![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2021, 4:03 PM IST
ಬೆಂಗಳೂರು : ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರತಿ ದಿನ 5 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದಕ್ಕೆ ಅಗತ್ಯ ಪ್ರಮಾಣದ ಲಸಿಕೆ ಒದಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿ ಭೇಟಿಯ ಮುಖ್ಯ ಉದ್ದೇಶ ಹೆಚ್ಚುವರಿ ಲಸಿಕೆ ಪಡೆಯುವುದಾಗಿದ್ದು, ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಅವರ ಭರವಸೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಜೊತೆಗೆ ಸುಪ್ರೀಂ ಕೋರ್ಟ್ ಜಲವಿವಾದ ಗಳ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಕಾನೂನು ತಜ್ಞರು ಹಾಗೂ ತಾಂತ್ರಿಕ ತಂಡದವರೊಂದಿಗೆ ಚರ್ಚೆ ನಡೆಸಲಾಯಿತು.
ಇದನ್ನೂ ಓದಿ : ರೈತರ ಹೊಲಗಳನ್ನು ನಿಮ್ಮ ಕಾರ್ಪೋರೇಟ್ ಸ್ನೇಹಿತರಿಗೆ ನೀಡಲು ಬಿಡುವುದಿಲ್ಲ : ರಾಹುಲ್ ಕಿಡಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಜಿ.ಎಸ್.ಟಿ. ಪರಿಹಾರ 2022ಕ್ಕೆ ಅಂತ್ಯಗೊಳ್ಳಲಿದ್ದು, ಇದನ್ನು ಮುಂದುವರೆಸುವಂತೆ ಮನವಿ ಮಾಡಲಾಯಿತು. ಜಿ.ಎಸ್.ಟಿ. ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸುವುದಾಗಿ ಸಚಿವರು ತಿಳಿಸಿರುವುದಾಗಿ ಹೇಳಿದ್ದಾರೆ.
ಪಿಯೂಷ್ ಗೋಯಲ್ ಅವರು ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಅಂತರರಾಷ್ಟ್ರೀಯ ಮಟ್ಟದ ಕಂಪೆನಿಗಳ ಜೊತೆ ಸಂಪರ್ಕ ಒದಗಿಸುವುದಾಗಿ ತಿಳಿದ್ದಾರೆ. ಇದು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದೊರೆಯಲು ಸಾಧ್ಯವಾಗುತ್ತದೆ. ವಿಶೇಷವಾಗಿ ಹೆಣ್ಣುಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಇನ್ನು, ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರತಿಕ್ರಿಯಿಸಿದ ಅವರು, ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ. ನನಗೇ ನೇರವಾಗಿ ವರದಿ ಮಾಡಿ ಎಂದು ತಿಳಿಸಿದ್ದೇನೆ. ಡಿಜಿಪಿ ಅವರು ಇಂದು ಸ್ವತಃ ಮೈಸೂರಿಗೆ ಭೇಟಿ ನೀಡಿದ್ದಾರೆ. ಡಿಜಿಪಿ ಅವರೇ ಖುದ್ದು ಈ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸುವಂತೆ ತಿಳಿಸಿದ್ದೇನೆ. ಶೀಘ್ರದಲ್ಲೇ ಪ್ರಕರಣ ಭೇದಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.
ಗೌರಿ-ಗಣೇಶ ಹಬ್ಬ ಆಚರಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಆಗಸ್ಟ್ 30 ರಂದು ನಡೆಯಲಿರುವ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ.
ಜೆ.ಪಿ ನಡ್ಡಾ ಅವರೊಂದಿಗೆ ಮುಂದೆ ಚರ್ಚೆ ಮಾಡ್ತೇನೆ : ಸಿಎಂ
ಸಚಿವ ಸಂಪುಟದಲ್ಲಿನ ಖಾಲಿ ಸ್ಥಾನ ಭರ್ತಿ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರನ್ನು ಬೇರೆ ಬೇರೆ ಕಾರಣಗಳಿಂದ ಭೇಟಿ ಮಾಡಲು ಆಗಲಿಲ್ಲ. ಮುಂದಿನ ಬಾರಿ ನವದೆಹಲಿಗೆ ತೆರಳಿದಾಗ ಆ ಬಗ್ಗೆ ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ : ‘ಹೀಗೆ ಬಂದು ಹಾಗೆ ಹೋದ್ರು’..: ಐದು ನಿಮಿಷಕ್ಕೆ ಸೀಮಿತವಾಯ್ತು ಗೃಹ ಸಚಿವರ ಘಟನಾ ಸ್ಥಳ ಭೇಟಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.