ಅತ್ಯಾಚಾರ ಪ್ರಕರಣದ ತನಿಖೆ ತೀವ್ರಗತಿಯಲ್ಲಿದೆ: ಸಚಿವ ಎಸ್.ಟಿ. ಸೋಮಶೇಖರ್
Team Udayavani, Aug 27, 2021, 8:40 PM IST
ಚಾಮರಾಜನಗರ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಮುಖ್ಯಮಂತ್ರಿಗಳ ಆದೇಶದಂತೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಸಂತ್ರಸ್ತೆಯನ್ನು ಯಾರೂ ಭೇಟಿ ಮಾಡಿಲ್ಲ. ಭೇಟಿ ಮಾಡದಂತೆ ಸಂತ್ರಸ್ತೆಯ ಪೋಷಕರು ಪತ್ರ ನೀಡಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಶುಕ್ರವಾರ, ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಚಾಮರಾಜನಗರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ಮೂರು ದಿನಗಳಿಂದ ಪ್ರಕರಣದ ಕುರಿತು ತೀವ್ರ ತನಿಖೆ ಮಾಡಲಾಗುತ್ತಿದೆ. ಆರೋಪಿಗಳ ಪತ್ತೆಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.
ಒಬ್ಬರಿಗೆ ಐದು ಕೆಜಿ ಅಕ್ಕಿ ಸಾಕು ಎಂಬ ಆಹಾರ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವರು ಹೇಳಿದ್ದೆಲ್ಲ ನಡೆಯೋದಿಲ್ಲ.ಯಾರಿಗೆ ಎಷ್ಟು ಕೆಜಿ ಅಕ್ಕಿ ಕೊಡ ಬೇಕು ಎಂಬುದು ಕ್ಯಾಬಿನೆಟ್ ನಲ್ಲಿ ನಿರ್ಧಾರವಾಗುತ್ತದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಹತ್ತು ಕೆಜಿ ಅಕ್ಕಿ ನೀಡಿದ್ದರು. ಈಗ ಸ್ವಲ್ಪ ಕಡಿಮೆ ಮಾಡಲಾಗಿದೆ. ಹೆಚ್ಚಳ ಮಾಡ ಬೇಕು ಎಂದರೆ ಕ್ಯಾಬಿನೆಟ್ ನಲ್ಲಿಯೇ ನಿರ್ಧಾರ ಆಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.