ಚಿಕ್ಕಮಗಳೂರಿನಲ್ಲಿ ತಲೆ ಎತ್ತಲಿರುವ ಸಾಂಬಾರು ಪಾರ್ಕ್ ನಿರ್ಮಾಣ


Team Udayavani, Aug 27, 2021, 7:01 PM IST

Shobha Karandlaje And Murugesh Nirani / Chikkamagaluru

ಬೆಂಗಳೂರು : ಮಲೆನಾಡು ಜನತೆಯ ಬಹುದಿನಗಳ ಬೇಡಿಕೆಯಾದ ಸಾಂಬಾರ್(ಸ್ಪೈಸ್) ಪಾರ್ಕ್ ಸದ್ಯದ್ಲಲೇ ತಲೆಎತ್ತಲಿದ್ದು,ದಶಕಗಳ ಕನಸು ಕೊನೆಗೂ ನನಸಾಗುವ ದಿನ ಸಮೀಪಿಸಿದೆ.

ಇಂದು (ಶುಕ್ರವಾರ, ಆಗಸ್ಟ್ 27) ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಉದ್ಯೋಗ ಮಿತ್ರದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಾಗೂ ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ  ಅವರು ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆ  ಹೊಸಕೋಟೆ ಸಮೀಪದ ಅಂಬಾಲಿ ಗ್ರಾಮದಲ್ಲಿ ಸುಮಾರು  10 ಎಕರೆ ಜಮೀನಿನಲ್ಲಿ ಸಾಂಬಾರು  ಪಾರ್ಕ್ ನಿರ್ಮಿಸಲು ಸಭೆ ಒಮ್ಮತದ ತೀರ್ಮಾನವನ್ನು ಕೈಗೊಂಡಿದೆ.

ಇದನ್ನೂ ಓದಿ : ಎರಡು ರಾಷ್ತ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಗ್ರೀನ್ ಸಿಗ್ನಲ್ : ಸಂಸದ ಜೊಲ್ಲೆ

ಕರ್ನಾಟಕ ಕೈಗಾರಿಕಾ ಪ್ರವೇಶಾಭಿವೃದ್ಧಿ ನಿಗಮ(ಕೆಐಎಡಿಬಿ)ವು ರೂ. 20,35,665  ಆರ್ಥಿಕ ನೆರವು ನೀಡಲಿದ್ದು, 10 ಎಕರೆ ಜಮೀನನಿನಲ್ಲಿ ಪಾರ್ಕ್ ನಿರ್ಮಾಣವಾಗಲಿದೆ.

ಚಿಕ್ಕಮಗಳೂರಿನಲ್ಲಿ ಸಾಂಬಾರು ಪಾರ್ಕ್ ನಿರ್ಮಾಣವಾಗಬೇಕೆಂಬುದು ದಶಕಗಳ  ಬೇಡಿಕೆಯಾಗಿತ್ತು. ಅದು ಒಂದಿಲ್ಲೊಂದು ಕಾರಣಗಳಿಂದ ಮುಂದೂಡಿಕೆಯಾಗುತ್ತಲೇ ಇತ್ತು. ಇತ್ತೀಚೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಜೊತೆ ಶೋಭಾ ಕರಂದ್ಲಾಜೆ ಅವರು ಮಾತುಕತೆ ನಡೆಸಿದ್ದರು.

ಜೊತೆಗೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಿಗೆ  ಜಮೀನಿನ ಮಾರುಕಟ್ಟೆಯ ದರದಂತೆ ಜಾಗದ ರೂ. 20,35,665 ಪಾವತಿಸಿದ್ದರು. ಇದಕ್ಕೆ ತಕ್ಷಣವೇ  ಸ್ಪಂದಿಸಿದ್ದ ನಿರಾಣಿಯವರು ಚಿಕ್ಕಮಗಳೂರಿನ ಸೂಕ್ತ ಸ್ಥಳದಲ್ಲಿ  ಕೆಐಎಡಿಬಿಯಿಂದ ಜಾಗ ಗುರುತಿಸುವಂತೆ ಸೂಚನೆ ನೀಡಿದ್ದರು.

ಘಟಕ ಸ್ಥಾಪನೆ:

ರಾಜ್ಯದಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳನ್ನು ವಿದೇಶಕ್ಕೆ ರಫ್ತು ಮಾಡಲು “ವಿಶೇಷ ಘಟಕ” ಸ್ಥಾಪನೆ ಮಾಡಬೇಕೆಂಬ ಪ್ರಸ್ತಾವನೆಯನ್ನು ಶೋಭಾ ಕರಂದ್ಲಾಜೆ ಅವರ ಮುಂದಿಟ್ಟರು.

ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುರುಗೇಶ್ ನಿರಾಣಿ ಅವರು ಶೀಘ್ರದಲ್ಲೇ  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ವತಿಯಿಂದ  ವಿಶೇಷ ಘಟಕವನ್ನು ಆರಂಭಿಸಲಾಗುವುದು. ರೈತರಿಗೆ ಅನುಕೂಲವಾಗಲು ಯಾವುದೇ ಕ್ರಮ ಕೈಗೊಳ್ಳಲು ಸಿದ್ದವಿರುವುದಾಗಿ  ಪ್ರಕಟಿಸಿದರು.

ಪರಿಹಾರ ಹೆಚ್ಚಳಕ್ಕೆ ಕ್ರಮ

ಇದೇ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು, ತಮ್ಮ ತವರು ಜಿಲ್ಲೆ ಬಾಗಲಕೋಟೆಯ ಜಮಖಂಡಿ

ಉಪವಿಭಾಗದಲ್ಲಿ ಕೃಷ್ಣಾನದಿ ಪ್ರವಾಹದಿಂದ ಉಂಟಾಗಿರುವ ಸವಳು – ಜವಳು ಮಣ್ಣಿನ ಕುಸಿದ ಬಗ್ಗೆ  ಸಚಿವರ ಗಮನ ಸೆಳೆದರು. ಪ್ರತಿ ವರ್ಷ ಮಳೆಗಾಲದಲ್ಲಿ ಪ್ರವಾಹ ಬಂದರೆ ಕೃಷ್ಣನದಿ ಉಕ್ಕಿ ಹರಿದು ಜಮಖಂಡಿ ಉಪವಿಭಾಗದಲ್ಲಿ ಪ್ರವಾಹ ಉಂಟಾಗುತ್ತದೆ. ಇದರಿಂದ ರೈತರ ಜಮೀನಿನಲ್ಲಿರುವ ಫಲವತ್ತಾದ ಮಣ್ಣು ಕೊಚ್ಚಿಹೋಗಿ ರೈತರುಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಶೋಭಾ ಕರಂದ್ಲಾಜೆಗೆ ಮನವರಿಕೆ ಮಾಡಿದರು.

ಅತಿವೃಷ್ಟಿ ಮತ್ತು ಪ್ರವಾಹ ಸಂದರ್ಭದಲ್ಲಿ ಕೃಷಿ ಭೂಮಿಯಲ್ಲಿ ಆಗಬಹುದಾದ ಕೊರಕಲು, ಭೂ ಸವಕಳಿಯಂತಹ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಹೊಲ ಸಮತಟ್ಟು ಉಳಿಸಲು ರೈತರಿಗೆ ಕೇಂದ್ರದಿಂದ ಅಗತ್ಯ ಪರಿಹಾರ ಒದಗಿಸಲು ಎನ್‍ಡಿಆರ್ ಎಪ್  ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿದರು.

ಸರ್ಕಾರ ನೀಡುತ್ತಿರುವ ಪರಿಹಾರವು ರೈತರಿಗೆ ಸಾಕಾಗುತ್ತಿಲ್ಲ. ಇದೊಂದು ಶಾಶ್ವತ ಸಮಸ್ಯೆಯಾಗಿರುವುದರಿಂದ ಕೇಂದ್ರ ಸರ್ಕಾರ ಈಗಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಇದಕ್ಕೆ ಸ್ಪಂದಿಸಿದ ಶೋಭಾ ಕರಂದ್ಲಾಜೆ ಅವರು ಈ ಸಂಬಂಧ ಕೇಂದ್ರ  ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಜೊತೆ ಚರ್ಚಿಸಿ  ರೈತರಿಗೆ ಪರಿಹಾರ ಹೆಚ್ಚಳ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಆಶ್ವಾಸನೆ ನೀಡಿದರು.

ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಗಣಿಗಾರಿಕೆ ಪುನರಾರಂಭಿಸುವ ಪ್ರಯತ್ನಕ್ಕೆ ಸರ್ಕಾರ ಬದ್ಧ: ಪ್ರಮೋದ ಸಾವಂತ್

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

complaint

Kundapura: ಹಲ್ಲೆ, ಗಾಯ; ದೂರು ದಾಖಲು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.