್ಥೆಯನ್ನು ತಪ್ಪಿಸಿ ರಾಜ್ಯದಲ್ಲಿ ಇರುವ 180 ಚಿಕಿತ್ಸಾಲಯಗಳಲ್ಲಿಯೇ ಅಗತ್ಯ ಚಿಕಿತ್ಸೆ ಕೊಡಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕ್ರಮವಹಿಸಲಾಗುತ್ತಿದೆ ಎಂದ ಅವರು, ಈ ಸಂಬಂಧ ಸಹ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಲಸಿಕಾ ಅಭಿಯಾನ:
ಕೋವಿಡ್ 19 ಜಾಗತಿಕ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ಕಾರ್ಮಿಕರಿಗೆ ಲಸಿಕೆ ಹಾಕಿಸುವ ಅಭಿಯಾನವನ್ನೂ ಸಹ ಆರಂಭಿಸಲಾಗಿದೆ ಎಂದು ತಿಳಿಸಿದ ಸಚಿವ ಹೆಬ್ಬಾರ್, ರಾಜ್ಯಾದ್ಯಂತ ಸುಪ್ರೀಂ ಕೋರ್ಟ್ ನ ಆದೇಶದಂತೆ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ ಎಂದರು.
ಆಹಾರ ಕಿಟ್‌ಗಳ ವಿತರಣೆಯನ್ನು ಪಕ್ಷಾತೀತವಾಗಿ ಮಾಡಲಾಗಿದ್ದು, ಎಲ್ಲಿಯೂ ದೂರು ಬಾರದಂತೆ ಶ್ರಮಿಕರಿಗೆ ಆಹಾರ ಕಿಟ್ ತಲುಪಿಸಲಾಗಿದೆ ಎಂದರಲ್ಲದೆ, ಶ್ರಮ ಸಾಮರ್ಥ್ಯ ಯೋಜನೆಯಡಿ ಟೂಲ್ ಕಿಟ್‌ಗಳನ್ನೂ ಸಹ ನೀಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ನಡೆದ ಎಂ.ಎಅ. ಫುಡ್ ಇಂಡಸ್ಟ್ರೀಸ್ ನ ಅಪಘಾತದಲ್ಲಿ ದುರ್ಮರಣಕ್ಕೀಡಾದ ಕಾರ್ಮಿಕರ ಕುಟುಂಬಗಳಿಗೆ ಕಲ್ಯಾಣ ಮಂಡಳಿಯಿಂದ ತಲಾ ಮೂರು ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಕಾರ್ಮಿಕ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿ ಕಲ್ಪನಾ, ಇಲಾಖೆ ಆಯುಕ್ತ ಮತ್ತು ಕಾರ್ಯದರ್ಶಿ ಅಕ್ರಂ ಪಾಷ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.