ಹೈಟೆಕ್‌ ಗ್ರಂಥಾಲಯಕ್ಕೆ ಶೀಘ್ರ ಉದ್ಘಾಟನೆ ಭಾಗ್ಯ!

ಮುಂದಿನ ತಿಂಗಳೊಳಗಾಗಿ ಒಳಾಂಗಣ ವಿನ್ಯಾಸ ಪೂರ್ಣ

Team Udayavani, Aug 28, 2021, 6:51 AM IST

ಹೈಟೆಕ್‌ ಗ್ರಂಥಾಲಯಕ್ಕೆ ಶೀಘ್ರ ಉದ್ಘಾಟನೆ ಭಾಗ್ಯ!

ಉಡುಪಿ: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಒಳಾಂಗಣ ವಿನ್ಯಾಸಕ್ಕೆ ಹಣಕಾಸು ಕೊರತೆಯಿಂದ ಸ್ಥಗಿತಗೊಂಡ ಕಾಮಗಾರಿ ಇದೀಗ ಪ್ರಾರಂಭಗೊಂಡಿದೆ. ಉದ್ಘಾಟನೆ ಭಾಗ್ಯ ಸಮೀಪಿಸುತ್ತಿದೆ.

ನೂತನ ಡಿಜಿಟಲ್‌ ಗ್ರಂಥಾಲಯ ಅಜ್ಜರಕಾಡು ಸಮೀಪದ ಸುಮಾರು 20 ಸೆಂಟ್ಸ್‌ ಜಾಗದಲ್ಲಿ 5.18 ಕೋ.ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಅದಕ್ಕಾಗಿ ಆಸ್ಕರ್‌ ಫೆರ್ನಾಂಡಿಸ್‌ ರಾಜ್ಯಸಭೆ ಸದಸ್ಯರ ನಿಧಿಯಿಂದ 99.50 ಲ.ರೂ., ನಗರಾಭಿವೃದ್ಧಿ ಪ್ರಾಧಿಕಾರದಿಂದ 87.50 ಲ.ರೂ., ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ 2.51 ಕೋ., ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರ ಸಂಸದರ ನಿಧಿಯಿಂದ 5 ಲ. ರೂ. ಬಳಕೆ ಮಾಡಲಾಗಿದೆ. ಇನ್ನು ಸುಮಾರು 74 ಲ.ರೂ. ಅನುದಾನ ಬಿಡುಗಡೆಯಾಗಬೇಕಿದೆ.

5 ವರ್ಷಗಳ ಕಾಯುವಿಕೆ
2016ರಲ್ಲಿ ಅಂದಿನ ಜಿಲ್ಲಾಧಿಕಾರಿಯಾಗಿದ್ದ ವಿಶಾಲ್‌ ಹಾಗೂ ಮಾಜಿ ಸಚಿವ ವಿನಯ ಕುಮಾರ್‌ ಅವರ ಅವಧಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಗಿತ್ತು. 2019ರ ಮಾರ್ಚ್‌ನಲ್ಲಿ ಜಿಲ್ಲಾ ಗ್ರಂಥಾಲಯದ ಕಾಮಗಾರಿ ಪೂರ್ಣಗೊಂಡಿತ್ತು. ಅನುದಾನದ ಕೊರತೆಯಿಂದ ಒಳಾಂಗಣದ ವಿನ್ಯಾಸ ಕಾಮಗಾರಿ ಬಾಕಿ ಉಳಿಸಲಾಗಿತ್ತು.

ಹೈಟೆಕ್‌ ಮಾದರಿ ಕಟ್ಟಡ
ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡ ಹೈಟೆಕ್‌ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಅತ್ಯಾಧುನಿಕ ಮಾದರಿಯ ತಂತ್ರಜ್ಞಾನ ಸೌಲಭ್ಯ ಗಳನ್ನು ಅಳವಡಿಸಲಾಗಿದೆ. ತಳಮಹಡಿ ಸೇರಿದಂತೆ ಒಟ್ಟು ನಾಲ್ಕು ಮಹಡಿಗಳಿವೆ. ತಳಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಮೆಟ್ಟಿಲು, ಜನರೇಟರ್‌ ಹಾಗೂ ಪುಸ್ತಕ ಸಂಗ್ರಹ ಕೊಠಡಿ ನಿರ್ಮಿಸಲಾಗಿದೆ. ನೆಲ ಮಹಡಿ ಯಲ್ಲಿ ಹಿರಿಯ ನಾಗರಿಕರ ಕೊಠಡಿ, ಹಾಗೂ ಮಕ್ಕಳ ಪುಸ್ತಕ ವಿಭಾಗ, ದಿನಪತ್ರಿಕೆಗಳ ವಿಭಾಗ, ವಾರ, ತಿಂಗಳ ಪತ್ರಿಕೆಗಳಿಗೆ ಪ್ರತ್ಯೇಕ ವಿಭಾಗ ಗಳಾಗಿ ವಿಂಗಡಿಸಲಾಗಿದೆ. ಮೊದಲ ಮಹಡಿಯು ಕಂಪ್ಯೂಟರ್‌ ಕೊಠಡಿ, ಡಿಜಿಟಲ್‌ ಗ್ರಂಥಾಲಯ, ಕಿರು ಸಭಾಂಗಣ ನಿರ್ಮಿಸಲಾಗಿದೆ. ಎರಡನೇ ಮಹಡಿಯಲ್ಲಿ 100 ಜನರು ಕುಳಿತುಕೊಳ್ಳುವ ಸಭಾಂಗಣ, ಕಚೇರಿ, ಓದುವ ಕೊಠಡಿಯನ್ನು ಒಳಗೊಂಡಿದೆ.

