ರೈತರ ಹೊಲಗಳನ್ನು ನಿಮ್ಮ ಕಾರ್ಪೋರೇಟ್ ಸ್ನೇಹಿತರಿಗೆ ನೀಡಲು ಬಿಡುವುದಿಲ್ಲ : ರಾಹುಲ್ ಕಿಡಿ
Team Udayavani, Aug 27, 2021, 3:43 PM IST
ನವ ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಮತ್ತೆ ಹರಿಹಾಯ್ದಿದ್ದಾರೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ವಿರೋಧಿಯಾಗಿದೆ ಎಂದು ಅವರು ಪುನರುಚ್ಛರಿಸಿದ್ದಾರೆ. ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದ್ದು, ಈಗ ಮತ್ತೊಮ್ಮೆ ಕಾಂಗ್ರೆಸ್ ಸಂಸದ ರಾಹುಲ್ , ಕೇಂದ್ರ ಸರ್ಕಾರವು ಬಂಡವಾಳಶಾಹಿ ಧೋರಣೆಯ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ಗಣೇಶ ಹಬ್ಬದ ಬಳಿಕ ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ: ಬಿ.ಎಸ್.ಯಡಿಯೂರಪ್ಪ
ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರದ ವಿರುದ್ಧ ಹರಿಹಾಯ್ದ ಗಾಂಧಿ, ಹೊಲಗಳು ಮರಳಾಗಲು ಬಿಡುವುದಿಲ್ಲ, ಅದನ್ನು ಅವರ (ಬಿಜೆಪಿ) ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ’ ಎಂದಿದ್ದಾರೆ.
खेत को रेत नहीं होने देंगे,
मित्रों को भेंट नहीं देने देंगे।कृषि विरोधी क़ानून वापस लो! #FarmersProtest
— Rahul Gandhi (@RahulGandhi) August 27, 2021
ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ, ಕೃಷಿ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ಮೇಲೆ ಆರೋಪಿಸಿದ್ದರು. ಕೃಷಿ ಭೂಮಿಯನ್ನು ಕಾರ್ಪೋರೇಟ್ ಸ್ನೇಹಿತ ವರ್ಗದವರಿಗೆ ನೀಡಲು ಸಂಚು ರೂಪಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತ ಪಡಿಸಿದ್ದರು.
ಕಳೆದ ವರ್ಷ ನವೆಂಬರ್ 26ರಂದು ದೆಹಲಿ ಸಿಂಘು ಗಡಿಯಲ್ಲಿ ರೈತರು ಆರಂಭಿಸಿರುವ ಹೋರಾಟವು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ.
ಇದನ್ನೂ ಓದಿ : ಬಣವಿ ಒಟ್ಟುವಂತಿಲ್ಲ..ಭೆರಣಿ ತಟ್ಟುವಂತಿಲ್ಲ!ನಗರವೆಂಬ ಹಳ್ಳಿ ವಾರ್ಡುಗಳ ಅಭಿವೃದ್ಧಿ ವ್ಯಥೆ |
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.