ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆಯೊಂದಿಗೆ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು :ಸಿಎಂ
Team Udayavani, Aug 27, 2021, 6:50 PM IST
ಬೆಂಗಳೂರು : ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಜೀವನದ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಾತಂತ್ರ್ಯ ಬಂದ ನಂತರ ಅಸಂಘಟಿತ ಕಾರ್ಮಿಕರ ನೋಂದಣಿ ಮೊದಲ ಬಾರಿ ನಡೆಯುತ್ತಿದೆ. ಅವರನ್ನು ಗುರುತಿಸಲಾಗುತ್ತಿದೆ.
ಕೂಲಿ ಕಾರ್ಮಿಕ ಇರಲಿ, ರೈತ ಕಾರ್ಮಿಕ ಇರಲಿ, ಅವರ ಶ್ರಮಕ್ಕೆ ಪ್ರತಿಫಲ ಸಿಗಬೇಕು. ಒಂದು ದೇಶದ ಸಂಪತ್ತು ಸೃಷ್ಟಿ ಕೇವಲ ಹಣದಿಂದ ಸಾಧ್ಯವಿಲ್ಲ. ಹಣ ಬಳಕೆ ಮಾಡಿ, ಶ್ರಮ ವಹಿಸಿ, ಭೌತಿಕ ಸೌಲಭ್ಯ ಸೃಷ್ಟಿಸಬೇಕಾದರೆ ಕಾರ್ಮಿಕರೇ ಬೇಕು. ಅಸಂಘಟಿತ ಕಾರ್ಮಿಕರೇ ದೇಶದ ಶಕ್ತಿ. ಆರ್ಥಿಕತೆಯ ಪಿರಮಿಡ್ ನ ತಳಹದಿ ಇವರು. ಈ ತಳಹದಿ ಭದ್ರವಾಗಿದ್ದರೆ ಮಾತ್ರ ಆರ್ಥಿಕತೆ ಉತ್ತಮವಾಗಿರಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಇದನ್ನೂ ಓದಿ :ಚುನಾವಣೆ-ರಾಜಕೀಯ ಸಭೆಗಿಲ್ಲದ ನಿರ್ಬಂಧ ನಮಗ್ಯಾಕೆ?ವೀಕೆಂಡ್ ಕರ್ಫ್ಯೂ ಬೆಂಬಲಿಸಲ್ಲ
ರಾಜ್ಯಕ್ಕೆ 1.8 ಕೋಟಿ ಕಾರ್ಮಿಕರ ನೋಂದಣಿಯ ಗುರಿ ನಿಗದಿ ಪಡಿಸಲಾಗಿದೆ. ನಿಜವಾದ ಅಸಂಘಟಿತ ಕಾರ್ಮಿಕರ ನೋಂದಣಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಈ ನೋಂದಣಿಯಿಂದ ಕಾರ್ಮಿಕರಿಗೆ ಇರುವ ಅನುಕೂಲಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಮನವೊಲಿಸಬೇಕು ಎಂದು ಸೂಚಿಸಿದರು.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ,ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ್, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಮ್ ಪಾಷಾ ಮತ್ತು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.