ಇದನ್ನೂ ಓದಿ:ಅತ್ಯಾಚಾರದಂಥ ಪ್ರಕರಣಗಳು  ನಡೆಯುತ್ತಿರುತ್ತವೆ,ಇದಕ್ಕೆ ಏನೂ ಮಾಡೋಕೆ ಆಗಲ್ಲ : ಸಚಿವ ಕತ್ತಿ

ಬೇಡಿಕೆ ಈಡೇರಿಕೆಗೆ
ಕಾಲ ಸನ್ನಿಹಿತ
ನಗರದಲ್ಲಿ ಒಂದು ಸುಸಜ್ಜಿತ ಕೇಂದ್ರ ಗ್ರಂಥಾಲಯ ನಿರ್ಮಾಣವಾಗಬೇಕು. ಎಲ್ಲ ಸೌಲಭ್ಯಗಳು ಗ್ರಂಥಾಲ ಯದಲ್ಲಿ ಸಿಗಬೇಕು ಎನ್ನುವುದು ಓದುಗರ ಹಲವು ದಶಕಗಳ ಆಸೆಯಾಗಿತ್ತು. ಆದರೆ, ಇದೀಗ ನನಸಾಗುವ ಕಾಲ ಸನ್ನಿಹಿತವಾಗಿದೆ. ಬಾಕಿ ಒಳಾಂಗಣ ವಿನ್ಯಾಸ ಕಾಮಗಾರಿ ವಿಳಂಬ ಮಾಡದೆ ನಿಗದಿತ ಅವಧಿ ಯೊಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಅನು ಕೂಲ ಮಾಡಿಕೊಡಬೇಕು ಎನ್ನುವುದು ಓದುಗರ ಒತ್ತಾಸೆಯಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ತಯಾರಿ
ಗ್ರಂಥಾಲಯದಲ್ಲಿ ಐಎಎಸ್‌, ಕೆಎಎಸ್‌, ಐಎಎಸ್‌ ಮುಂತಾದ ಸಿವಿಲ್‌ ಸರ್ವಿಸ್‌ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ತರಬೇತಿ ನೀಡಲು ಕಿರು ಸಭಾಂಗಣ ಹಾಗೂ ಅಧ್ಯಯನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವಂತೆ ಗ್ರಂಥಾಲಯಕ್ಕೆ 24×7 ವಿದ್ಯುತ್‌ ಸಂಪರ್ಕ ಒದಗಿಸಲಾಗುತ್ತದೆ. ಅದಕ್ಕೆ ಪೂರಕ ಜನರೇಟರ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನೆಲ ಮಹಡಿಯಲ್ಲಿ ಏಕಕಾಲಕ್ಕೆ 50ಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದು. ಕಟ್ಟಡ ಮುಂಭಾಗ ಇಂಟರ್‌ ಲಾಕ್‌ ಹಾಕಲಾಗಿದೆ.

ಗೋವಿಂದಾಚಾರ್ಯರ ಹೆಸರಿಡಲು ಮನವಿ
ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ವಿದ್ಯಾವಾಚಸ್ಪತಿ ಗೋವಿಂದಾಚಾರ್ಯರು ಮಾಧ್ವ ತತ್ವದಲ್ಲಿ ಅಮೋಘ ಪಾಂಡಿತ್ಯ ಹೊಂದಿದ್ದರು. ಕನ್ನಡ ಹಾಗೂ ಸಂಸ್ಕೃತದಲ್ಲಿ ಹಲವು ಕೃತಿಗಳನ್ನೂ ರಚಿಸಿದ್ದಾರೆ. ಸಾಹಿತಿ, ವಿದ್ವಾಂಸ, ಪತ್ರಕರ್ತ, ಸಂಶೋಧಕ, ಅನುವಾದಕ, ಭಾಷಾಂತರಕಾರ, ಭಾಷ್ಯಕಾರ, ಕವಿ, ಪ್ರವಚನಕಾರ, ಉಪನ್ಯಾಸಕ ಹೀಗೆ ಬಹುವಿಧವಾಗಿ ಅಮೂಲ್ಯ ವಾಗ್ಮಿಯ ಕೊಡುಗೆ ಧಾರೆಯೆರೆದು ಉಡುಪಿಗೆ ಕೀರ್ತಿ ತಂದಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಗ್ರಂಥಾಲಯಕ್ಕೆ ಅವರ ಹೆಸರು ಇಡುವುದು ಸೂಕ್ತವೆಂದು ಸರಕಾರಕ್ಕೆ ಮನವಿ ಮಾಡಲಾಗಿದೆ.
-ರಘುಪತಿ ಭಟ್‌, ಶಾಸಕ

ಒಳಾಂಗಣ ವಿನ್ಯಾಸ
ಜಿಲ್ಲಾ ಕೇಂದ್ರ ಗ್ರಂಥಾಲಯದ ಒಳಾಂಗಣ ವಿನ್ಯಾಸ ಕಾಮಗಾರಿ ಪ್ರಾರಂಭವಾಗಿದೆ. ಮುಂದಿನ ತಿಂಗಳ ಅಂತ್ಯಕ್ಕೆ ಕಾಮಗಾರಿ ಸಂಪೂರ್ಣಗೊಳ್ಳುವ ಸಾಧ್ಯತೆ ಇದೆ.
-ನಳಿನಿ, ಜಿ.ಐ. ಮುಖ್ಯ ಗ್ರಂಥಾಲಯಧಿಕಾರಿ
ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.