ಅತ್ಯಾಚಾರಿಗಳ ಹೆಡೆಮುರಿ ಕಟ್ಟಿದ ಖಾಕಿ ಪಡೆಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ನಟ ಜಗ್ಗೇಶ್
Team Udayavani, Aug 28, 2021, 5:17 PM IST
ಬೆಂಗಳೂರು: ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ಸಿಬ್ಬಂದಿಗೆ ನವರಸ ನಾಯಕ ಜಗ್ಗೇಶ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಈ ಖಾಕಿ ತಂಡಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.
ಈ ವಿಷಯವನ್ನು ಟ್ವಿಟರ್ ಮೂಲಕ ತಿಳಿಸಿರುವ ಜಗ್ಗೇಶ್ ಅವರು, “ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. ನನ್ನ ರಾಜ್ಯದ ಪೊಲೀಸರ ಬಗ್ಗೆ ಹೆಮ್ಮೆ ಪಡುತ್ತೇನೆ. ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೋಲಿಸರಿಗೆ 1ಲಕ್ಷ ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್” ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಕಾಲೇಜು ವಿಧ್ಯಾರ್ಥಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು.
Am proud of my state police..
ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೋಲಿಸರಿಗೆ 1ಲಕ್ಷ ಬಹುಮಾನ!
ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ!ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್?❤— ನವರಸನಾಯಕ ಜಗ್ಗೇಶ್ (@Jaggesh2) August 28, 2021
ಇನ್ನು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ಕಳೆದ ಆ.24ರಂದು ಸಾಯಂಕಾಲ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸತತ 85 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಶನಿವಾರ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ತಮಿಳು ನಾಡಿನ ತಿರುಪುರ್ ಮೂಲದವರಾಗಿದ್ದು ಕೂಲಿ ಕಾರ್ಮಿಕರಾಗಿದ್ದು ಅವಿದ್ಯಾವಂತರು ಕೂಡ. ಚಾಲಕ, ಕಾರ್ಪೆಂಟರ್ ನಂತಹ ಕೂಲಿ ಕೆಲಸ ಮಾಡುತ್ತಿದ್ದರು. ಮೈಸೂರಿಗೆ ತರಕಾರಿ ತೆಗೆದುಕೊಂಡು ಮಂಡಿಗೆ ಬಂದು ಹೋಗುತ್ತಿದ್ದರು. ಹೀಗೆ ಮೊನ್ನೆ ಬಂದಿದ್ದವರು ಈ ಕುಕೃತ್ಯ ನಡೆಸಿದ್ದು ಅವರಲ್ಲಿ 17 ವರ್ಷದ ಒಬ್ಬ ಬಾಲ ಆರೋಪಿ ಕೂಡ ಇದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.